AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವೆಂಟಿ ಟ್ವೆಂಟಿ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಸುನಿಲ್ ನರೈನ್

T20 Records: ಟಿ20 ಕ್ರಿಕೆಟಗ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಅಫ್ಘಾನಿಸ್ತಾನದ ರಶೀದ್ ಖಾನ್ ಹೆಸರಿನಲ್ಲಿದೆ. ಆದರೆ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ವಿಕೆಟ್ ಕಬಳಿಸಿರುವುದು ವೆಸ್ಟ್ ಇಂಡೀಸ್​ನ ಸುನಿಲ್ ನರೈನ್. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಅತ್ಯಧಿಕ ವಿಕೆಟ್ ಕಬಳಿಸುವ ಮೂಲಕ ನರೈನ್ ಈ ಸಾಧನೆ ಮಾಡಿದ್ದಾರೆ.

ಟ್ವೆಂಟಿ ಟ್ವೆಂಟಿ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಸುನಿಲ್ ನರೈನ್
Sunil Narine
ಝಾಹಿರ್ ಯೂಸುಫ್
|

Updated on: May 29, 2025 | 12:42 PM

Share

ಟಿ20 ಕ್ರಿಕೆಟ್​ನಲ್ಲಿ ಸುನಿಲ್ ನರೈನ್ (Sunil Narine) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಬರೋಬ್ಬರಿ 210 ವಿಕೆಟ್​ಗಳನ್ನು ಕಬಳಿಸುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಒಂದೇ ತಂಡದ ಪರ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಇದೀಗ ಸುನಿಲ್ ನರೈನ್ ಪಾಲಾಗಿದೆ.

ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಸುನಿಲ್ ನರೈನ್ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಈ 2 ವಿಕೆಟ್​ಗಳೊಂದಿಗೆ ನರೈನ್ ಅವರ ಒಟ್ಟು ಐಪಿಎಲ್ ವಿಕೆಟ್​ 210 ಕ್ಕೇರಿದೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ ಅತೀ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಸಮಿತ್ ಪಟೇಲ್ ಹೆಸರಿನಲ್ಲಿತ್ತು. ನಾಟಿಂಗ್​ಹ್ಯಾಮ್​ಶೈರ್ ತಂಡದ ಪರ ಕಣಕ್ಕಿಳಿದಿದ್ದ ಸಮಿತ್ ಒಟ್ಟು 208 ವಿಕೆಟ್​ಗಳನ್ನು ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಸುನಿಲ್ ನರೈನ್ ಯಶಸ್ವಿಯಾಗಿದ್ದಾರೆ.

2011 ರಿಂದ ಟಿ20 ಪಂದ್ಯಗಳನ್ನಾಡುತ್ತಿರುವ ಸುನಿಲ್ ನರೈನ್ ಈವರೆಗೆ 538 ವಿಕೆಟ್ ಕಬಳಿಸಿದ್ದಾರೆ. ಇದರಲ್ಲಿ 210 ವಿಕೆಟ್​ಗಳನ್ನು ಪಡೆದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ಪರ ಎಂಬುದು ವಿಶೇಷ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ವಿಕೆಟ್ ಕಬಳಿಸಿದ ವಿಶ್ವ ದಾಖಲೆಯನ್ನು ನರೈನ್ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ನ ದಾಖಲೆ ಅಫ್ಘಾನಿಸ್ತಾನದ ರಶೀದ್ ಖಾನ್ ಹೆಸರಿನಲ್ಲಿದೆ. ಈವರೆಗೆ 476 ಟಿ20 ಪಂದ್ಯಗಳನ್ನಾಡಿರುವ ರಶೀದ್ ಖಾನ್ ಒಟ್ಟು 643 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: IPL 2025: ಪ್ಲೇಆಫ್ ಪಂದ್ಯಗಳಿಂದ 8 ಆಟಗಾರರು ಔಟ್

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಭಾರತೀಯ ಬೌಲರ್​ನ ದಾಖಲೆ ಯುಜ್ವೇಂದ್ರ ಚಹಲ್ ಹೆಸರಿನಲ್ಲಿದೆ. ಟೀಮ್ ಇಂಡಿಯಾ, ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಚಹಲ್ ಒಟ್ಟು 324 ಟಿ20 ಪಂದ್ಯಗಳ ಮೂಲಕ 378 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಭಾರತದ ಅತ್ಯಂತ ಯಶಸ್ವಿ ಟಿ20 ಬೌಲರ್ ಎನಿಸಿಕೊಂಡಿದ್ದಾರೆ.

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು