110 ರನ್​ಗಳ ಗುರಿ… 94 ರನ್​ಗಳಿಸಿ ಗೆದ್ದ TKR​!

Caribbean Premier League 2026: ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ಶುಭಾರಂಭ ಮಾಡಿದೆ. ಈ ಟೂರ್ನಿಯ ದ್ವಿತೀಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 20 ಓವರ್​ಗಳಲ್ಲಿ 109 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡ 15 ಓವರ್​ಗಳಲ್ಲಿ 94 ರನ್​ಗಳಿಸಿದರೂ ವಿಜಯವನ್ನು ತಮ್ಮದಾಗಿಸಿಕೊಂಡಿದ್ದಾರೆ.

110 ರನ್​ಗಳ ಗುರಿ... 94 ರನ್​ಗಳಿಸಿ ಗೆದ್ದ TKR​!
TKR
Image Credit source: CPL

Updated on: Aug 09, 2026 | 12:57 PM

ಕೆರಿಬಿಯನ್ ಪ್ರೀಮಿಯರ್ ಲೀಗ್​ನ (CPL 2026) 2ನೇ ಪಂದ್ಯದಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ (TKR) ತಂಡ ಭರ್ಜರಿ ಜಯ ಸಾಧಿಸಿದೆ. ಅದು ಕೂಡ ಕೇವಲ 94 ರನ್​ಗಳಿಸುವ ಮೂಲಕ. ಕಿಂಗ್ಸ್​ಟೌನ್​ನ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಮತ್ತು ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ನಾಯಕ ಅಕೀಲ್ ಹೊಸೈನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ. ಟಿಕೆಆರ್​ ಬೌಲರ್​ಗಳ ಮಾರಕ ದಾಳಿ ಮುಂದೆ ರನ್​ಗಳಿಸಲು ಪರದಾಡಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್  20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 109 ರನ್​ಗಳಿಸಲಷ್ಟೇ ಶಕ್ತವಾಯಿತು.

ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡದ ಪರ ಕೆವಿನ್ ವಿಕಾಮ್ (38 ರನ್, 44 ಎಸೆತ) ಏಕಾಂಗಿ ಹೋರಾಟ ನಡೆಸಿದರೆ, ಉಳಿದ ಆಟಗಾರರು ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಟ್ರಿನ್‌ಬಾಗೊ ಪರ ಮಾಂತ್ರಿಕ ಬೌಲಿಂಗ್ ಪ್ರದರ್ಶಿಸಿದ ಸುನಿಲ್ ನರೈನ್ ಕೇವಲ 7 ರನ್ ನೀಡಿ 3 ಪ್ರಮುಖ ವಿಕೆಟ್ ಉರುಳಿಸಿದರೆ, ಟೆರೆನ್ಸ್ ಹಿಂಡ್ಸ್ 33 ರನ್‌ಗಳಿಗೆ 3 ವಿಕೆಟ್ ಪಡೆದು ಸಾಥ್ ನೀಡಿದರು.

ಮಳೆ ತಂದ ಮುನ್ನಡೆ, ಟಿಕೆಆರ್​​ಗೆ ಜಯ:

110 ರನ್​ಗಳ ಸುಲಭ ಗುರಿ ಬೆನ್ನಟ್ಟಿದ ಟ್ರಿನ್‌ಬಾಗೊ ನೈಟ್ ರೈಡರ್ಸ್ ಉತ್ತಮ ಆರಂಭ ಪಡೆಯಿತು. ಮ್ಯಾಥ್ಯೂ ಬ್ರೀಟ್ಝ್​ಕೆ ಅಜೇಯ 35 ರನ್ ಗಳಿಸಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು. ಈ ಮೂಲಕ ಟಿಕೆಆರ್​ ತಂಡವು 15 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿದ್ದಾಗ ಪಂದ್ಯಕ್ಕೆ ಭಾರೀ ಮಳೆ ಅಡ್ಡಿಪಡಿಸಿತು.

ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. ಅಲ್ಲದೆ ಫಲಿತಾಂಶ ನಿರ್ಧಾರಕ್ಕಾಗಿ ಡಿಎಲ್​ಎಸ್​ ನಿಯಮದ ಮೊರೆ ಹೋಗಲಾಯಿತು. ಈ ವೇಳೆ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ನಿಗದಿತ ಪಾರ್ ಸ್ಕೋರ್‌ಗಿಂತ 19 ರನ್‌ಗಳ ಮುನ್ನಡೆಯಲ್ಲಿದ್ದ ಕಾರಣ ಅಧಿಕೃತವಾಗಿ ವಿಜೇತರೆಂದು ಘೋಷಿಸಲಾಯಿತು.

ಅಂದರೆ 110 ರನ್​ಗಳ ಗುರಿ ಪಡೆದಿದ್ದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ಪಂದ್ಯ ಸ್ಥಗಿತಗೊಂಡಾಗ 94 ರನ್​ಗಳಿಸಿದ್ದರೂ ಡಿಎಲ್​ಎಸ್ ನಿಯಮದ ಪ್ರಕಾರ ವಿಜಯಿಯಾಗಿ ಹೊರಹೊಮ್ಮಿದರು. ಈ ಮೂಲಕ ಟ್ರಿನ್‌ಬಾಗೊ ನೈಟ್ ರೈಡರ್ಸ್ ನೈಟ್ ರೈಡರ್ಸ್ ಕೆರಿಬಿಯನ್ ಪ್ರೀಮಿಯರ್ ಲೀಗ್​ನ 14ನೇ ಆವೃತ್ತಿಯಲ್ಲಿ ಶುಭಾರಂಭ ಮಾಡಿದೆ.

YouTube video player

ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪ್ಲೇಯಿಂಗ್ 11: ಜಾನ್ಸನ್ ಚಾರ್ಲ್ಸ್ , ಆಂಡ್ರೆ ಫ್ಲೆಚರ್ (ವಿಕೆಟ್ ಕೀಪರ್ ), ಕೈಲ್ ಮೇಯರ್ಸ್ , ಅಲಿಕ್ ಅಥನಾಝ್ , ಜೇಸನ್ ಹೋಲ್ಡರ್ (ನಾಯಕ) , ಕೆವಿನ್ ವಿಕ್ಹ್ಯಾಮ್ , ನವೀನ್ ಬಿದೈಸಿ , ಆಶ್ಮೀದ್ ನೆಡ್ , ಓಬೆಡ್ ಮೆಕಾಯ್ , ಸೌರಭ್ ನೇತ್ರವಲ್ಕರ್ , ವಕಾರ್ ಸಲಾಂಖೈಲ್.

ಇದನ್ನೂ ಓದಿ: ಭಾರತ ಟೆಸ್ಟ್ ತಂಡದ ಐವರು ಆಟಗಾರರು ಗಾಯಾಳು!

ಟ್ರಿನ್‌ಬಾಗೊ ನೈಟ್ ರೈಡರ್ಸ್ ಪ್ಲೇಯಿಂಗ್ 11: ಅಲೆಕ್ಸ್ ಹೇಲ್ಸ್ , ಕಾಲಿನ್ ಮನ್ರೋ , ಮ್ಯಾಥ್ಯೂ ಟ್ರಂಪ್ , ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಮ್ಯಾಥ್ಯೂ ಬ್ರೀಟ್ಝ್​​ಕೆ, ಟೆರೆನ್ಸ್ ಹಿಂದ್ಸ್ , ಅಕೀಲ್ ಹೊಸೈನ್ (ನಾಯಕ) , ಸುನಿಲ್ ನರೈನ್ , ಡೊಮಿನಿಕ್ ಡ್ರೇಕ್ಸ್ , ಜೈದ್ ಗೂಲಿ , ಡೆಕ್ಸ್ಟರ್ ಸ್ವೀನ್.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us