ವೆಸ್ಟ್ ಇಂಡೀಸ್ನ ಆಲ್ರೌಂಡರ್ ಸುನಿಲ್ ನರೈನ್ ಬೌಲಿಂಗ್ ಜೊತೆಗೆ ಕೆಲವೊಮ್ಮೆ ಬ್ಯಾಟಿಂಗ್ನಲ್ಲೂ ಅಬ್ಬರಿಸಿದ್ದಾನೆ. ಈ ಅಬ್ಬರ ಇದೀಗ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ನಲ್ಲೂ ಮುಂದುವರೆದಿದೆ. ಬಿಪಿಎಲ್ನ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಬಾರಿಸುವ ಮೂಲಕ ನರೈನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಕೊಮಿಲ್ಲಾ ವಿಕ್ಟೋರಿಯನ್ಸ್ ಹಾಗೂ ಚಟ್ಟೋಗ್ರಾಮ್ ಚಾಲೆಂಜರ್ಸ್ ನಡುವಣ ಈ ಪಂದ್ಯದಲ್ಲಿ ವಿಕ್ಟೋರಿಯನ್ಸ್ ಪರ ಕಣಕ್ಕಿಳಿದ ಸುನಿಲ್ ನರೈನ್ ಕೇವಲ 16 ಎಸೆತಗಳಲ್ಲಿ 57 ರನ್ ಬಾರಿಸಿ ಅಬ್ಬರಿಸಿದ್ದರು.
ವಿಶೇಷ ಎಂದರೆ ಸುನಿಲ್ ನರೈನ್ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. 6 ಸಿಕ್ಸರ್ ಹಾಗೂ 4 ಬೌಂಡರಿ ಬಾರಿಸುವ ಮೂಲಕ ಅರ್ಧಶತಕ ಪೂರೈಸಿದ ನರೈನ್ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ನಲ್ಲಿ ಅತ್ಯಂತ ವೇಗವಾಗಿ ಅರ್ಧಶತಕ ಬಾರಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡರು. ನರೈನ್ ಅವರ ಈ ಅಬ್ಬರದ ಇನ್ನಿಂಗ್ಸ್ ನೆರವಿನಿಂದ ಕೊಮಿಲ್ಲಾ ಕೊಮಿಲ್ಲಾ ವಿಕ್ಟೋರಿಯನ್ಸ್ ತಂಡವು ಕೇವಲ 12.5 ಓವರ್‌ಗಳಲ್ಲಿ 149 ರನ್‌ಗಳ ಗುರಿ ಮುಟ್ಟಿತ್ತು. ಈ ಗೆಲುವಿನೊಂದಿಗೆ ಕೊಮಿಲ್ಲಾ ತಂಡವೂ ಬಿಪಿಎಲ್ನ ಫೈನಲ್ ಪ್ರವೇಶಿಸಿದೆ.
Sunil Narine madness – fifty from just 13 balls – one of the greatest T20 player in the history of the game.pic.twitter.com/NzQMm1bKig
— Johns. (@CricCrazyJohns) February 16, 2022
ಬಿಪಿಎಲ್ನಲ್ಲಿ ದಾಖಲೆ:
BPL 2022 ಇತಿಹಾಸದಲ್ಲಿ ಸುನಿಲ್ ನರೈನ್ ಅತ್ಯಂತ ವೇಗದ ಅರ್ಧಶತಕ ಗಳಿಸಿದ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದಾಗ್ಯೂ ಯುವರಾಜ್ ಸಿಂಗ್ ಹೆಸರಿನಲ್ಲಿರುವ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ. 2007 ರಲ್ಲಿ ಯುವಿ ಟಿ20ಯಲ್ಲಿ 12 ಎಸೆತಗಳಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿ ದಾಖಲೆ ಬರೆದಿದ್ದರು. ಇದೀಗ 13 ಎಸೆತಗಳಲ್ಲಿ ಅರ್ಧಶತಕ ಬಾರಿಸಿರುವ ಸುನಿಲ್ ನರೈನ್ ಒಂದು ಎಸೆತಗಳ ಅಂತರದಿಂದ ಯುವರಾಜ್ ಸಿಂಗ್ ದಾಖಲೆಯನ್ನು ಸರಿಗಟ್ಟುವುದನ್ನು ತಪ್ಪಿಸಿಕೊಂಡಿದ್ದಾರೆ.
ಇದನ್ನೂ ಓದಿ: IPL 2022 ನಲ್ಲಿ ಕೋಟಿ ಸಿಗುತ್ತಿದ್ದಂತೆ ಪಾಕಿಸ್ತಾನ ಸೂಪರ್ ಲೀಗ್ ತೊರೆದ ಸ್ಟಾರ್ ಆಟಗಾರ
ಇದನ್ನೂ ಓದಿ: IPL 2022: RCB ತಂಡ ಕಟ್ಟಿದೆ…ಆದರೆ ಆರಂಭಿಕ ಯಾರು ಎಂಬುದೇ ಈಗ ಪ್ರಶ್ನೆ..?
ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..!
(Sunil narine 13 ball fifty in BPL 2022 Chattogram Challengers vs Comilla Victorians, 2nd Qualifier)