ಟೀಮ್ ಇಂಡಿಯಾ ವಿರುದ್ಧ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯು ನವೆಂಬರ್ ತಿಂಗಳಲ್ಲಿ ಶುರುವಾಗಲಿದೆ. ಈ ಸರಣಿಯು ಆಸ್ಟ್ರೇಲಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಆಸೀಸ್ ಪಡೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಕೊನೆಯ ಬಾರಿಗೆ ಗೆದ್ದಿರುವುದು 2014-15 ರಲ್ಲಿ. ಇದಾದ ಬಳಿಕ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಮೂರು ಬಾರಿ ಸರಣಿ ಜಯಿಸಿದೆ. ಹೀಗಾಗಿ ಈ ಬಾರಿ ಕಪ್ ಗೆಲ್ಲಲೇಬೇಕೆಂದು ಆಸ್ಟ್ರೇಲಿಯಾ ತಂಡ ಪಣತೊಟ್ಟಿದೆ.

ಟೀಮ್ ಇಂಡಿಯಾ ವಿರುದ್ಧ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ
Steven Smith
Follow us
|

Updated on: Sep 10, 2024 | 10:07 AM

ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಸ್ಟೀವ್ ಸ್ಮಿತ್ ಮತ್ತೆ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಡೇವಿಡ್ ವಾರ್ನರ್ ನಿವೃತ್ತಿ ಬಳಿಕ ಟೆಸ್ಟ್​ನಲ್ಲಿ ಆರಂಭಿಕನಾಗಿ ಬಡ್ತಿ ಪಡೆದಿದ್ದ ಸ್ಮಿತ್ ಇದೀಗ ಮತ್ತೆ ತಮ್ಮ ಹಳೆಯ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ನಿರ್ಧರಿಸಿದ್ದಾರೆ. ಅದರಂತೆ ಟೀಮ್ ಇಂಡಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಮಿತ್ 4ನೇ ಕ್ರಮಾಂಕದಲ್ಲೇ ಮತ್ತೆ ಬ್ಯಾಟಿಂಗ್​ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಟೀವ್ ಸ್ಮಿತ್ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಉಸ್ಮಾನ್ ಖ್ವಾಜಾ ಜೊತೆ 6 ಬಾರಿ ಇನಿಂಗ್ಸ್​ಆರಂಭಿಸಿದ್ದ ಸ್ಮಿತ್ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಆರು ಇನಿಂಗ್ಸ್​ಗಳಲ್ಲಿ ಸ್ಮಿತ್ ಕಲೆಹಾಕಿದ್ದು 12, 11*, 6, 91*, 31, 0 ರನ್​ಗಳು ಮಾತ್ರ. ಹೀಗಾಗಿಯೇ ಪ್ರತಿಷ್ಠಿತ ಸರಣಿಯಲ್ಲಿ ಬ್ಯಾಟಿಂಗ್ ಕ್ರಮಾಂಕ ಬದಲಿಸಲು ಸ್ಮಿತ್ ನಿರ್ಧರಿಸಿದ್ದಾರೆ.

ಆಸ್ಟ್ರೇಲಿಯಾ ಆರಂಭಿಕ ಯಾರು?

ಡೇವಿಡ್ ವಾರ್ನರ್ ನಿವೃತ್ತಿ ಬಳಿಕ ಆಸ್ಟ್ರೇಲಿಯಾ ತಂಡವು ಟೆಸ್ಟ್​ನಲ್ಲಿ ಹೊಸ ಆರಂಭಿಕನ ಹುಡುಕಾಟದಲ್ಲಿದೆ. ಈ ಹಿಂದೆ ಸ್ಮಿತ್ ಅವರನ್ನು ಓಪನರ್ ಆಗಿ ಕಣಕ್ಕಿಳಿಸಿ ಪ್ರಯೋಗ ನಡೆಸಲಾಗಿತ್ತು. ಆದರೀಗ ಸ್ಮಿತ್ ಮತ್ತೆ ಹಳೆಯ ಕ್ರಮಾಂಕದಲ್ಲಿ ಕಣಕ್ಕಿಳಿಯಲು ಇಚ್ಛಿಸಿರುವುದರಿಂದ ಇದೀಗ ಹೊಸ ಆರಂಭಿಕನನ್ನು ಆಯ್ಕೆ ಮಾಡಬೇಕಿದೆ.

ಇದನ್ನೂ ಓದಿ: CSK ಪರ ಆಡಬೇಕು… RCB ಆಟಗಾರನ ಹೇಳಿಕೆ..!

ಪ್ರಸ್ತುತ ಮಾಹಿತಿ ಪ್ರಕಾರ, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಒಂದೆಡೆ ಉಸ್ಮಾನ್ ಖ್ವಾಜಾ ಕಣಕ್ಕಿಳಿಯುವುದು ಖಚಿತ. ಮತ್ತೊಂದು ತುದಿಯಲ್ಲಿ ಡೇಂಜರಸ್ ಟ್ರಾವಿಸ್ ಹೆಡ್​ಗೆ ಮಣೆ ಹಾಕಲು ಕ್ರಿಕೆಟ್ ಆಸ್ಟ್ರೇಲಿಯಾ ಚಿಂತಿಸಿದೆ. ಹೀಗಾಗಿ ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಉಸ್ಮಾನ್ ಖ್ವಾಜಾ ಜೊತೆ ಟ್ರಾವಿಸ್ ಹೆಡ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಯಾವಾಗ ಶುರು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಆಸ್ಟ್ರೇಲಿಯಾದಲ್ಲಿ ಜರುಗಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಹಿಂದೆ ಬಾರ್ಡರ್-ಗವಾಸ್ಕರ್ ಸರಣಿಗಳಲ್ಲಿ 4 ಪಂದ್ಯಗಳನ್ನಾಡಲಾಗುತ್ತಿತ್ತು. ಆದರೆ ಈ ಬಾರಿ ಐದು ಪಂದ್ಯಗಳ ಸರಣಿ ಆಯೋಜಿಸಲು ನಿರ್ಧರಿಸಲಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 22 ನವೆಂಬರ್ 2024 7:50 AM ಪರ್ತ್
2ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ (D/N) ಶುಕ್ರವಾರ, 6 ಡಿಸೆಂಬರ್ 2024 9:30 AM ಅಡಿಲೇಡ್
3ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶನಿವಾರ, 14 ಡಿಸೆಂಬರ್ 2024 5:50 AM ಬ್ರಿಸ್ಬೇನ್
4ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಗುರುವಾರ, 26 ಡಿಸೆಂಬರ್ 2024 5 AM ಮೆಲ್ಬೋರ್ನ್
5ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 3 ಜನವರಿ 2025 5 AM ಸಿಡ್ನಿ

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು