AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಸ್ಟೀವ್ ಸ್ಮಿತ್

Steve Smith Retirement: ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಪರ ಈವರೆಗೆ 169 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 153 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 12 ಶತಕ ಹಾಗೂ 35 ಅರ್ಧಶತಕಗಳೊಂದಿಗೆ ಒಟ್ಟು 5727 ರನ್ ಕಲೆಹಾಕಿದ್ದಾರೆ. ಅಲ್ಲದೆ 2015 ಮತ್ತು 2023ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದರು.

ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಸ್ಟೀವ್ ಸ್ಮಿತ್
Steve Smith
ಝಾಹಿರ್ ಯೂಸುಫ್
|

Updated on:Mar 06, 2025 | 7:36 AM

Share

ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಹಂಗಾಮಿ ನಾಯಕರಾಗಿ ಕಾಣಿಸಿಕೊಂಡಿದ್ದ ಸ್ಮಿತ್ ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 71 ರನ್ ಬಾರಿಸಿ ಮಿಂಚಿದ್ದರು. ಇದಾಗ್ಯೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಿರಲಿಲ್ಲ. ಈ ಸೋಲಿನ ಬೆನ್ನಲ್ಲೇ 35 ವರ್ಷದ ಸ್ಮಿತ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಸ್ಮಿತ್ ಕೇವಲ ಬ್ಯಾಟರ್ ಆಗಿ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಗಾಯದ ಕಾರಣ ಟೂರ್ನಿಯಿಂದ ಹಿಂದೆ ಸರಿದ ಹಿನ್ನಲೆ ಸ್ಮಿತ್ ಅವರಿಗೆ ನಾಯಕತ್ವ ನೀಡಲಾಗಿತ್ತು. ಅದರಂತೆ ಸೆಮಿಫೈನಲ್​ವರೆಗೆ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದ ಸ್ಮಿತ್ ಇದೀಗ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಆಸ್ಟ್ರೇಲಿಯಾ ಪರ 170 ಏಕದಿನ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 155 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಶತಕ ಹಾಗೂ 35 ಅರ್ಧಶತಕಗಳೊಂದಿಗೆ ಒಟ್ಟು 5800 ರನ್ ಕಲೆಹಾಕಿದ್ದಾರೆ. ಇನ್ನು ಸ್ಮಿತ್ ಅವರನ್ನು ಕಳೆದ ಟಿ20 ವಿಶ್ವಕಪ್ ವೇಳೆ ಆಯ್ಕೆಗೆ ಪರಿಗಣಿಸಲಾಗಿಲ್ಲ. ಇದಾಗ್ಯೂ ಅವರು ಟಿ20 ಮತ್ತು ಟೆಸ್ಟ್ ತಂಡಗಳಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಸ್ಮಿತ್ ಆಸ್ಟ್ರೇಲಿಯಾ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇನ್ನು ನಿವೃತ್ತಿ ಬಗ್ಗೆ ಮಾತನಾಡಿರುವ ಸ್ಟೀವ್ ಸ್ಮಿತ್, ಇದೊಂದು ಅದ್ಭುತ ಪ್ರಯಾಣವಾಗಿತ್ತು. ನಾನು ಪ್ರತಿ ನಿಮಿಷವನ್ನು ಆನಂದಿಸಿದ್ದೇನೆ. ಅಲ್ಲಿ ಹಲವು ಅದ್ಭುತ ಕ್ಷಣಗಳು ಮತ್ತು ಅದ್ಭುತ ನೆನಪುಗಳಿವೆ. ಎರಡು ವಿಶ್ವಕಪ್ ಗೆಲ್ಲುವುದು ಒಂದು ದೊಡ್ಡ ಸಾಧನೆ. ಈ ಪಯಣದಲ್ಲಿ ತಂಡದ ಅನೇಕ ಉತ್ತಮ ಸದಸ್ಯರು ಜೊತೆಗಿದ್ದರು. 2027 ರ ಏಕದಿನ ವಿಶ್ವಕಪ್‌ಗೆ ತಯಾರಿ ನಡೆಸಲು ಈಗ ಉತ್ತಮ ಅವಕಾಶ. ಆದ್ದರಿಂದ ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ಹೀಗಾಗಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿರುವುದಾಗಿ ಸ್ಟೀವನ್ ಪೀಟರ್ ಡೆವೆರೆಕ್ಸ್ ಸ್ಮಿತ್ (ಸ್ಟೀವ್ ಸ್ಮಿತ್) ತಿಳಿಸಿದ್ದಾರೆ.

ಇದನ್ನೂ ಓದಿ: Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಸ್ಟೀವ್ ಸ್ಮಿತ್ ಸಾಧನೆ:

  • 2 ಬಾರಿ ಏಕದಿನ ವಿಶ್ವಕಪ್ ವಿಜೇತ.
  • ಏಕದಿನ ಕ್ರಿಕೆಟ್​ನಲ್ಲಿ 5800+ ರನ್ಸ್.
  • 12 ಶತಕಗಳು
  • 35 ಅರ್ಧಶತಕಗಳು
  • ನಾಯಕತ್ವದಲ್ಲಿ 32 ಗೆಲುವುಗಳು.
  • ನಾಕೌಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಪರ ಅತಿ ಹೆಚ್ಚು 50+ ಸ್ಕೋರ್‌ಗಳು
  • ಸತತ 61 ಎಸೆತಗಳಲ್ಲಿ ಭಾರತದ ವಿರುದ್ಧ ಶತಕಗಳು
  • 2015ರ ವಿಶ್ವಕಪ್ ಗೆಲುವಿನ ರೂವಾರಿ.

Published On - 12:13 pm, Wed, 5 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ