AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Points Table: ಖಾತೆ ತೆರೆದ ಎಸ್​ಆರ್​ಹೆಚ್, ದ್ವಿತೀಯ ಸ್ಥಾನಕ್ಕೆ ಜಿಗಿದ ಕೆಕೆಆರ್: ಐಪಿಎಲ್ 2023 ಟೇಬಲ್ ಟಾಪರ್ ಯಾರು?

IPL 2023: ಪಂಜಾಬ್ ಹಾಗೂ ಎಸ್​ಆರ್​ಹೆಚ್ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ನಲ್ಲಿ ಸಂಪೂರ್ಣ ಬದಲಾವಣೆ ಆಗಿದೆ. ಹಾಗಾದರೆ ಪಾಯಿಂಟ್ಸ್ ಟೇಬಲ್ ಹೇಗಿದೆ?, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL 2023 Points Table: ಖಾತೆ ತೆರೆದ ಎಸ್​ಆರ್​ಹೆಚ್, ದ್ವಿತೀಯ ಸ್ಥಾನಕ್ಕೆ ಜಿಗಿದ ಕೆಕೆಆರ್: ಐಪಿಎಲ್ 2023 ಟೇಬಲ್ ಟಾಪರ್ ಯಾರು?
IPL 2023
Vinay Bhat
|

Updated on: Apr 10, 2023 | 9:17 AM

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿ ದಿನದಿಂದ ದಿನಕ್ಕೆ ರೋಚಕತೆ ಪಡೆಯುತ್ತಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಭಾನುವಾರ ಐಪಿಎಲ್​ನಲ್ಲಿ ಎರಡು ಪಂದ್ಯಗಳು ನಡೆದವು. ತುದಿಗಾಲಿನಲ್ಲಿ ನಿಲ್ಲಿಸಿದ್ದ ಗುಜರಾತ್ ಟೈಟಾನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (GT vs KKR) ನಡುವಣ ಪಂದ್ಯದಲ್ಲಿ ಕೊನೆಯ ಓವರ್​ನಲ್ಲಿ 29 ರನ್ ಸಿಡಿಸಿ ಕೆಕೆಆರ್ ರೋಚಕ ಜಯ ಸಾಧಿಸಿತು. ಮತ್ತೊಂದು ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ಗೆ ಸೋಲುಣಿಸಿ ಸನ್​ರೈಸರ್ಸ್ ಹೈದರಾಬಾದ್ ತಂಡ ಖಾತೆ ತೆರೆದಿದೆ. ಇದೀಗ ಪಂಜಾಬ್ ಹಾಗೂ ಎಸ್​ಆರ್​ಹೆಚ್ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ನಲ್ಲಿ ಸಂಪೂರ್ಣ ಬದಲಾವಣೆ ಆಗಿದೆ. ಹಾಗಾದರೆ ಪಾಯಿಂಟ್ಸ್ ಟೇಬಲ್ ಹೇಗಿದೆ ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಭರ್ಜರಿ ಆಟ ಆಡುತ್ತಿರುವ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲುಂಡು ಆರ್​ಆರ್​ ಟೇಬಲ್ ಟಾಪ್​ನಲ್ಲಿದೆ. +2.067 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ದ್ವಿತೀಯ ಸ್ಥಾನಕ್ಕೆ ಜಿಗಿದಿದ್ದು ಆರ್​ಆರ್​ ರೀತಿ ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲುಂಡು +1.375 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಕಂಡು ಒಂದು ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಲಖನೌ ಸೂಪರ್ ಜೇಂಟ್ಸ್ ತಂಡ ಮೂರನೇ ಸ್ಥಾನದಲ್ಲಿದೆ. +1.358 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಗುಜರಾತ್ ಟೈಟಾನ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದ್ದು ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲುಂಡು +0.431 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಕಂಡು ಒಂದು ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಸ್ಥಾನದಲ್ಲಿದೆ. +0.356 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಪಂಜಾಬ್ ಕಿಂಗ್ಸ್ ಕೂಡ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಕಂಡು ಒಂದು ಪಂದ್ಯದಲ್ಲಿ ಸೋಲು ಕಾಣುವ ಮೂಲಕ 4 ಅಂಕ ಹೊಂದಿ +0.235ರನ್​ರೇಟ್​ನೊಂದಿಗೆ ಆರನೇ ಸ್ಥಾನದಲ್ಲಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಎರಡು ಪಂದ್ಯಗಳ ಪೈಕಿ ಒಂದು ಒಂದು ಸೋಲು ಕಂಡು 2 ಅಂಕ ಸಂಪಾದಿಸಿ -1.256 ರನ್​ರೇಟ್ ಹೊಂದಿದೆ.
  • ಕೊನೆಯ ಸ್ಥಾನದಲ್ಲಿದ್ದ ಸನ್​ರೈಸರ್ಸ್ ಹೈದರಾಬಾದ್ ತಂಡ ಖಾತೆ ತೆರೆದು ಎಂಟನೇ ಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯದಲ್ಲಿ ಎರಡರಲ್ಲೂ ಸೋಲು ಒಂದರಲ್ಲಿ ಜಯ ಕಂಡು 1 ಅಂಕ ಸಂಪಾದಿಸಿ -1.502 ರನ್​ರೇಟ್ ಹೊಂದಿದೆ.
  • ಮುಂಬೈ ಇಂಡಿಯನ್ಸ್ ಒಂಬತ್ತನೆ ಸ್ಥಾನದಲ್ಲಿದೆ. ಆಡಿದ ಎರಡೂ ಪಂದ್ಯದಲ್ಲಿ ಸೋಲು ಕಂಡು ಯಾವುದೇ ಅಂಕ ಸಂಪಾದಿಸದೆ -1.394 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ ಮೂರೂ ಪಂದ್ಯಗಳಲ್ಲಿ ಸೋಲು ಕಂಡು ಯಾವುದೇ ಅಂಕ ಸಂಪಾದಿಸದೆ -2.092 ರನ್​ರೇಟ್ ಹೊಂದಿದೆ.

ವಾಹನ ಸವಾರರ ಗಮನಕ್ಕೆ: ಇಂದು ಬೆಂಗಳೂರಿನಲ್ಲಿ IPL ಪಂದ್ಯ, ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ

ಆರೆಂಜ್ ಕ್ಯಾಪ್:

ಇದನ್ನೂ ಓದಿ
Image
Rinku Singh: ರಿಂಕು ಸಿಂಗ್ ಆಟ ನೋಡಿ ಶಾರುಖ್​, ರಣವೀರ್, ಆರ್ಯನ್ ಹೇಳಿದ್ದೇನು ನೋಡಿ..
Image
Rinku Singh: ಒಂದೇ ಓವರ್​​ನಲ್ಲಿ 5 ಸಿಕ್ಸರ್: ರಿಂಕು ಸಿಂಗ್ ಸಿಡಿಸಿದ ಒಂದೊಂದು ಸಿಕ್ಸ್ ಹೇಗಿತ್ತು ನೋಡಿ
Image
IPL 2023: ಹಿಂದೆಂದೂ ಕಂಡರಿಯದ ಚೇಸಿಂಗ್: ಐಪಿಎಲ್​ನಲ್ಲಿ ದಾಖಲೆ ನಿರ್ಮಿಸಿದ ರಿಂಕು ಸಿಂಗ್
Image
RCB vs LSG, IPL 2023: ಚಿನ್ನಸ್ವಾಮಿಯಲ್ಲಿಂದು ಆರ್​ಸಿಬಿ-ಲಖನೌ ಮುಖಾಮುಖಿ: ಗೆಲ್ಲುತ್ತಾ ಡುಪ್ಲೆಸಿಸ್ ಪಡೆ?

ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಮೂರು ಪಂದ್ಯಗಳಲ್ಲಿ ಎರಡು ಅರ್ಧಶತಕ ಸಿಡಿಸಿ ಒಟ್ಟು 255 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಸಿಎಸ್​ಕೆ ತಂಡದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಇದ್ದು 189 ರನ್ ಕಲೆಹಾಕಿದ್ದಾರೆ. ಡೇವಿಡ್ ವಾರ್ನರ್ ಮೂರನೇ ಸ್ಥಾನದಲ್ಲಿದ್ದು 158 ರನ್ ಗಳಿಸಿದ್ದಾರೆ.

ಪರ್ಪಲ್ ಕ್ಯಾಪ್:

ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ರಶೀದ್ ಖಾನ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಕೆಕೆಆರ್ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು. ಮೂರು ಪಂದ್ಯಗಳಿಂದ ಒಟ್ಟು 8 ವಿಕೆಟ್ ಕಿತ್ತು ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ. ಯುಜ್ವೇಂದ್ರ ಚಹಲ್ ಕೂಡ ಆಡಿದ ಮೂರು ಪಂದ್ಯಗಳಿಂದ 8 ವಿಕೆಟ್ ಪಡೆದು ದ್ವಿತೀಯ ಸ್ಥಾನದಲ್ಲಿದೆ. ಲಖನೌ ತಂಡದ ಮಾರ್ಕ್ ವುಡ್ ತೃತೀಯ ಸ್ಥಾನದಲ್ಲಿದ್ದು ಆಡಿದ ಮೂರು ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್