AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಶ್ರೀಲಂಕಾ ಆಲೌಟ್: ಫಾಲೋಆನ್ ಹೇರಿದ ಟೀಮ್ ಇಂಡಿಯಾ

India vs Sri Lanka 2nd Test: ಭಾರತ ಮತ್ತು ಶ್ರೀಲಂಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಕೊಲೊಂಬೋದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ನಡೆಯುತ್ತಿದೆ. ಎರಡು ಪಂದ್ಯಗಳ ಈ ಸರಣಿಯಲ್ಲಿ ಈಗಾಗಲೇ 1-0 ಮುನ್ನಡೆಯಲ್ಲಿರುವ ಭಾರತ ತಂಡ, ಈ ಪಂದ್ಯದಲ್ಲೂ ಜಯ ಸಾಧಿಸಿದರೆ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ.

IND vs SL: ಶ್ರೀಲಂಕಾ ಆಲೌಟ್: ಫಾಲೋಆನ್ ಹೇರಿದ ಟೀಮ್ ಇಂಡಿಯಾ
Team IndiaImage Credit source: BCCI
ಝಾಹಿರ್ ಯೂಸುಫ್
|

Updated on:Aug 27, 2026 | 7:38 AM

Share

ಟೀಮ್ ಇಂಡಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶ್ರೀಲಂಕಾ ತಂಡ 290 ರನ್‌ಗಳಿಗೆ ಆಲೌಟ್ ಆಗಿದೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್‌ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಮೊದಲ ಇನಿಂಗ್ಸ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 503 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡಕ್ಕೆ ಭಾರತೀಯ ಬೌಲರ್‌ಗಳು ಆರಂಭಿಕ ಆಘಾತ ನೀಡಿದರು. ಇದರ ಪರಿಣಾಮವಾಗಿ ಲಂಕಾ ಪಡೆ ಕೇವಲ 35 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಕಣಕ್ಕಿಳಿದ ಪಸಿಂದು ಸೂರ್ಯಬಂದರ 80 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.

ಇನ್ನು 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸೋನಾಲ್ ದಿನುಷಾ 162 ಎಸೆತಗಳಲ್ಲಿ 103 ರನ್‌ಗಳ ಭರ್ಜರಿ ಇನಿಂಗ್ಸ್ ಆಡಿದರು. ಈ ಶತಕದ ನೆರವಿನಿಂದ ಶ್ರೀಲಂಕಾ ತಂಡದ ಸ್ಕೋರ್ 250ರ ಗಡಿ ದಾಟಿತು. ಈ ಹಂತದಲ್ಲಿ ಬಿಗಿ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್‌ಗಳು ಸತತ ವಿಕೆಟ್ ಪಡೆದರು. ಇದರ ಪರಿಣಾಮವಾಗಿ ಶ್ರೀಲಂಕಾ ತಂಡ ತನ್ನ ಮೊದಲ ಇನಿಂಗ್ಸ್‌ನಲ್ಲಿ 290 ರನ್‌ಗಳಿಗೆ ಆಲೌಟ್ ಆಯಿತು.

ಟೀಮ್ ಇಂಡಿಯಾ ಪರ ಪ್ರಸಿದ್ಧ್ ಕೃಷ್ಣ  ಹಾಗೂ ಮಾನವ್ ಸುತಾರ್ ತಲಾ 3 ವಿಕೆಟ್ ಪಡೆದರೆ, ಸರಾಂಶ್ ಜೈನ್ 2 ವಿಕೆಟ್ ಕಬಳಿಸಿ ಮಿಂಚಿದರು.

ಫಾಲೋಆನ್ ಹೇರಿದ ಟೀಮ್ ಇಂಡಿಯಾ:

ಮೊದಲ ಇನಿಂಗ್ಸ್‌ನಲ್ಲಿ 213 ರನ್‌ಗಳ ಭರ್ಜರಿ ಮುನ್ನಡೆ ಪಡೆದ ಟೀಮ್ ಇಂಡಿಯಾ, ಇದೀಗ ಶ್ರೀಲಂಕಾ ತಂಡಕ್ಕೆ ಫಾಲೋಆನ್ ಹೇರಿದೆ. ಅದರಂತೆ ಲಂಕಾ ಪಡೆ ತನ್ನ ದ್ವಿತೀಯ ಇನಿಂಗ್ಸ್ ಆರಂಭಿಸಿದೆ. ಒಂದು ವೇಳೆ ಶ್ರೀಲಂಕಾ ತಂಡವನ್ನು ಎರಡನೇ ಇನಿಂಗ್ಸ್‌ನಲ್ಲಿ 213 ರನ್‌ಗಳ ಒಳಗಾಗಿ ಆಲೌಟ್ ಮಾಡಿದರೆ, ಭಾರತ ತಂಡ ಇನಿಂಗ್ಸ್ ಜಯ ಸಾಧಿಸಲಿದೆ.

ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್‌ನಲ್ಲಿ ‘ಫಾಲೋಆನ್’ ಎಂದರೇನು? ಇದರ ನಿಯಮಗಳೇನು?

ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಸರಾನ್ಶ್ ಜೈನ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಶ್ರೀಲಂಕಾ (ಪ್ಲೇಯಿಂಗ್ XI): ಲಹಿರು ಉದಾರ, ಕಮಿಲ್ ಮಿಶ್ರಾ, ಪಸಿಂದು ಸೂರಿಯಬಂಡಾರ, ಕಮಿಂದು ಮೆಂಡಿಸ್, ಧನಂಜಯ ಡಿ ಸಿಲ್ವಾ(ನಾಯಕ), ಸೋನಾಲ್ ದಿನುಶಾ, ನಿರೋಶನ್ ಡಿಕ್ವೆಲ್ಲಾ(ವಿಕೆಟ್ ಕೀಪರ್), ಕೇಶರ ನುವಾಂತ, ಪ್ರಭಾತ್ ಜಯಸೂರ್ಯ, ಲಹಿರು ಕುಮಾರ, ಅಸಿತ ಫೆರ್ನಾಂಡೊ.

Published On - 11:16 am, Wed, 26 August 26

Follow Us
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು