AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Steve Smith: ವಿಶೇಷ ಸಾಧನೆಯ ಹೊಸ್ತಿಲಲ್ಲಿ ಸ್ಟೀವ್ ಸ್ಮಿತ್

Ashes 2023: ಲೀಡ್ಸ್​ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯವು ಆತಿಥೇಯ ಇಂಗ್ಲೆಂಡ್ ಪಾಲಿಗೆ ನಿರ್ಣಾಯಕ ಪಂದ್ಯ. ಏಕೆಂದರೆ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ.

Steve Smith: ವಿಶೇಷ ಸಾಧನೆಯ ಹೊಸ್ತಿಲಲ್ಲಿ ಸ್ಟೀವ್ ಸ್ಮಿತ್
Steve Smith
TV9 Web
| Edited By: |

Updated on: Jul 05, 2023 | 4:07 PM

Share

Ashes 2023: ಆ್ಯಶಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ (England) ಹಾಗೂ ಆಸ್ಟ್ರೇಲಿಯಾ (Australia) ತಂಡಗಳು ಸಜ್ಜಾಗುತ್ತಿವೆ. ಜುಲೈ 6 ರಿಂದ ಲೀಡ್ಸ್​ನ ಹೆಡಿಂಗ್ಲಿ ಮೈದಾನದಲ್ಲಿ ಶುರುವಾಗಲಿರುವ ಈ ಮ್ಯಾಚ್ ಆಸೀಸ್ ತಂಡದ ಉಪನಾಯಕ ಸ್ಟೀವ್ ಸ್ಮಿತ್ (Steve Smith) ಪಾಲಿಗೆ ವಿಶೇಷ ಪಂದ್ಯ. ಅಂದರೆ ಹೆಡಿಂಗ್ಲಿ ಮೈದಾನದಲ್ಲಿ ಕಣಕ್ಕಿಳಿಯುವ ಮೂಲಕ ಸ್ಮಿತ್ ಆಸ್ಟ್ರೇಲಿಯಾ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

ಈಗಾಗಲೇ 99 ಟೆಸ್ಟ್ ಪಂದ್ಯಗಳನ್ನಾಡಿರುವ ಸ್ಮಿತ್ 175 ಇನಿಂಗ್ಸ್​ಗಳಿಂದ ಒಟ್ಟು 9113 ರನ್ ಕಲೆಹಾಕಿದ್ದಾರೆ. ಈ ವೇಳೆ 32 ಶತಕ ಹಾಗೂ 37 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಇದೀಗ ಆ್ಯಶಸ್ ಸರಣಿಯ ಮೂರನೇ ಪಂದ್ಯದ ಮೂಲಕ ಆಸ್ಟ್ರೇಲಿಯಾ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ 14ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.  ಇದಕ್ಕೂ ಮುನ್ನ ಈ ಸಾಧನೆ ಮಾಡಿದ ಆಸ್ಟ್ರೇಲಿಯಾ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.

  1. – ರಿಕಿ ಪಾಂಟಿಂಗ್- 168 ಪಂದ್ಯಗಳು
  2. – ಸ್ಟೀವ್ ವಾ- 168 ಪಂದ್ಯಗಳು
  3. – ಅಲನ್ ಬಾರ್ಡರ್- 156 ಪಂದ್ಯಗಳು
  4. – ಶೇನ್ ವಾರ್ನ್- 145 ಪಂದ್ಯಗಳು
  5. – ಮಾರ್ಕ್ ವಾ- 128 ಪಂದ್ಯಗಳು
  6. – ನಾಥನ್ ಲಿಯಾನ್- 122 ಪಂದ್ಯಗಳು
  7. – ಇಯಾನ್ ಹೀಲಿ- 119 ಪಂದ್ಯಗಳು
  8. – ಮೈಕಲ್ ಕ್ಲಾರ್ಕ್​- 115 ಪಂದ್ಯಗಳು
  9. – ಡೇವಿಡ್ ಬೂನ್- 107 ಪಂದ್ಯಗಳು
  10. – ಡೇವಿಡ್ ವಾರ್ನರ್- 106 ಪಂದ್ಯಗಳು
  11. – ಜಸ್ಟಿನ್ ಲ್ಯಾಂಗರ್- 105 ಪಂದ್ಯಗಳು
  12. – ಮಾರ್ಕ್ ಟೇಲರ್- 104 ಪಂದ್ಯಗಳು
  13. – ಮ್ಯಾಥ್ಯೂ ಹೇಡನ್- 103 ಪಂದ್ಯಗಳು

ಇಂಗ್ಲೆಂಡ್ ಪಾಲಿಗೆ ನಿರ್ಣಾಯಕ ಪಂದ್ಯ:

ಲೀಡ್ಸ್​ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯವು ಆತಿಥೇಯ ಇಂಗ್ಲೆಂಡ್ ಪಾಲಿಗೆ ನಿರ್ಣಾಯಕ ಪಂದ್ಯ. ಏಕೆಂದರೆ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಪ್ಯಾಟ್ ಕಮಿನ್ಸ್ ಪಡೆ 2 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು.

ಇನ್ನು ಲಾರ್ಡ್ಸ್​ ಮೈದಾನದಲ್ಲಿ ನಡೆದ 2ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 43 ರನ್​ಗಳಿಂದ ಸೋಲೊಪ್ಪಿಕೊಂಡಿತು. ಇದೀಗ 2-0 ಅಂತರದಿಂದ ಮುನ್ನಡೆ ಸಾಧಿಸಿರುವ ಆಸ್ಟ್ರೇಲಿಯಾ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿ ವಶವಾಗಲಿದೆ. ಹೀಗಾಗಿ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಲು 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲ್ಲಬೇಕು ಅಥವಾ ಡ್ರಾ ಮಾಡಿಕೊಳ್ಳಬೇಕು. ಹೀಗಾಗಿ ಹೆಡಿಂಗ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೋನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಮಾರ್ಷ್, ಸ್ಕಾಟ್ ಬೋಲ್ಯಾಂಡ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಜಿಮ್ಮಿ ಪೀರ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್.

ಇದನ್ನೂ ಓದಿ: Steve Smith: ಭರ್ಜರಿ ಸೆಂಚುರಿಯೊಂದಿಗೆ 7 ದಾಖಲೆ ಬರೆದ ಸ್ಟೀವ್ ಸ್ಮಿತ್

ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಜೇಮ್ಸ್ ಅ್ಯಂಡರ್ಸನ್, ಜಾನಿ ಬೈರ್‌ಸ್ಟೋವ್ , ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಡಾನ್ ಲಾರೆನ್ಸ್, ಮೊಯಿನ್ ಅಲಿ, ಒಲಿ ಪೋಪ್, ಒಲ್ಲಿ ರಾಬಿನ್ಸನ್, ಜೋ ರೂಟ್, ಜೋಶ್ ಟಂಗ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.