ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಸ್ಟೀವ್ ಸ್ಮಿತ್ (Steve Smith) ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನಾಗಿ ಟ್ರಾವಿಸ್ ಹೆಡ್ ಆಯ್ಕೆಯಾಗಿದ್ದಾರೆ. ನಾಯಕ ಪ್ಯಾಟ್ ಕಮಿನ್ಸ್ ಈ ಸರಣಿಯಿಂದ ವಿಶ್ರಾಂತಿ ಪಡೆದಿದ್ದು, ಹೀಗಾಗಿ ಸ್ಮಿತ್ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ. ಅಷ್ಟೇ ಅಲ್ಲದೆ ಈ ಸರಣಿಯಿಂದ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್‌ವುಡ್ ಹಾಗೂ ಮಿಚೆಲ್ ಮಾರ್ಷ್ ಕೂಡ ಹೊರಗುಳಿದಿದ್ದಾರೆ. ಈ ಮೂವರ ಅನುಪಸ್ಥಿತಿಯಲ್ಲಿ ಶಾನ್ ಅಬಾಟ್, ಆರೋನ್ ಹಾರ್ಡಿ ಹಾಗೂ ಲಾನ್ಸ್ ಮೋರಿಸ್ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಫೆಬ್ರವರಿ 2 ರಿಂದ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಣ 3 ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಇದಕ್ಕೂ ಮುನ್ನ ಉಭಯ ತಂಡಗಳು ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಈಗಾಗಲೇ ಟೆಸ್ಟ್ ಬಳಗವನ್ನು ಪ್ರಕಟಿಸಲಾಗಿದ್ದು, ನಿವೃತ್ತರಾಗಿರುವ ಡೇವಿಡ್ ವಾರ್ನರ್ ಬದಲಿಗೆ ಮ್ಯಾಟ್ ರೆನ್‌ಶಾ ಆಯ್ಕೆಯಾಗಿದ್ದಾರೆ.
ಟೆಸ್ಟ್ ಸರಣಿ ವೇಳಾಪಟ್ಟಿ:-
ಏಕದಿನ ಸರಣಿ ವೇಳಾಪಟ್ಟಿ:-
ಆಸ್ಟ್ರೇಲಿಯಾ ಏಕದಿನ ತಂಡ: ಸ್ಟೀವ್ ಸ್ಮಿತ್ (ನಾಯಕ), ಶಾನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್ (ವಿಕೆಟ್ ಕೀಪರ್), ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಲ್ಯಾನ್ಸ್ ಮೋರಿಸ್, ಜ್ಯೆ ರಿಚರ್ಡ್ಸನ್, ಮ್ಯಾಟ್ ಶಾರ್ಟ್, ಆ್ಯಡಂ ಝಂಪಾ.
ಇದನ್ನೂ ಓದಿ: ಶ್ರೀರಾಮನ ಹಾಡು ಕೇಳುವುದೇ ಖುಷಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಮ್ಯಾಟ್ ರೆನ್‌ಶಾ, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್.