Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

Sunil narine 13 ball fifty in BPL 2022: BPL 2022 ಇತಿಹಾಸದಲ್ಲಿ ಸುನಿಲ್ ನರೈನ್ ಅತ್ಯಂತ ವೇಗದ ಅರ್ಧಶತಕ ಗಳಿಸಿದ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದಾಗ್ಯೂ ಯುವರಾಜ್ ಸಿಂಗ್ ಹೆಸರಿನಲ್ಲಿರುವ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ.

Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್
sunil narine
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 17, 2022 | 2:13 PM

ವೆಸ್ಟ್ ಇಂಡೀಸ್​ನ ಆಲ್​ರೌಂಡರ್ ಸುನಿಲ್ ನರೈನ್ ಬೌಲಿಂಗ್ ಜೊತೆಗೆ ಕೆಲವೊಮ್ಮೆ ಬ್ಯಾಟಿಂಗ್​ನಲ್ಲೂ ಅಬ್ಬರಿಸಿದ್ದಾನೆ. ಈ ಅಬ್ಬರ ಇದೀಗ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನಲ್ಲೂ ಮುಂದುವರೆದಿದೆ. ಬಿಪಿಎಲ್​ನ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಬಾರಿಸುವ ಮೂಲಕ ನರೈನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಕೊಮಿಲ್ಲಾ ವಿಕ್ಟೋರಿಯನ್ಸ್ ಹಾಗೂ ಚಟ್ಟೋಗ್ರಾಮ್ ಚಾಲೆಂಜರ್ಸ್ ನಡುವಣ ಈ ಪಂದ್ಯದಲ್ಲಿ ವಿಕ್ಟೋರಿಯನ್ಸ್ ಪರ ಕಣಕ್ಕಿಳಿದ ಸುನಿಲ್ ನರೈನ್ ಕೇವಲ 16 ಎಸೆತಗಳಲ್ಲಿ 57 ರನ್ ಬಾರಿಸಿ ಅಬ್ಬರಿಸಿದ್ದರು.

ವಿಶೇಷ ಎಂದರೆ ಸುನಿಲ್ ನರೈನ್ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. 6 ಸಿಕ್ಸರ್ ಹಾಗೂ 4 ಬೌಂಡರಿ ಬಾರಿಸುವ ಮೂಲಕ ಅರ್ಧಶತಕ ಪೂರೈಸಿದ ನರೈನ್ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಂತ ವೇಗವಾಗಿ ಅರ್ಧಶತಕ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡರು. ನರೈನ್ ಅವರ ಈ ಅಬ್ಬರದ ಇನ್ನಿಂಗ್ಸ್‌ ನೆರವಿನಿಂದ ಕೊಮಿಲ್ಲಾ ಕೊಮಿಲ್ಲಾ ವಿಕ್ಟೋರಿಯನ್ಸ್ ತಂಡವು ಕೇವಲ 12.5 ಓವರ್‌ಗಳಲ್ಲಿ 149 ರನ್‌ಗಳ ಗುರಿ ಮುಟ್ಟಿತ್ತು. ಈ ಗೆಲುವಿನೊಂದಿಗೆ ಕೊಮಿಲ್ಲಾ ತಂಡವೂ ಬಿಪಿಎಲ್​ನ ಫೈನಲ್ ಪ್ರವೇಶಿಸಿದೆ.

ಬಿಪಿಎಲ್​ನಲ್ಲಿ ದಾಖಲೆ: BPL 2022 ಇತಿಹಾಸದಲ್ಲಿ ಸುನಿಲ್ ನರೈನ್ ಅತ್ಯಂತ ವೇಗದ ಅರ್ಧಶತಕ ಗಳಿಸಿದ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದಾಗ್ಯೂ ಯುವರಾಜ್ ಸಿಂಗ್ ಹೆಸರಿನಲ್ಲಿರುವ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ. 2007 ರಲ್ಲಿ ಯುವಿ ಟಿ20ಯಲ್ಲಿ 12 ಎಸೆತಗಳಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿ ದಾಖಲೆ ಬರೆದಿದ್ದರು. ಇದೀಗ 13 ಎಸೆತಗಳಲ್ಲಿ ಅರ್ಧಶತಕ ಬಾರಿಸಿರುವ ಸುನಿಲ್ ನರೈನ್ ಒಂದು ಎಸೆತಗಳ ಅಂತರದಿಂದ ಯುವರಾಜ್ ಸಿಂಗ್ ದಾಖಲೆಯನ್ನು ಸರಿಗಟ್ಟುವುದನ್ನು ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: IPL 2022 ನಲ್ಲಿ ಕೋಟಿ ಸಿಗುತ್ತಿದ್ದಂತೆ ಪಾಕಿಸ್ತಾನ ಸೂಪರ್ ಲೀಗ್ ತೊರೆದ ಸ್ಟಾರ್ ಆಟಗಾರ

ಇದನ್ನೂ ಓದಿ: IPL 2022: RCB ತಂಡ ಕಟ್ಟಿದೆ…ಆದರೆ ಆರಂಭಿಕ ಯಾರು ಎಂಬುದೇ ಈಗ ಪ್ರಶ್ನೆ..?

ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..! 

(Sunil narine 13 ball fifty in BPL 2022 Chattogram Challengers vs Comilla Victorians, 2nd Qualifier)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ