IPL 2023
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಟೂರ್ನಿ ದಿನದಿಂದ ದಿನಕ್ಕೆ ರೋಚಕತೆ ಪಡೆಯುತ್ತಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಭಾನುವಾರ ಐಪಿಎಲ್ನಲ್ಲಿ ಎರಡು ಪಂದ್ಯಗಳು ನಡೆದವು. ತುದಿಗಾಲಿನಲ್ಲಿ ನಿಲ್ಲಿಸಿದ್ದ ಗುಜರಾತ್ ಟೈಟಾನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (GT vs KKR) ನಡುವಣ ಪಂದ್ಯದಲ್ಲಿ ಕೊನೆಯ ಓವರ್ನಲ್ಲಿ 29 ರನ್ ಸಿಡಿಸಿ ಕೆಕೆಆರ್ ರೋಚಕ ಜಯ ಸಾಧಿಸಿತು. ಮತ್ತೊಂದು ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ಗೆ ಸೋಲುಣಿಸಿ ಸನ್ರೈಸರ್ಸ್ ಹೈದರಾಬಾದ್ ತಂಡ ಖಾತೆ ತೆರೆದಿದೆ. ಇದೀಗ ಪಂಜಾಬ್ ಹಾಗೂ ಎಸ್ಆರ್ಹೆಚ್ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್ನಲ್ಲಿ ಸಂಪೂರ್ಣ ಬದಲಾವಣೆ ಆಗಿದೆ. ಹಾಗಾದರೆ ಪಾಯಿಂಟ್ಸ್ ಟೇಬಲ್ ಹೇಗಿದೆ ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.
- ಭರ್ಜರಿ ಆಟ ಆಡುತ್ತಿರುವ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲುಂಡು ಆರ್ಆರ್ ಟೇಬಲ್ ಟಾಪ್ನಲ್ಲಿದೆ. +2.067 ರನ್ರೇಟ್ನೊಂದಿಗೆ 4 ಅಂಕ ಸಂಪಾದಿಸಿದೆ.
- ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ದ್ವಿತೀಯ ಸ್ಥಾನಕ್ಕೆ ಜಿಗಿದಿದ್ದು ಆರ್ಆರ್ ರೀತಿ ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲುಂಡು +1.375 ರನ್ರೇಟ್ನೊಂದಿಗೆ 4 ಅಂಕ ಸಂಪಾದಿಸಿದೆ.
- ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಕಂಡು ಒಂದು ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಲಖನೌ ಸೂಪರ್ ಜೇಂಟ್ಸ್ ತಂಡ ಮೂರನೇ ಸ್ಥಾನದಲ್ಲಿದೆ. +1.358 ರನ್ರೇಟ್ನೊಂದಿಗೆ 4 ಅಂಕ ಸಂಪಾದಿಸಿದೆ.
- ಗುಜರಾತ್ ಟೈಟಾನ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದ್ದು ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲುಂಡು +0.431 ರನ್ರೇಟ್ನೊಂದಿಗೆ 4 ಅಂಕ ಸಂಪಾದಿಸಿದೆ.
- ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಕಂಡು ಒಂದು ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಸ್ಥಾನದಲ್ಲಿದೆ. +0.356 ರನ್ರೇಟ್ನೊಂದಿಗೆ 4 ಅಂಕ ಸಂಪಾದಿಸಿದೆ.
- ಪಂಜಾಬ್ ಕಿಂಗ್ಸ್ ಕೂಡ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಕಂಡು ಒಂದು ಪಂದ್ಯದಲ್ಲಿ ಸೋಲು ಕಾಣುವ ಮೂಲಕ 4 ಅಂಕ ಹೊಂದಿ +0.235ರನ್ರೇಟ್ನೊಂದಿಗೆ ಆರನೇ ಸ್ಥಾನದಲ್ಲಿದೆ.
- ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಎರಡು ಪಂದ್ಯಗಳ ಪೈಕಿ ಒಂದು ಒಂದು ಸೋಲು ಕಂಡು 2 ಅಂಕ ಸಂಪಾದಿಸಿ -1.256 ರನ್ರೇಟ್ ಹೊಂದಿದೆ.
- ಕೊನೆಯ ಸ್ಥಾನದಲ್ಲಿದ್ದ ಸನ್ರೈಸರ್ಸ್ ಹೈದರಾಬಾದ್ ತಂಡ ಖಾತೆ ತೆರೆದು ಎಂಟನೇ ಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯದಲ್ಲಿ ಎರಡರಲ್ಲೂ ಸೋಲು ಒಂದರಲ್ಲಿ ಜಯ ಕಂಡು 1 ಅಂಕ ಸಂಪಾದಿಸಿ -1.502 ರನ್ರೇಟ್ ಹೊಂದಿದೆ.
- ಮುಂಬೈ ಇಂಡಿಯನ್ಸ್ ಒಂಬತ್ತನೆ ಸ್ಥಾನದಲ್ಲಿದೆ. ಆಡಿದ ಎರಡೂ ಪಂದ್ಯದಲ್ಲಿ ಸೋಲು ಕಂಡು ಯಾವುದೇ ಅಂಕ ಸಂಪಾದಿಸದೆ -1.394 ರನ್ರೇಟ್ ಹೊಂದಿದೆ.
- ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ ಮೂರೂ ಪಂದ್ಯಗಳಲ್ಲಿ ಸೋಲು ಕಂಡು ಯಾವುದೇ ಅಂಕ ಸಂಪಾದಿಸದೆ -2.092 ರನ್ರೇಟ್ ಹೊಂದಿದೆ.
ವಾಹನ ಸವಾರರ ಗಮನಕ್ಕೆ: ಇಂದು ಬೆಂಗಳೂರಿನಲ್ಲಿ IPL ಪಂದ್ಯ, ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ
ಆರೆಂಜ್ ಕ್ಯಾಪ್:
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಮೂರು ಪಂದ್ಯಗಳಲ್ಲಿ ಎರಡು ಅರ್ಧಶತಕ ಸಿಡಿಸಿ ಒಟ್ಟು 255 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಸಿಎಸ್ಕೆ ತಂಡದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಇದ್ದು 189 ರನ್ ಕಲೆಹಾಕಿದ್ದಾರೆ. ಡೇವಿಡ್ ವಾರ್ನರ್ ಮೂರನೇ ಸ್ಥಾನದಲ್ಲಿದ್ದು 158 ರನ್ ಗಳಿಸಿದ್ದಾರೆ.
ಪರ್ಪಲ್ ಕ್ಯಾಪ್:
ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ರಶೀದ್ ಖಾನ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಕೆಕೆಆರ್ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು. ಮೂರು ಪಂದ್ಯಗಳಿಂದ ಒಟ್ಟು 8 ವಿಕೆಟ್ ಕಿತ್ತು ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ. ಯುಜ್ವೇಂದ್ರ ಚಹಲ್ ಕೂಡ ಆಡಿದ ಮೂರು ಪಂದ್ಯಗಳಿಂದ 8 ವಿಕೆಟ್ ಪಡೆದು ದ್ವಿತೀಯ ಸ್ಥಾನದಲ್ಲಿದೆ. ಲಖನೌ ತಂಡದ ಮಾರ್ಕ್ ವುಡ್ ತೃತೀಯ ಸ್ಥಾನದಲ್ಲಿದ್ದು ಆಡಿದ ಮೂರು ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ