T20 World Cup 2021: ಈ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯಲು ಸಲಹೆ ನೀಡಿದ ಗವಾಸ್ಕರ್
Sunil Gavaskar's India Playing XI: ರೋಹಿತ್ ಶರ್ಮಾ , ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್ , ರಿಷಬ್ ಪಂತ್, ಇಶಾನ್ ಕಿಶನ್
ಭಾನುವಾರ ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಹಣಾಹಣಿಗಾಗಿ ಭಾರತದ ಪ್ಲೇಯಿಂಗ್ 11 ಬದಲಾವಣೆ ಮಾಡುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ ಲೆಜೆಂಡ್ ಸುನಿಲ್ ಗವಾಸ್ಕರ್. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ 10 ವಿಕೆಟ್ಗಳಿಂದ ಹೀನಾಯವಾಗಿ ಸೋತಿರುವ ಭಾರತ ನ್ಯೂಜಿಲೆಂಡ್ ವಿರುದ್ದ 2 ಬದಲಾವಣೆಯೊಂದಿಗೆ ಕಣಕ್ಕಿಳಿಯಬೇಕು. ಈ ಮೂಲಕ ಕಿವೀಸ್ ವಿರುದ್ದ ಜಯ ಸಾಧಿಸಬಹುದು ಎಂದು ಸುನಿಲ್ ಗವಾಸ್ಕರ್ ತಿಳಿಸಿದ್ದಾರೆ.
ಗವಾಸ್ಕರ್ ಪ್ರಕಾರ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡದಿದ್ದರೆ, ಅವರ ಸ್ಥಾನದಲ್ಲಿ ಇಶಾನ್ ಕಿಶನ್ ಅವರನ್ನು ಆಡಿಸಬೇಕು. ಕಿಶನ್ ಉತ್ತಮ ಫಾರ್ಮ್ನಲ್ಲಿದ್ದಾರೆ. ಹೀಗಾಗಿ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವುದು ಉತ್ತಮ ಎಂದಿದ್ದಾರೆ. ಇನ್ನು ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡದ ಭುವನೇಶ್ವರ್ ಕುಮಾರ್ ಅವರನ್ನು ತಂಡದಿಂದ ಕೈಬಿಡಬೇಕು. ಅವರ ಸ್ಥಾನದಲ್ಲಿ ಶಾರ್ದೂಲ್ ಠಾಕೂರ್ಗೆ ಚಾನ್ಸ್ ನೀಡಬೇಕು ಎಂದು ತಿಳಿಸಿದ್ದಾರೆ.
ಇದರ ಹೊರತಾಗಿ ತಂಡದಲ್ಲಿ ಹೆಚ್ಚಿನ ಬದಲಾವಣೆ ಮಾಡಬಾರದು ಎಂದು ಅಭಿಪ್ರಾಯಪಟ್ಟಿರುವ ಗವಾಸ್ಕರ್, ತಂಡದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದರೆ, ನೀವು ಭಯಭೀತರಾಗಿದ್ದೀರಿ ಎಂಬುದು ಎದುರಾಳಿಗಳಿಗೆ ತಿಳಿಯುತ್ತದೆ. ಹೀಗಾಗಿ ಈ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಉತ್ತಮ ಎಂದು ಸುನಿಲ್ ಗವಾಸ್ಕರ್ ಹೇಳಿದರು.
ಸುನಿಲ್ ಗವಾಸ್ಕರ್ ತಿಳಿಸಿರುವಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಬೇಕು. ರೋಹಿತ್ ಶರ್ಮಾ , ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್ , ರಿಷಬ್ ಪಂತ್, ಇಶಾನ್ ಕಿಶನ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಮೊಹಮ್ಮದ್ ಶಮಿ , ಅಶ್ವಿನ್ , ಜಸ್ಪ್ರೀತ್ ಬುಮ್ರಾ.
ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?
ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ
ಇದನ್ನೂ ಓದಿ: T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ
(Sunil Gavaskar Suggests Changes in India’s Playing XI)