AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ಕ್ಯಾಚ್​ಗಳ ಮೂಲಕ ದಾಖಲೆ ಬರೆದ ಸ್ಟೀವ್ ಸ್ಮಿತ್

Ashes 2023: ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ (118) ಭರ್ಜರಿ ಶತಕ ಸಿಡಿಸಿದ್ದರು.

Ashes 2023: ಕ್ಯಾಚ್​ಗಳ ಮೂಲಕ ದಾಖಲೆ ಬರೆದ ಸ್ಟೀವ್ ಸ್ಮಿತ್
Steve Smith Catch (ಸಾಂದರ್ಭಿಕ ಚಿತ್ರ)
TV9 Web
| Updated By: ಝಾಹಿರ್ ಯೂಸುಫ್|

Updated on: Jul 08, 2023 | 3:03 PM

Share

Ashes 2023: ಲೀಡ್ಸ್​ನಲ್ಲಿ ನಡೆಯುತ್ತಿರುವ ಆತಿಥೇಯ ಇಂಗ್ಲೆಂಡ್ (England) ವಿರುದ್ಧದ ಆ್ಯಶಸ್ ಸರಣಿಯ 3ನೇ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿಯುವ ಮೂಲಕ ಸ್ಟೀವ್ ಸ್ಮಿತ್ (Steve Smith) ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಆಸ್ಟ್ರೇಲಿಯಾ ಲೆಜೆಂಡ್ ಇಯಾನ್ ಬಾಥಂ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಮೊದಲ ಇನಿಂಗ್ಸ್​ನಲ್ಲಿ ಸ್ಟೀವ್ ಸ್ಮಿತ್ ಒಟ್ಟು 5 ಕ್ಯಾಚ್​ಗಳನ್ನು ಹಿಡಿದಿದ್ದರು. ಇದರೊಂದಿಗೆ ಆ್ಯಶಸ್ ಸರಣಿಯಲ್ಲಿ ಅತ್ಯಧಿಕ ಕ್ಯಾಚ್​ಗಳನ್ನು ಹಿಡಿದ ವಿಶೇಷ ದಾಖಲೆಯೊಂದು ಸ್ಮಿತ್ ಹೆಸರಿಗೆ ಸೇರ್ಪಡೆಯಾಯಿತು.

ಈ ಪಟ್ಟಿಯಲ್ಲಿ 62 ಇನಿಂಗ್ಸ್​ಗಳಲ್ಲಿ 54 ಕ್ಯಾಚ್​ಗಳನ್ನು ಹಿಡಿದ ಆಸ್ಟ್ರೇಲಿಯಾದ ಮಾಜಿ ಆಟಗಾರ ಇಯಾನ್ ಬಾಥಂ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 65 ಇನಿಂಗ್ಸ್​ಗಳ ಮೂಲಕ ಸ್ಟೀವ್ ಸ್ಮಿತ್ ಕೂಡ 54 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಬಾಥಂ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇನ್ನು ಟೆಸ್ಟ್ ಇನಿಂಗ್ಸ್​ವೊಂದರಲ್ಲಿ ಅತ್ಯಧಿಕ ಬಾರಿ 4 ಕ್ಕಿಂತ ಹೆಚ್ಚಿನ ಕ್ಯಾಚ್​ಗಳನ್ನು ಹಿಡಿದ ವಿಶೇಷ ದಾಖಲೆ ಒಂದು ಸ್ಟೀವ್​ ಸ್ಮಿತ್ ಪಾಲಾಗಿದೆ. ಸ್ಮಿತ್ ಇದುವರೆಗೆ 4 ಬಾರಿ ಇನಿಂಗ್ಸ್​ವೊಂದರಲ್ಲಿ 4 ಕ್ಕಿಂತ ಹೆಚ್ಚಿನ ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ಮೊದಲ ಆಸ್ಟ್ರೇಲಿಯನ್ ಫೀಲ್ಡರ್ ಎಂಬ ಹೆಗ್ಗಳಿಕೆಗೂ ಸ್ಮಿತ್ ಪಾತ್ರರಾಗಿರುವುದು ವಿಶೇಷ.

ರೋಚಕ ಪೈಪೋಟಿಯತ್ತ ಮೂರನೇ ಟೆಸ್ಟ್:

ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ (118) ಭರ್ಜರಿ ಶತಕ ಸಿಡಿಸಿದ್ದರು. ಇದಾಗ್ಯೂ ಮಾರ್ಕ್​ ವುಡ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 263 ರನ್​ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಮಾರ್ಕ್​ ವುಡ್ 5 ವಿಕೆಟ್ ಕಬಳಿಸಿ ಮಿಂಚಿದರು.

ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಪ್ಯಾಟ್ ಕಮಿನ್ಸ್ ಎಸೆತಗಳು ಮಾರಕವಾಗಿ ಪರಿಣಮಿಸಿತು. ಆದರೆ ಕೆಲ ಕ್ರಮಾಂಕದಲ್ಲಿ 80 ರನ್​ ಬಾರಿಸುವ ಮೂಲಕ ಬೆನ್ ಸ್ಟೋಕ್ಸ್ ತಂಡಕ್ಕೆ ಆಸರೆಯಾದರು. ಆದರೆ ಕಮಿನ್ಸ್ ಕರಾರುವಾಕ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಮೊದಲ ಇನಿಂಗ್ಸ್​ ಅನ್ನು 237 ರನ್​ಗಳಿಗೆ ಅಂತ್ಯಗೊಳಿಸಿತು. ಆಸ್ಟ್ರೇಲಿಯಾ ಪರ ಪ್ಯಾಟ್ ಕಮಿನ್ಸ್ 6 ವಿಕೆಟ್ ಉರುಳಿಸಿದರು.

ಇದನ್ನೂ ಓದಿ: Steve Smith: ನೂರನೇ ಪಂದ್ಯದಲ್ಲಿ ದಾಖಲೆ ಬರೆದ ಸ್ಟೀವ್ ಸ್ಮಿತ್

ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 47 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 116 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಷ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ