ಕ್ರೀಡಾ ಸಚಿವರಿಗೆ ಗೇಟ್​ಪಾಸ್! ಕ್ರಿಕೆಟ್​ಗೋಸ್ಕರ ಶ್ರೀಲಂಕಾದಲ್ಲಿ ಏನೇನೆಲ್ಲ ನಡೆಯುತ್ತಿದೆ ಗೊತ್ತಾ?

Sri Lanka Cricket: ಶ್ರೀಲಂಕಾದ ಕ್ರಿಕೆಟ್ ಮಂಡಳಿಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಿದ ನನ್ನನ್ನು ಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಕ್ರೀಡಾ ಸಚಿವರಿಗೆ ಗೇಟ್​ಪಾಸ್! ಕ್ರಿಕೆಟ್​ಗೋಸ್ಕರ ಶ್ರೀಲಂಕಾದಲ್ಲಿ ಏನೇನೆಲ್ಲ ನಡೆಯುತ್ತಿದೆ ಗೊತ್ತಾ?
ರೋಷನ್ ರಣಸಿಂಘೆ, ರನಿಲ್ ವಿಕ್ರಮಸಿಂಘೆ
Follow us
ಪೃಥ್ವಿಶಂಕರ
|

Updated on:Nov 27, 2023 | 6:26 PM

ಶ್ರೀಲಂಕಾದ ಕ್ರಿಕೆಟ್ ಮಂಡಳಿಯಲ್ಲಿನ (Sri Lanka Cricket Board) ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಿದ ನನ್ನನ್ನು ಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಅವರು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ (Roshan Ranasinghe) ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ರೋಷನ್ ಈ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ. ವಾರದ ಕ್ಯಾಬಿನೆಟ್ ಸಭೆಗೂ ಮುನ್ನ ರೋಷನ್ ರಣಸಿಂಘೆ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಶ್ರೀಲಂಕಾ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನನಗೆ ಜೀವಭಯವಿದೆ; ಕ್ರೀಡಾ ಸಚಿವ

ಸಚಿವ ಸ್ಥಾನದಿಂದ ವಜಾಗೊಳ್ಳುವ ಮೊದಲು ಅಧ್ಯಕ್ಷರಿಂದ ಇರುವ ಜೀವ ಬೆದರಿಕೆಯ ಬಗ್ಗೆ ಮಾತನಾಡಿದ್ದ ರೋಷನ್ ರಣಸಿಂಘೆ, ‘‘ಕ್ರಿಕೆಟ್ ಮಂಡಳಿಯಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆಗೊಳಿಸಿದ್ದ ನನ್ನನ್ನು ಹತ್ಯೆ ಮಾಡುವ ಸಂಚು ನಡೆಯುತ್ತಿದೆ. ಇದರಿಂದ ನಾನು ತುಂಬ ಭಯಭೀತನಾಗಿದ್ದೇನೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ನಿರ್ವಹಣೆಗೆ ಸಂಬಂಧಿಸಿದಂತೆ ಅಧ್ಯಕ್ಷ ವಿಕ್ರಮಸಿಂಘೆ ಹಾಗೂ ನನ್ನ ನಡುವೆ ತೀವ್ರ ಭಿನ್ನಾಭಿಪ್ರಾಯ ಉಂಟಾಗಿದೆ. ಒಂದು ವೇಳೆ ನಾನು ರಸ್ತೆಯಲ್ಲಿ ಹತನಾದರೆ ಅದಕ್ಕೆ ಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೇ ಮತ್ತು ಮುಖ್ಯಾಧಿಕಾರಿಗಳೇ ಹೊಣೆಯಾಗುತ್ತಾರೆ’’ ಎಂದು ಆರೋಪಿಸಿದ್ದರು. ಆದರೆ ಈ ಬಗ್ಗೆ ಅಧ್ಯಕ್ಷ ರನಿಲ್ ವಿಕ್ರಮಸಿಂಘೇ ಅವರಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದರೂ, ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ.

Breaking: ಶ್ರೀಲಂಕಾ ಕ್ರಿಕೆಟ್‌ನ ಸದಸ್ಯತ್ವ ರದ್ದುಗೊಳಿಸಿದ ಐಸಿಸಿ! ಕಾರಣವೇನು ಗೊತ್ತಾ?

ಕ್ರಿಕೆಟ್​ನಲ್ಲಿ ಸರ್ಕಾರದ ಹಸ್ತಕ್ಷೇಪ

ವಿಶ್ವ ಕ್ರಿಕೆಟ್​ನಲ್ಲಿ ತನ್ನದೇ ಛಾಪು ಮೂಡಿಸಿರುವ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಇತ್ತೀಚಿನ ದಿನಗಳಲ್ಲಿ ದಿವಾಳಿಯತ್ತ ಸಾಗಿದೆ. ಅದಕ್ಕೆ ಕಾರಣ ಮಂಡಳಿಯಲ್ಲಿ ಸರ್ಕಾರದ ಹಸ್ತಕ್ಷೇಪ. ವಾಸ್ತವವಾಗಿ ಏಕದಿನ ವಿಶ್ವಕಪ್‌ನಲ್ಲಿ ಲಂಕಾ ಕ್ರಿಕೆಟ್ ತಂಡ ಕಳಪೆ ಪ್ರದರ್ಶನ ನೀಡಿದ್ದ ಬಳಿಕ ಕ್ರೀಡಾ ಸಚಿವ ರೋಷನ್ ರಣಸಿಂಘೆ ಇಡೀ ಮಂಡಳಿಯನ್ನೇ ವಿಸರ್ಜನೆಗೊಳಿಸಿದ್ದರು. ಆ ಬಳಿಕ ಕ್ರಿಕೆಟ್​ನಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಗಮನಿಸಿದ ಐಸಿಸಿ ತಕ್ಷಣವೇ ಶ್ರೀಲಂಕಾ ಕ್ರಿಕೆಟ್ ಅನ್ನು ನಿಷೇಧಿಸಿತ್ತು.

ಏತನ್ಮಧ್ಯೆ, ಕ್ರಿಕೆಟ್ ಮಂಡಳಿಯ ವಜಾ ಕ್ರಮವನ್ನು ಹಿಂಪಡೆಯುವಂತೆ ಅಧ್ಯಕ್ಷ ರನಿಲ್ ವಿಕ್ರಮಸಿಂಘೇ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಸೂಚನೆ ನೀಡಿದ್ದರು. ಆದರೆ ಕ್ರೀಡಾ ಸಚಿವ ರೋಷನ್ ರಣಸಿಂಗ್ ಅಧ್ಯಕ್ಷರ ಸೂಚನೆಯನ್ನು ತಿರಸ್ಕರಿಸಿದ್ದರು. ಶ್ರೀಲಂಕಾ ಸಂಸತ್ತು ಕೂಡ ಕ್ರೀಡಾ ಸಚಿವರ ನಿರ್ಧಾರವನ್ನು ಬೆಂಬಲಿಸಿ ನಿರ್ಣಯವನ್ನು ಅಂಗೀಕರಿಸಿತ್ತು. ಆ ಬಳಿಕ ಕ್ರೀಡಾ ಸಚಿವರು ಹಾಗೂ ಅಧ್ಯಕ್ಷರ ನಡುವೆ ವೈಮನಸ್ಸು ಏರ್ಪಟ್ಟಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:23 pm, Mon, 27 November 23

ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ