
ಟಿ20 ಕ್ರಿಕೆಟ್ನಲ್ಲಿ ಸುನಿಲ್ ನರೈನ್ (Sunil Narine) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಬರೋಬ್ಬರಿ 210 ವಿಕೆಟ್ಗಳನ್ನು ಕಬಳಿಸುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ಪರ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಇದೀಗ ಸುನಿಲ್ ನರೈನ್ ಪಾಲಾಗಿದೆ.
ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದ ಸುನಿಲ್ ನರೈನ್ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಈ 2 ವಿಕೆಟ್ಗಳೊಂದಿಗೆ ನರೈನ್ ಅವರ ಒಟ್ಟು ಐಪಿಎಲ್ ವಿಕೆಟ್ 210 ಕ್ಕೇರಿದೆ. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಒಂದೇ ತಂಡದ ಪರ ಅತೀ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ನ ಸಮಿತ್ ಪಟೇಲ್ ಹೆಸರಿನಲ್ಲಿತ್ತು. ನಾಟಿಂಗ್ಹ್ಯಾಮ್ಶೈರ್ ತಂಡದ ಪರ ಕಣಕ್ಕಿಳಿದಿದ್ದ ಸಮಿತ್ ಒಟ್ಟು 208 ವಿಕೆಟ್ಗಳನ್ನು ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಸುನಿಲ್ ನರೈನ್ ಯಶಸ್ವಿಯಾಗಿದ್ದಾರೆ.
2011 ರಿಂದ ಟಿ20 ಪಂದ್ಯಗಳನ್ನಾಡುತ್ತಿರುವ ಸುನಿಲ್ ನರೈನ್ ಈವರೆಗೆ 538 ವಿಕೆಟ್ ಕಬಳಿಸಿದ್ದಾರೆ. ಇದರಲ್ಲಿ 210 ವಿಕೆಟ್ಗಳನ್ನು ಪಡೆದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ಪರ ಎಂಬುದು ವಿಶೇಷ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಒಂದೇ ತಂಡದ ಪರ ಅತೀ ಹೆಚ್ಚು ವಿಕೆಟ್ ಕಬಳಿಸಿದ ವಿಶ್ವ ದಾಖಲೆಯನ್ನು ನರೈನ್ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ನ ದಾಖಲೆ ಅಫ್ಘಾನಿಸ್ತಾನದ ರಶೀದ್ ಖಾನ್ ಹೆಸರಿನಲ್ಲಿದೆ. ಈವರೆಗೆ 476 ಟಿ20 ಪಂದ್ಯಗಳನ್ನಾಡಿರುವ ರಶೀದ್ ಖಾನ್ ಒಟ್ಟು 643 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ: IPL 2025: ಪ್ಲೇಆಫ್ ಪಂದ್ಯಗಳಿಂದ 8 ಆಟಗಾರರು ಔಟ್
ಹಾಗೆಯೇ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಭಾರತೀಯ ಬೌಲರ್ನ ದಾಖಲೆ ಯುಜ್ವೇಂದ್ರ ಚಹಲ್ ಹೆಸರಿನಲ್ಲಿದೆ. ಟೀಮ್ ಇಂಡಿಯಾ, ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಚಹಲ್ ಒಟ್ಟು 324 ಟಿ20 ಪಂದ್ಯಗಳ ಮೂಲಕ 378 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಭಾರತದ ಅತ್ಯಂತ ಯಶಸ್ವಿ ಟಿ20 ಬೌಲರ್ ಎನಿಸಿಕೊಂಡಿದ್ದಾರೆ.