IND vs SL: ಕೊನೆಯ ಟಿ20 ಪಂದ್ಯಕ್ಕೆ ಭಾರತ ತಂಡದಲ್ಲಿ 4 ಬದಲಾವಣೆ
IND vs SL: ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಅದರಂತೆ ಶ್ರೀಲಂಕಾ ತಂಡದಲ್ಲಿ 1 ಬದಲಾವಣೆಯಾಗಿದ್ದರೆ, ಟೀಂ ಇಂಡಿಯಾದಲ್ಲಿ 4 ಬದಲಾವಣೆಗಳಾಗಿವೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಪಲ್ಲೆಕೆಲೆಯಲ್ಲಿ ಪ್ರಾರಂಭವಾಗಿದೆ. ನೂತನ ನಾಯಕ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈಗಾಗಲೇ ಸರಣಿ ಗೆದ್ದಿದ್ದು, ಇದೀಗ ಕೊನೆಯ ಪಂದ್ಯವನ್ನೂ ಗೆದ್ದು ಆತಿಥೇಯ ಶ್ರೀಲಂಕಾ ತಂಡಕ್ಕೆ ವೈಟ್ ವಾಶ್ ಮುಖಭಂಗ ನೀಡಲು ಎದುರು ನೋಡುತ್ತಿದೆ. ಇತ್ತ ಶ್ರೀಲಂಕಾ ತಂಡ ತವರಿನಲ್ಲಿ ಕ್ಲೀನ್ ಸ್ವೀಪ್ ತಪ್ಪಿಸಿಕೊಳ್ಳುವ ಸಲುವಾಗಿ ಶತಾಯಗತಾಯ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿದೆ. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಅದರಂತೆ ಶ್ರೀಲಂಕಾ ತಂಡದಲ್ಲಿ 1 ಬದಲಾವಣೆಯಾಗಿದ್ದರೆ, ಟೀಂ ಇಂಡಿಯಾದಲ್ಲಿ 4 ಬದಲಾವಣೆಗಳಾಗಿವೆ.
ನಾಲ್ವರು ಔಟ್, ನಾಲ್ವರು ಇನ್
ಮೇಲೆ ಹೇಳಿದಂತೆ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ನಾಲ್ಕು ಬದಲಾವಣೆ. ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಅಕ್ಸರ್ ಪಟೇಲ್, ರಿಷಬ್ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಬದಲಿಗೆ ಶುಭ್ಮನ್ ಗಿಲ್, ಖಲೀಲ್ ಅಹ್ಮದ್, ವಾಷಿಂಗ್ಟನ್ ಸುಂದರ್, ಶಿವಂ ದುಬೆಗೆ ಅವಕಾಶ ನೀಡಲಾಗಿದೆ.
🚨 Toss and Playing XI 🚨#TeamIndia will bat first in the third and final T20I 🙌
4️⃣ changes in tonight’s Playing XI 👍
Follow the Match ▶️ https://t.co/UYBWDRh1op#SLvIND pic.twitter.com/O6OxpsWamZ
— BCCI (@BCCI) July 30, 2024
ಉಭಯ ತಂಡಗಳು
ಭಾರತ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಖಲೀಲ್ ಅಹ್ಮದ್.
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಕುಸಲ್ ಪೆರೆರಾ, ಕಮಿಂದು ಮೆಂಡಿಸ್, ಚರಿತ್ ಅಸಲಂಕಾ (ನಾಯಕ), ಚಮಿಂದು ವಿಕ್ರಮಸಿಂಘೆ, ವನಿಂದು ಹಸರಂಗಾ, ರಮೇಶ್ ಮೆಂಡಿಸ್, ಮಹಿಷ್ ಟೀಕ್ಷಣ, ಮತಿಶ ಪತಿರಾನ, ಅಸಿತ ಫೆರ್ನಾಂಡೊ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:50 pm, Tue, 30 July 24