AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBL: 7 ಸಿಕ್ಸರ್, 10 ಬೌಂಡರಿ..! ಟಿ20 ಯಲ್ಲಿ ಸ್ಫೋಟಕ ಶತಕ ಸಿಡಿಸಿದ ಸ್ಟೀವ್ ಸ್ಮಿತ್

Steve Smith's Century in BBL: ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಸಿಕ್ಸರ್ಸ್ ಮತ್ತು ಪರ್ತ್ ಸ್ಕಾರ್ಚರ್ಸ್ ನಡುವಿನ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಅಜೇಯ ಶತಕ (121 ರನ್) ಬಾರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಕೇವಲ 58 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದ ಸ್ಮಿತ್, ಬಿಗ್ ಬ್ಯಾಷ್ ಲೀಗ್‌ನಲ್ಲಿ 32 ಪಂದ್ಯಗಳಲ್ಲಿ ಮೂರು ಶತಕ ಬಾರಿಸಿದ ದಾಖಲೆಯನ್ನು ಸೃಷ್ಟಿಸಿದ್ದಾರೆ.

BBL: 7 ಸಿಕ್ಸರ್, 10 ಬೌಂಡರಿ..! ಟಿ20 ಯಲ್ಲಿ ಸ್ಫೋಟಕ ಶತಕ ಸಿಡಿಸಿದ ಸ್ಟೀವ್ ಸ್ಮಿತ್
ಸ್ಟೀವ್ ಸ್ಮಿತ್
ಪೃಥ್ವಿಶಂಕರ
|

Updated on: Jan 11, 2025 | 3:33 PM

Share

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ 30 ನೇ ಪಂದ್ಯದಲ್ಲಿ, ಸಿಡ್ನಿ ಸಿಕ್ಸರ್ಸ್ ಮತ್ತು ಪರ್ತ್ ಸ್ಕಾರ್ಚರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಕಣಕ್ಕಿಳಿದಿದ್ದ ಸ್ಟೀವ್ ಸ್ಮಿತ್ ಸ್ಮರಣೀಯ ಇನ್ನಿಂಗ್ಸ್ ಆಡಿದರು. ಇತ್ತೀಚೆಗೆ ನಡೆದಿದ್ದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಮಿಶ್ರ ಪ್ರದರ್ಶನ ನೀಡಿದ್ದ ಸ್ಟೀವ್ ಸ್ಮಿತ್, ಇದೀಗ ಬಿಗ್ ಬ್ಯಾಷ್ ಲೀಗ್‌ನಲ್ಲಿ ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪರ್ತ್ ಸ್ಕಾರ್ಚರ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸ್ಮಿತ್ ಶತಕದ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯನ್ನು ಮಾಡಿದರು. ವಿಶೇಷವೆಂದರೆ ಈ ಪಂದ್ಯದಲ್ಲಿ ಓಪನಿಂಗ್ ಮಾಡಲು ಬಂದ ಅವರು ಅಜೇಯರಾಗಿ ಪೆವಿಲಿಯನ್​ಗೆ ಮರಳಿದರು.

ಐತಿಹಾಸಿಕ ಶತಕ ಬಾರಿಸಿದ ಸ್ಟೀವ್ ಸ್ಮಿತ್

ಪರ್ತ್ ವಿರುದ್ಧದ ಈ ಪಂದ್ಯದಲ್ಲಿ ಸ್ಟೀವ್ ಸ್ಮಿತ್ 7 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ 121 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು. ಕೇವಲ 58 ಎಸೆತಗಳಲ್ಲಿ ಸ್ಟೀವ್ ಸ್ಮಿತ್ ತಮ್ಮ ಶತಕವನ್ನು ಪೂರೈಸಿದರು. ಇದು ಅವರ ಟಿ20 ವೃತ್ತಿಜೀವನದ ನಾಲ್ಕನೇ ಶತಕವಾಗಿದ್ದರೆ, ಬಿಗ್ ಬ್ಯಾಷ್ ಲೀಗ್​ನಲ್ಲಿ ಇದು ಅವರ ಮೂರನೇ ಶತಕವಾಗಿದೆ.

ಸ್ಟೀವ್ ಸ್ಮಿತ್ ಬಿಗ್ ಬ್ಯಾಷ್ ಲೀಗ್‌ನಲ್ಲಿ ಇದುವರೆಗೆ ಕೇವಲ 32 ಪಂದ್ಯಗಳನ್ನು ಆಡಿದ್ದು, ಅತಿ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆಯನ್ನು ಸರಿಗಟ್ಟಿದ್ದಾರೆ. ಇವರ ಹೊರತಾಗಿ ಬೆನ್ ಮೆಕ್‌ಡರ್ಮಾಟ್ ಮಾತ್ರ ಈ ಲೀಗ್‌ನಲ್ಲಿ 3 ಶತಕ ಸಿಡಿಸಿದ್ದಾರೆ. ಆದರೆ ಬೆನ್ ಮೆಕ್‌ಡರ್ಮೊಟ್ ಅವರ ಬಿಗ್ ಬ್ಯಾಷ್ ಲೀಗ್ ವೃತ್ತಿಜೀವನವು 100 ಪಂದ್ಯಗಳನ್ನು ಹೊಂದಿದೆ. ಅಂದರೆ ಸ್ಟೀವ್ ಸ್ಮಿತ್ ಬೆನ್ ಮೆಕ್‌ಡರ್ಮಾಟ್‌ಗಿಂತ ಕಡಿಮೆ ಪಂದ್ಯಗಳನ್ನು ಆಡಿದ್ದಾರೆ. ಇದಲ್ಲದೇ ಸಿಡ್ನಿ ಸಿಕ್ಸರ್ಸ್ ತಂಡದ ಪರ ಶತಕ ಸಿಡಿಸಿದ ಏಕೈಕ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್.

ಕಳೆದ 7 ಇನ್ನಿಂಗ್ಸ್‌ಗಳಲ್ಲಿ 3 ಶತಕ

ಬಿಗ್ ಬ್ಯಾಷ್ ಲೀಗ್‌ನಲ್ಲಿ ಸ್ಟೀವ್ ಸ್ಮಿತ್ ಅವರ ಪ್ರದರ್ಶನ ಅಮೋಘವಾಗಿದೆ. ಈ ಲೀಗ್‌ನ ಕೊನೆಯ 7 ಇನ್ನಿಂಗ್ಸ್‌ಗಳಲ್ಲಿ ಅವರು 3 ಶತಕ ಮತ್ತು 2 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದಲ್ಲದೇ ಕಳೆದ 8 ಇನ್ನಿಂಗ್ಸ್‌ಗಳಲ್ಲಿ 88ರ ಸರಾಸರಿಯಲ್ಲಿ ಮತ್ತು 173.11 ರ ಸ್ಟ್ರೈಕ್ ರೇಟ್​ನಲ್ಲಿ 528 ರನ್ ಗಳಿಸಿದ್ದಾರೆ.

ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೆ.. ಮೊದಲು ಬ್ಯಾಟಿಂಗ್ ಮಾಡಿದ ಸಿಡ್ನಿ ತಂಡವು ಪರ್ತ್ ವಿರುದ್ಧ 20 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 222 ರನ್‌ಗಳ ದೊಡ್ಡ ಸ್ಕೋರ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪರ್ತ್ ಸ್ಕಾರ್ಚರ್ಸ್ ತಂಡ ಕೂಡ ಗೆಲುವಿಗಾಗಿ ಹೋರಾಟ ನೀಡಿತ್ತಾದರೂ ಕೇವಲ 14 ರನ್​ಗಳಿಂದ ಸೊಲೊಪ್ಪಿಕೊಳ್ಳಬೇಕಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್