CSK vs SRH, IPL 2025: ಟಾಸ್ ಗೆದ್ದ ಎಸ್ಆರ್ಹೆಚ್: ಧೋನಿ ತಂಡದಲ್ಲಿ ಮಹತ್ವದ ಬದಲಾವಣೆ
Chennai Super Kings vs Sunrisers Hyderabad: ಐದು ಬಾರಿಯ ಚಾಂಪಿಯನ್ ಸಿಎಸ್‌ಕೆ ತಂಡ ಇದುವರೆಗೆ ಎಂಟು ಪಂದ್ಯಗಳಲ್ಲಿ ಕೇವಲ ಎರಡನ್ನು ಮಾತ್ರ ಗೆದ್ದಿದ್ದು, ಪ್ಲೇಆಫ್‌ಗೆ ಪ್ರವೇಶ ಪಡೆಯುವ ಅವರ ಆಸೆ ಬಹುತೇಕ ಕಮರಿ ಹೋಗಿದೆ. ಸನ್‌ರೈಸರ್ಸ್ ಹೈದರಾಬಾದ್‌ನಲ್ಲೂ ಇದೇ ಪರಿಸ್ಥಿತಿ. ಈ ಋತುವಿನಲ್ಲಿ ಸನ್‌ರೈಸರ್ಸ್ ಕೂಡ 8 ಪಂದ್ಯಗಳಲ್ಲಿ 6 ರಲ್ಲಿ ಸೋತಿದೆ.

ಬೆಂಗಳೂರು (ಏ. 25): ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 43 ನೇ ಪಂದ್ಯವು ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (Chennai Super Kings vs Sunrisers Hyderabad) ನಡುವೆ ನಡೆಯುತ್ತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಪಂದ್ಯ ಶುರುವಾಗಲಿದ್ದು, ಎರಡೂ ತಂಡಗಳು ಚೆನ್ನೈನ ತವರು ಮೈದಾನ ಎಂಎ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲು ಸಜ್ಜಾಗಿವೆ. ಈ ಋತುವಿನಲ್ಲಿ, ಸನ್‌ರೈಸರ್ಸ್ ಮತ್ತು ಚೆನ್ನೈ ಎರಡರ ಸ್ಥಿತಿಯೂ ಒಂದೇ ಆಗಿದೆ. ಐದು ಬಾರಿಯ ಚಾಂಪಿಯನ್ ಸಿಎಸ್‌ಕೆ ತಂಡ ಇದುವರೆಗೆ ಎಂಟು ಪಂದ್ಯಗಳಲ್ಲಿ ಕೇವಲ ಎರಡನ್ನು ಮಾತ್ರ ಗೆದ್ದಿದ್ದು, ಪ್ಲೇಆಫ್‌ಗೆ ಪ್ರವೇಶ ಪಡೆಯುವ ಅವರ ಆಸೆ ಬಹುತೇಕ ಕಮರಿ ಹೋಗಿದೆ.
ಸನ್‌ರೈಸರ್ಸ್ ಹೈದರಾಬಾದ್‌ನಲ್ಲೂ ಇದೇ ಪರಿಸ್ಥಿತಿ. ಈ ಋತುವಿನಲ್ಲಿ ಸ್ಫೋಟಕ ಆರಂಭ ಕಂಡಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ, ಲಯ ಕಳೆದುಕೊಂಡ ನಂತರ ಮತ್ತೆ ಲಯಕ್ಕೆ ಮರಳಲು ಸಾಧ್ಯವಾಗಿಲ್ಲ. ಈ ಋತುವಿನಲ್ಲಿ ಸನ್‌ರೈಸರ್ಸ್ ಕೂಡ 8 ಪಂದ್ಯಗಳಲ್ಲಿ 6 ರಲ್ಲಿ ಸೋತಿದೆ. ಇಲ್ಲಿಂದ, ಸನ್‌ರೈಸರ್ಸ್ ತಂಡವು ಉಳಿದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಟೂರ್ನಿಯನ್ನು ಕೊನೆಗೊಳಿಸಲು ಪ್ರಯತ್ನಿಸಬೇಕಿದೆ.
ಹೀಗಾಗಿ, ಈ ಎರಡೂ ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಈಗಾಗಲೇ ಟಾಸ್ ಗೆದ್ದ ಎಸ್ಆರ್ಹೆಚ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಸಿಎಸ್‌ಕೆ ತಂಡದಲ್ಲಿ ಎರಡು ಮಹತ್ವದ ಬದಲಾವಣೆ ಮಾಡಲಾಗಿದೆ. ರಚಿನ್ ರವೀಂದ್ರ ಮತ್ತು ವಿಜಯ್ ಶಂಕರ್ ಅವರನ್ನು ಕೈಬಿಡಲಾಗಿದ್ದು, ಡೆವಾಲ್ಡ್ ಬ್ರೆವಿಸ್ ಮತ್ತು ದೀಪಕ್ ಹೂಡ ಸ್ಥಾನ ಪಡೆದುಕೊಂಡಿದ್ದಾರೆ.
IPL 2025: ಐಪಿಎಲ್ ದ್ವಿತೀಯಾರ್ಧಕ್ಕೆ ಕೆಕೆಆರ್ ತಂಡ ಸೇರಿಕೊಳ್ಳಲಿರುವ ಜಮ್ಮು ಕಾಶ್ಮೀರ ವೇಗಿ
ಉಭಯ ತಂಡಗಳ ಪ್ಲೇಯಿಂಗ್ XI:
ಚೆನ್ನೈ ಸೂಪರ್ ಕಿಂಗ್ಸ್: ಶೇಕ್ ರಶೀದ್, ಆಯುಷ್ ಮ್ಹಾತ್ರೆ, ಸ್ಯಾಮ್ ಕುರ್ರನ್, ರವೀಂದ್ರ ಜಡೇಜಾ, ಶಿವಂ ದುಬೆ, ಡೆವಾಲ್ಡ್ ಬ್ರೆವಿಸ್, ಎಂಎಸ್ ಧೋನಿ (ನಾಯಕ, ವಿಕೆಟ್ ಕೀಪರ್), ದೀಪಕ್ ಹೂಡ, ನೂರ್ ಅಹ್ಮದ್, ಖಲೀಲ್ ಅಹ್ಮದ್, ಮಥೀಷ ಪತಿರಾನ.
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅನಿಕೇತ್ ವರ್ಮಾ, ಕೆಮಿಂದು ಮೆಂಡೀಸ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಜಯದೇವ್ ಉನಾದ್ಕಟ್, ಜೀಶನ್ ಅನ್ಸಾರಿ, ಮೊಹಮ್ಮದ್ ಶಮಿ.
ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯಗಳ ಅಂಕಿಅಂಶಗಳನ್ನು ನೋಡಿದರೆ, ತುಂಬಾ ಆಸಕ್ತಿದಾಯಕವಾಗಿದೆ. ಈ ಮೈದಾನದಲ್ಲಿ ಇಲ್ಲಿಯವರೆಗೆ ಒಟ್ಟು 89 ಪಂದ್ಯಗಳು ನಡೆದಿವೆ. ಇದರಲ್ಲಿ 51 ಬಾರಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಈ ಸಂಖ್ಯೆ 38. ಈ ಮೈದಾನದಲ್ಲಿ ದಾಖಲಾದ ಅತಿ ಹೆಚ್ಚು ಸ್ಕೋರ್ ಎಂದರೆ 5 ವಿಕೆಟ್‌ಗಳಿಗೆ 246 ರನ್‌ಗಳು, ಕನಿಷ್ಠ ಸ್ಕೋರ್ 70 ರನ್‌ಗಳು. ಸನ್‌ರೈಸರ್ಸ್ ಮತ್ತು ಸಿಎಸ್‌ಕೆ ನಡುವಿನ ಪಂದ್ಯದ ಬಗ್ಗೆ ಮಾತನಾಡಿದರೆ, ಎರಡೂ ತಂಡಗಳು ಒಟ್ಟು 21 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಸಿಎಸ್‌ಕೆ ಪ್ರಾಬಲ್ಯ ಸಾಧಿಸಿದೆ. ಸಿಎಸ್‌ಕೆ ತಂಡ ಸನ್‌ರೈಸರ್ಸ್ ವಿರುದ್ಧ 15 ಪಂದ್ಯಗಳನ್ನು ಗೆದ್ದಿದ್ದರೆ, ಸನ್‌ರೈಸರ್ಸ್ ಕೇವಲ 6 ಪಂದ್ಯಗಳನ್ನು ಗೆದ್ದಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




