AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮಗನಿದ್ದಂತೆ’; ವಿನೋದ್ ಕಾಂಬ್ಳಿ ನೆರವಿಗೆ 1983 ವಿಶ್ವಕಪ್ ವಿಜೇತ ತಂಡ ಸಿದ್ಧ ಎಂದ ಗವಾಸ್ಕರ್

Vinod Kambli's Struggle: ಟೀಂ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಅವರ ಆರ್ಥಿಕ ಮತ್ತು ವೈಯಕ್ತಿಕ ಸಂಕಷ್ಟಕ್ಕೆ 1983ರ ವಿಶ್ವಕಪ್ ವಿಜೇತ ತಂಡ ಸಹಾಯ ಮಾಡಲು ಮುಂದಾಗಿದೆ. ಸುನಿಲ್ ಗವಾಸ್ಕರ್ ಮತ್ತು ಕಪಿಲ್ ದೇವ್ ಅವರು ಕಾಂಬ್ಳಿಗೆ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕಾಂಬ್ಳಿಗೆ ನೆರವು ನೀಡಬೇಕೆಂದರೆ ಅವರು ಮೊದಲು ಕುಡಿದತ ಚಟದಿಂದ ಮುಕ್ತರಾಗಬೇಕು ಎಂದು ಕಪಿಲ್ ದೇವ್ ಷರತ್ತು ವಿಧಿಸಿದ್ದಾರೆ.

‘ನನ್ನ ಮಗನಿದ್ದಂತೆ’; ವಿನೋದ್ ಕಾಂಬ್ಳಿ ನೆರವಿಗೆ 1983 ವಿಶ್ವಕಪ್ ವಿಜೇತ ತಂಡ ಸಿದ್ಧ ಎಂದ ಗವಾಸ್ಕರ್
ವಿನೋದ್ ಕಾಂಬ್ಳಿ
ಪೃಥ್ವಿಶಂಕರ
|

Updated on:Dec 07, 2024 | 5:43 PM

Share

ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟದಿಂದ ಜೀವನ ನಿರ್ವಹಣೆಗೂ ಸಂಕಷ್ಟ ಪಡುತ್ತಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಗೆಳೆಯ ವಿನೋದ್ ಕಾಂಬ್ಳಿ ಅವರಿಗೆ ಎಲ್ಲಾ ರೀತಿಯ ನೆರವು ನೀಡಲು 1983 ರ ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ತಂಡದ ಸದಸ್ಯರೆಲ್ಲರು ಸಿದ್ದರಿದ್ದೇವೆ ಎಂದು ಆ ತಂಡದ ಭಾಗವಾಗಿದ್ದ ಸುನೀಲ್ ಗವಾಸ್ಕರ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ವಾಸ್ತವವಾಗಿ ಕೆಲವು ದಿನಗಳ ಹಿಂದೆ ಕಪಿಲ್ ದೇವ್ ಕೂಡ ವಿನೋದ್ ಕಾಂಬ್ಳಿಗೆ ನೆರವು ನೀಡುವುದಾಗಿ ಹೇಳಿಕೊಂಡಿದ್ದರು. ಆದರೆ ನಾವು ನೆರವು ನೀಡಬೇಕೆಂದರೆ ವಿನೋದ್ ಮೊದಲು ರಿಹ್ಯಾಬ್ ಸೆಂಟರ್​ಗೆ ಸೇರಿ ಕುಡಿತದ ಚಟದಿಂದ ಹೊರಬರಬೇಕು ಎಂಬ ಷರತ್ತವನ್ನು ವಿಧಿಸಿದ್ದರು.

ವಿನೋದ್ ಕಾಂಬ್ಳಿ ವಿಡಿಯೋ ವೈರಲ್

ವಾಸ್ತವವಾಗಿ ಕೆಲವು ದಿನಗಳ ಹಿಂದೆ ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್ ಮೈದಾನದಲ್ಲಿ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕವನ್ನು ಇತ್ತೀಚೆಗೆ ಅನಾವರಣಗೊಳಿಸಲಾಯಿತು. ಈ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್, ವಿನೋದ್ ಕಾಂಬ್ಳಿ ಸೇರಿದಂತೆ ರಮಾಕಾಂತ್ ಅವರ ಕೋಚಿಂಗ್‌ನಲ್ಲಿ ಬೆಳೆದಿದ್ದ ಪ್ರಸಿದ್ಧ ಕ್ರಿಕೆಟಿಗರು ಉಪಸ್ಥಿತರಿದ್ದರು. ಈ ವೇಳೆ ಸಚಿನ್ ತೆಂಡೂಲ್ಕರ್ ತಮ್ಮ ಬಾಲ್ಯದ ಗೆಳೆಯ ವಿನೋದ್ ಕಾಂಬ್ಳಿ ಅವರನ್ನು ಸಮಾರಂಭದಲ್ಲಿ ಭೇಟಿಯಾಗಿ ಕುಶಲೋಪರಿ ವಿಚಾರಿಸಿದ್ದರು. ಆ ಕ್ಷಣದಲ್ಲಿ ಕಾಂಬ್ಳಿಗೆ ಆರಂಭದಲ್ಲಿ ಸಚಿನ್​ರನ್ನು ಗುರುತಿಸಲು ಸಾಧ್ಯವಾಗಿರಲಿಲ್ಲ. ಅಲ್ಲೇ ಪಕ್ಕದಲ್ಲಿ ಕುಳಿತಿದ್ದವರು, ಅದು ಸಚಿನ್ ತೆಂಡೂಲ್ಕರ್ ಎಂದು ಹೇಳಿದ ಬಳಿಕ ಕಾಂಬ್ಳಿಗೆ ಗೆಳೆಯನನ್ನು ಪತ್ತೆಹಚ್ಚಲು ಸಾಧ್ಯವಾಗಿತ್ತು.

ಇದಲ್ಲದೆ ಸಮಾರಂಭದಲ್ಲಿ ಮಾತನಾಡಿದ್ದ ಕಾಂಬ್ಳಿಗೆ ಸರಿಯಾಗಿ ಮಾತನಾಡಲು ಸಾಧ್ಯವಾಗಲಿಲ್ಲ. ಅವರು ಮಾತನಾಡಲು ಸಾಕಷ್ಟು ಕಷ್ಟಪಡಬೇಕಾಯಿತು. ಅಲ್ಲದೆ ಕಳೆದ ಆಗಸ್ಟ್​ನಲ್ಲಿ ಕಾಂಬ್ಳಿ ಅವರ ಶಾಕಿಂಗ್ ವಿಡಿಯೋವೊಂದು ಸಾಕಷ್ಟು ವೈರಲ್ ಆಗಿತ್ತು. ಅದರಲ್ಲಿ ಕಾಂಬ್ಳಿ ಒಬ್ಬರೇ ಸ್ವಾತಂತ್ರವಾಗಿ ನಡೆಯಲು ಸಾಧ್ಯವಾಗದಂತ ಸ್ಥಿತಿಗೆ ತಲುಪಿದ್ದರು. ಕಾಂಬ್ಳಿಗೆ ಬೇರೊಬ್ಬರ ಸಹಾಯವಿಲ್ಲದೆ ನಡೆಯಲು ಸಾಧ್ಯವಾಗುತ್ತಿಲ್ಲ. ಕಾಂಬ್ಳಿ ಅವರ ಈ ಸೋಚನೀಯ ಸ್ಥಿತಿಯನ್ನು ನೋಡಿದ್ದ ಮಾಧ್ಯಮಗಳು ಹಾಗೂ ಮಾಜಿ ಕ್ರಿಕೆಟಿಗರು ಮರುಕ ಪಟ್ಟಿದ್ದರು.

ನೆರವಿಗೆ ನಿಂತ ಸುನೀಲ್ ಗವಾಸ್ಕರ್

ಇದೀಗ ಕಷ್ಟದಲ್ಲಿರುವ ಕಾಂಬ್ಳಿಗೆ ಸಹಾಯ ಮಾಡುವುದಾಗಿ ಸುನೀಲ್ ಗವಾಸ್ಕರ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು 1983 ವಿಶ್ವಕಪ್ ವಿಜೇತ ತಂಡವು ಕಿರಿಯ ಆಟಗಾರರ ನೆರವಿಗೆ ಸದಾ ನಿಲ್ಲುತ್ತದೆ. ವಿನೋದ್ ಕಾಂಬ್ಳಿ ನನ್ನ ಮಗನಿದ್ದಂತೆ. ಆತ ಮತ್ತೆ ಸಹಜ ಜೀವನ ನಡೆಸಲು ಬೇಕಾದ ಎಲ್ಲಾ ನೆರವನ್ನು ನಮ್ಮ ತಂಡ ಮಾಡಲಿದೆ. ಅವರಿಗೆ ಯಾವ ರೀತಿಯ ನೆರವು ನೀಡುತ್ತೇವೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದಿದ್ದಾರೆ.

ರಿಹ್ಯಾಬ್​ಗೆ ಸೇರಿದರೆ ನೆರವು ನೀಡುತ್ತೇವೆ

ಸುನೀಲ್ ಗವಾಸ್ಕರ್ ಅವರಿಗೂ ಮುನ್ನ ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಕೂಡ ಕಾಂಬ್ಳಿ ಅವರ ನೆರವಿಗೆ ನಿಲ್ಲುವುದಾಗಿ ಹೇಳಿಕೊಂಡಿದ್ದರು. ಕುಡಿತದ ಚಟಕ್ಕೆ ಬಿದ್ದಿರುವ ವಿನೋದ್ ರಿಹ್ಯಾಬ್​ಗೆ ಹೋಗುವುದಾದರೆ, ನಾವು ಅವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಸಿದ್ಧರಿದ್ದೇವೆ. ಕಾಂಬ್ಳಿ ರಿಹ್ಯಾಬ್​ಗೆ ಸೇರಿದರೆ ಮಾತ್ರ, ಚಿಕಿತ್ಸೆಯು ಎಷ್ಟು ಸಮಯದವರೆಗೆ ಇರುತ್ತದೆ ಎಂಬುದನ್ನು ಲೆಕ್ಕಿಸದೆ ನಾವು ಬಿಲ್ ಪಾವತಿಸಲು ಸಿದ್ಧರಿದ್ದೇವೆ ಎಂದು ಕಪಿಲ್ ಹೇಳಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Sat, 7 December 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ