AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavya Maran: ಸೌತ್ ಆಫ್ರಿಕಾದಲ್ಲಿ ಸನ್‌ರೈಸರ್ಸ್ ಚಾಂಪಿಯನ್: ಕಾವ್ಯಾ ಮಾರನ್‌ ಸೆಲೆಬ್ರೇಷನ್ ಫುಲ್ ವೈರಲ್

Sunrisers Eastern Cape Champion in SA20: ಸೌತ್ ಆಫ್ರಿಕಾ 20 2024ರ ಆವೃತ್ತಿಯಲ್ಲಿ ಸನ್‌ರೈಸರ್ಸ್ ಈಸ್ಟರ್ನ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫ್ರಾಂಚೈಸಿ ಮಾಲಕಿ ಕಾವ್ಯಾ ಮಾರನ್ ಫೈನಲ್ ಪಂದ್ಯ ವೀಕ್ಷಣೆಗೆ ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದರು. ಪಂದ್ಯ ಗೆದ್ದಾಗ ಇವರು ಸಂಭ್ರಮಿಸಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

Kavya Maran: ಸೌತ್ ಆಫ್ರಿಕಾದಲ್ಲಿ ಸನ್‌ರೈಸರ್ಸ್ ಚಾಂಪಿಯನ್: ಕಾವ್ಯಾ ಮಾರನ್‌ ಸೆಲೆಬ್ರೇಷನ್ ಫುಲ್ ವೈರಲ್
Kavya Maran SA20 Final
Vinay Bhat
|

Updated on: Feb 11, 2024 | 7:58 AM

Share

ಸೌತ್ ಆಫ್ರಿಕಾ 20 ಎರಡನೇ ಆವೃತ್ತಿಯ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಸನ್‌ರೈಸರ್ಸ್ ಈಸ್ಟರ್ನ್ ಕೇಪ್ (Sunrisers Eastern Cape) ತಂಡ ಡರ್ಬನ್ ಸೂಪರ್ ಜೈಂಟ್ಸ್ ಅನ್ನು 89 ರನ್‌ಗಳಿಂದ ಸೋಲಿಸಿ ಪ್ರಶಸ್ತಿಗೆ ಮುತ್ತಿಕ್ಕಿದೆ. ಶನಿವಾರ (ಫೆಬ್ರವರಿ 10) ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ನಡೆದ ಟೈಟಲ್ ಡಿಸೈಡರ್ ಪಂದ್ಯದಲ್ಲಿ ಆರೆಂಜ್ ಆರ್ಮಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಟಾಮ್ ಅಬೆಲ್ (55) ಮತ್ತು ಟ್ರಿಸ್ಟಾನ್ ಸ್ಟಬ್ಸ್ (56*) ಅವರ ಅರ್ಧಶತಕಗಳ ನೆರವಿನಿಂದ ಒಟ್ಟು 20 ಓವರ್‌ಗಳಲ್ಲಿ ಮೂರು ವಿಕೆಟ್‌ಗಳ ನಷ್ಟಕ್ಕೆ 204 ರನ್ ಗಳಿಸಿತು. 205 ರನ್‌ಗಳ ಕಠಿಣ ಗುರಿ ಬೆನ್ನಟ್ಟಲು ಸೂಪರ್ ಜೈಂಟ್ಸ್‌ ಪರದಾಡಿ 17 ಓವರ್‌ಗಳಲ್ಲಿ 115 ರನ್‌ಗಳಿಗೆ ಆಲೌಟ್ ಆಯಿತು.

ಡಿಎಸ್‌ಜಿ ಸ್ಟಾರ್ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅವರು ಫೈನಲ್ ಪಂದ್ಯದಲ್ಲಿ ತಮ್ಮ ಖಾತೆಯನ್ನು ತೆರೆಯಲು ಸಾಧ್ಯವಾಗಲಿಲ್ಲ ಮತ್ತು ಒಟ್ನಿಯೆಲ್ ಬಾರ್ಟ್‌ಮ್ಯಾನ್ ಅವರು ಗೋಲ್ಡನ್ ಡಕ್‌ಗಾಗಿ ಪೆವಿಲಿಯನ್‌ಗೆ ಹಿಂತಿರುಗಿದರು. ಇದು ಸೂಪರ್ ಜೈಂಟ್ಸ್ ಸೋಲಿಗೆ ಮುಖ್ಯ ಕಾರಣವಾಯಿತು. ಸನ್‌ರೈಸರ್ಸ್ ಪರ ಆಲ್‌ರೌಂಡರ್ ಮಾರ್ಕೊ ಜಾನ್ಸನ್ ನಾಲ್ಕು ಓವರ್‌ಗಳ ಕೋಟಾದಲ್ಲಿ 30 ರನ್‌ಗಳಿಗೆ ಐದು ವಿಕೆಟ್ ಪಡೆದು ಮಿಂಚಿದರು.

ಇಂದು ಆಸೀಸ್ ವಿರುದ್ಧ U19 ವಿಶ್ವಕಪ್ ಫೈನಲ್: ಇದು ಸೇಡಿನ ಪಂದ್ಯವಲ್ಲ ಎಂದ ಭಾರತದ ನಾಯಕ

SA20 2024 ರ ಫೈನಲ್‌ ವೀಕ್ಷಿಸಲು, ಸನ್‌ರೈಸರ್ಸ್ ತಂಡದ ಮಾಲಕಿ ಕಾವ್ಯಾ ಮಾರನ್ ಸಹ ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದರು. ಅವರು ತಮ್ಮ ತಂಡ ಬ್ಯಾಕ್-ಟು-ಬ್ಯಾಕ್ ಪ್ರಶಸ್ತಿಯ ಗೆಲುವನ್ನು ಆಚರಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಮಾರನ್ ತನ್ನ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

“ಇದು ಎರಡನೇ ಕಪ್. ಬ್ಯಾಕ್-ಟು-ಬ್ಯಾಕ್ ಪ್ರಶಸ್ತಿ ಗೆದ್ದಿರುವುದು ತುಂಬಾ ಸಂತೋಷವಿದೆ. ಬ್ಯಾಟ್ ಮತ್ತು ಚೆಂಡಿನಲ್ಲಿ ನಮ್ಮ ತಂಡ ಅತ್ಯುತ್ತಮ ಪ್ರದರ್ಶನ ನೀಡಿದೆ. ಈ ಇಡೀ ಋತುವಿನಲ್ಲಿ ಪ್ರಾಬಲ್ಯ ಸಾಧಿಸಿದ್ದೇವೆ. ಬ್ಯಾಕ್-ಟು-ಬ್ಯಾಕ್ ಪ್ರಶಸ್ತಿ ಗೆಲ್ಲುವುದು ನಂಬಲಾಗದ ಸಂಗತಿಯಾಗಿದೆ. ಆಗಾರರಿಗೆ ತುಂಬಾ ಸಂತೋಷವಾಗಿದೆ. ಎಲ್ಲರೂ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ನಾವು ಇಂದು ಆಡಿದ ಅತ್ಯಂತ ಬಲಿಷ್ಠ ತಂಡ. ಗೆಲುವು ಸಾಧಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ,” ಎಂದು ಕಾವ್ಯಾ ಮಾರನ್ ಹೇಳಿದ್ದಾರೆ.

‘ಪಂತ್ ಬಂದರೆ ಭರತ್​ಗೆ ತಂಡದಲ್ಲಿ ಜಾಗವಿಲ್ಲ’; ಟೀಂ ಇಂಡಿಯಾ ಮಾಜಿ ವೇಗಿಯ ಎಚ್ಚರಿಕೆ

SA20 2024 ಫೈನಲ್‌ನಲ್ಲಿ ಸನ್‌ರೈಸರ್ಸ್ ಈಸ್ಟರ್ನ್ ಕಪ್ ಗೆದ್ದ ನಂತರ ಕಾವ್ಯಾ ಮಾರನ್ ಮಾತು:

ಸನ್‌ರೈಸರ್ಸ್ SA20 2024 ರ ಲೀಗ್ ಹಂತದ ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಗಳಿಸಿತ್ತು. ಫೆಬ್ರವರಿ 6 ರಂದು ಕೇಶವ್ ಮಹಾರಾಜ್ ನೇತೃತ್ವದ ಡರ್ಬನ್ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಪ್ರದರ್ಶನ ತೋರಿ ಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡವಾಯಿತು. ಫೈನಲ್‌ನಲ್ಲಿಯೂ ಸಹ, ಸನ್‌ರೈಸರ್ಸ್ ಆರಂಭದಿಂದಲೂ ಪ್ರಾಬಲ್ಯ ಸಾಧಿಸಿ ಸ್ಮರಣೀಯ ಗೆಲುವಿನೊಂದಿಗೆ ಪ್ರಶಸ್ತಿಯನ್ನು ಎತ್ತಿಹಿಡಿದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು