
ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿದ್ದು, ಹೀಗಾಗಿ ನವೆಂಬರ್ 21 ರಂದು ಆರಂಭವಾಗಲಿರುವ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಇತ್ತ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಮೊದಲ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ. ಇನ್ನು ಉಳಿದ ಪಂದ್ಯಗಳಿಂದಲೂ ಕಮಿನ್ಸ್ ಹೊರಗುಳಿದರೆ ಸ್ಮಿತ್ ನಾಯಕನಾಗಿ ಮುಂದುವರೆಯಲಿದ್ದಾರೆ.
ಅಂದಹಾಗೆ ಸ್ಟೀವ್ ಸ್ಮಿತ್ ಈ ಹಿಂದೆ ಆಸ್ಟ್ರೇಲಿಯಾ ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದರು. ಈ ವೇಳೆ 40 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದ ಅವರು 23 ಜಯ ತಂದುಕೊಟ್ಟಿದ್ದರು. ಇನ್ನು ಸ್ಮಿತ್ ನಾಯಕತ್ವದಲ್ಲಿ ಆಸೀಸ್ ಪಡೆ ಸೋತಿರುವುದು ಕೇವಲ 10 ಮ್ಯಾಚ್ಗಳನ್ನು ಮಾತ್ರ. ಇನ್ನುಳಿದ 7 ಪಂದ್ಯಗಳಲ್ಲಿ ಡ್ರಾ ಸಾಧಿಸಿದ್ದರು.
ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ನಾಯಕರಲ್ಲಿ ಒಬ್ಬರೆನಿಸಿಕೊಂಡಿರುವ ಸ್ಟೀವ್ ಸ್ಮಿತ್ ಇದೀಗ ಆ್ಯಶಸ್ ಸರಣಿಯಲ್ಲಿ ಮತ್ತೆ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇತ್ತ ನಾಯಕತ್ವದೊಂದಿಗೆ ಅದ್ಭುತ ಫಾರ್ಮ್ ಪ್ರದರ್ಶಿಸುವಲ್ಲಿ ನಿಸ್ಸೀಮರಾಗಿರುವ ಸ್ಮಿತ್ ಕಡೆಯಿಂದ ಈ ಬಾರಿ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದು.
ಆಶ್ಯಸ್ ಸರಣಿಗೆ ಆಸ್ಟ್ರೇಲಿಯಾ ಸಂಭಾವ್ಯ ತಂಡ: ಸ್ಟೀವ್ ಸ್ಮಿತ್ (ನಾಯಕ), ಮಿಚೆಲ್ ಮಾರ್ಷ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಸ್ಯಾಮ್ ಕೊನ್ಸ್ಟಾಸ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್, ಪ್ಯಾಟ್ ಕಮಿನ್ಸ್ (ಮೊದಲ ಪಂದ್ಯಕ್ಕೆ ಅಲಭ್ಯ).
ಆಶ್ಯಸ್ ಸರಣಿಗೆ ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಹ್ಯಾರಿ ಬ್ರೂಕ್ (ಉಪನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಜೇಕಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಓಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಜೋ ರೂಟ್, ಜೇಮಿ ಸ್ಮಿತ್, ಜೋಶ್ ಟಂಗ್, ಮಾರ್ಕ್ ವುಡ್.
ಇದನ್ನೂ ಓದಿ: IPL 2026: KKR ತಂಡಕ್ಕೆ ಕೆಎಲ್ ರಾಹುಲ್?
Published On - 8:54 am, Mon, 27 October 25