AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2025: ಸ್ಟೀವ್ ಸ್ಮಿತ್​ಗೆ ಒಲಿದ ಆಸ್ಟ್ರೇಲಿಯಾ ತಂಡದ ನಾಯಕತ್ವ

Australia vs England: ನವೆಂಬರ್ 21 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗಿದ್ದಾರೆ. ಕಮಿನ್ಸ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಮೊದಲ ಮ್ಯಾಚ್​ನಲ್ಲಿ ಅನುಭವಿ ಆಟಗಾರ ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ.

Ashes 2025: ಸ್ಟೀವ್ ಸ್ಮಿತ್​ಗೆ ಒಲಿದ ಆಸ್ಟ್ರೇಲಿಯಾ ತಂಡದ ನಾಯಕತ್ವ
Steve Smith
ಝಾಹಿರ್ ಯೂಸುಫ್
|

Updated on:Oct 27, 2025 | 8:55 AM

Share

ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿದ್ದು, ಹೀಗಾಗಿ ನವೆಂಬರ್ 21 ರಂದು ಆರಂಭವಾಗಲಿರುವ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಇತ್ತ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಮೊದಲ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ. ಇನ್ನು ಉಳಿದ ಪಂದ್ಯಗಳಿಂದಲೂ ಕಮಿನ್ಸ್ ಹೊರಗುಳಿದರೆ ಸ್ಮಿತ್ ನಾಯಕನಾಗಿ ಮುಂದುವರೆಯಲಿದ್ದಾರೆ.

ಅಂದಹಾಗೆ ಸ್ಟೀವ್ ಸ್ಮಿತ್ ಈ ಹಿಂದೆ ಆಸ್ಟ್ರೇಲಿಯಾ ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದರು. ಈ ವೇಳೆ 40 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದ ಅವರು 23 ಜಯ ತಂದುಕೊಟ್ಟಿದ್ದರು. ಇನ್ನು ಸ್ಮಿತ್ ನಾಯಕತ್ವದಲ್ಲಿ ಆಸೀಸ್ ಪಡೆ ಸೋತಿರುವುದು ಕೇವಲ 10 ಮ್ಯಾಚ್​ಗಳನ್ನು ಮಾತ್ರ. ಇನ್ನುಳಿದ 7 ಪಂದ್ಯಗಳಲ್ಲಿ ಡ್ರಾ ಸಾಧಿಸಿದ್ದರು.

ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ನಾಯಕರಲ್ಲಿ ಒಬ್ಬರೆನಿಸಿಕೊಂಡಿರುವ ಸ್ಟೀವ್ ಸ್ಮಿತ್ ಇದೀಗ ಆ್ಯಶಸ್ ಸರಣಿಯಲ್ಲಿ ಮತ್ತೆ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇತ್ತ ನಾಯಕತ್ವದೊಂದಿಗೆ ಅದ್ಭುತ ಫಾರ್ಮ್​ ಪ್ರದರ್ಶಿಸುವಲ್ಲಿ ನಿಸ್ಸೀಮರಾಗಿರುವ ಸ್ಮಿತ್ ಕಡೆಯಿಂದ ಈ ಬಾರಿ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದು.

ಆಶ್ಯಸ್ ಸರಣಿಗೆ ಆಸ್ಟ್ರೇಲಿಯಾ ಸಂಭಾವ್ಯ ತಂಡ: ಸ್ಟೀವ್ ಸ್ಮಿತ್ (ನಾಯಕ), ಮಿಚೆಲ್ ಮಾರ್ಷ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಸ್ಯಾಮ್ ಕೊನ್​​​ಸ್ಟಾಸ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್, ಪ್ಯಾಟ್ ಕಮಿನ್ಸ್ (ಮೊದಲ ಪಂದ್ಯಕ್ಕೆ ಅಲಭ್ಯ).

ಆಶ್ಯಸ್ ಸರಣಿಗೆ ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಹ್ಯಾರಿ ಬ್ರೂಕ್ (ಉಪನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಜೇಕಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಓಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಜೋ ರೂಟ್, ಜೇಮಿ ಸ್ಮಿತ್, ಜೋಶ್ ಟಂಗ್, ಮಾರ್ಕ್ ವುಡ್.

ಇದನ್ನೂ ಓದಿ: IPL 2026: KKR ತಂಡಕ್ಕೆ ಕೆಎಲ್ ರಾಹುಲ್?

ಆ್ಯಶಸ್ ಸರಣಿ ವೇಳಾಪಟ್ಟಿ:

  • ಮೊದಲ ಟೆಸ್ಟ್: ಶುಕ್ರವಾರ ನವೆಂಬರ್ 21 – ನವೆಂಬರ್ 25 (ಬೆಳಿಗ್ಗೆ 2.30) – ಆಪ್ಟಸ್ ಕ್ರೀಡಾಂಗಣ, ಪರ್ತ್
  • ಎರಡನೇ ಟೆಸ್ಟ್: ಗುರುವಾರ ಡಿಸೆಂಬರ್ 4 – ಡಿಸೆಂಬರ್ 8 (ಬೆಳಿಗ್ಗೆ 4.30) – ದಿ ಗಬ್ಬಾ, ಬ್ರಿಸ್ಬೇನ್
  • ಮೂರನೇ ಟೆಸ್ಟ್: ಬುಧವಾರ ಡಿಸೆಂಬರ್ 17 – ಡಿಸೆಂಬರ್ 21 (ಬೆಳಿಗ್ಗೆ 12) – ಅಡಿಲೇಡ್ ಓವಲ್
  • ನಾಲ್ಕನೇ ಟೆಸ್ಟ್: ಗುರುವಾರ ಡಿಸೆಂಬರ್ 25 – ಡಿಸೆಂಬರ್ 29 (ರಾತ್ರಿ 11.30) – ಮೆಲ್ಬೋರ್ನ್ ಕ್ರಿಕೆಟ್ ಮೈದಾನ
  • ಐದನೇ ಟೆಸ್ಟ್: ಜನವರಿ 3 ಭಾನುವಾರ – ಜನವರಿ 7  (ರಾತ್ರಿ 11.30) – ಸಿಡ್ನಿ ಕ್ರಿಕೆಟ್ ಮೈದಾನ.

Published On - 8:54 am, Mon, 27 October 25

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ