AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

31 ಸಿಕ್ಸ್​, 445 ರನ್​ಗಳು: ದಿ ಹಂಡ್ರೆಡ್​ ಲೀಗ್​ನಲ್ಲಿ ಭರ್ಜರಿ ದಾಖಲೆ

Sunrisers Leeds vs London Spirit: ದಿ ಹಂಡ್ರೆಡ್ ಲೀಗ್​ನ 20ನೇ ಪಂದ್ಯದಲ್ಲಿ ಹೊಸ ದಾಖಲೆಗಳು ನಿರ್ಮಾಣವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಲೀಡ್ಸ್ ತಂಡವು 100 ಎಸೆತಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 241 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಲಂಡನ್ ಸ್ಪಿರಿಟ್ ತಂಡವು 204 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸನ್​ರೈಸರ್ಸ್ ಲೀಡ್ಸ್​ ತಂಡ 37 ರನ್​ಗಳ ಜಯ ಸಾಧಿಸಿದೆ.

31 ಸಿಕ್ಸ್​, 445 ರನ್​ಗಳು: ದಿ ಹಂಡ್ರೆಡ್​ ಲೀಗ್​ನಲ್ಲಿ ಭರ್ಜರಿ ದಾಖಲೆ
Sunrisers LeedsImage Credit source: GettyImages
ಝಾಹಿರ್ ಯೂಸುಫ್
|

Updated on: Aug 05, 2026 | 1:42 PM

Share

ಹೆಡಿಂಗ್ಲೇ ಮೈದಾನದಲ್ಲಿ ನಡೆದ ‘ದಿ ಹಂಡ್ರೆಡ್’ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರನ್ ಹಾಗೂ ಸಿಕ್ಸರ್‌ಗಳ ಹೊಸ ಇತಿಹಾಸವೇ ಸೃಷ್ಟಿಯಾಗಿದೆ. ಲಂಡನ್ ಸ್ಪಿರಿಟ್ ವಿರುದ್ಧದ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಅಬ್ಬರಿಸಿದ ಸನ್‌ರೈಸರ್ಸ್ ಲೀಡ್ಸ್ ತಂಡವು 100 ಎಸೆತಗಳಲ್ಲಿ ಬರೋಬ್ಬರಿ 241 ರನ್ ಪೇರಿಸಿದೆ. ಈ ಮೂಲಕ ದಿ ಹಂಡ್ರೆಡ್ ಲೀಗ್​ ಟೂರ್ನಿಯ ಇತಿಹಾಸದಲ್ಲೇ ಸಾರ್ವಕಾಲಿಕ ಗರಿಷ್ಠ ಟೀಮ್ ಸ್ಕೋರ್ ಗಳಿಸಿದ ದಾಖಲೆ ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಲಂಡನ್ ಸ್ಪಿರಿಟ್ ತಂಡದ ನಾಯಕ ಲಿಯಾಮ್ ಲಿವಿಂಗ್​ಸ್ಟೋನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಲೀಡ್ಸ್ ಪರ ಆರಂಭಿಕ ದಾಂಡಿಗ ಮಿಚೆಲ್ ಮಾರ್ಷ್ 37 ಎಸೆತಗಳಲ್ಲಿ 76 ರನ್ ಬಾರಿಸಿದ್ದರು. ಇನ್ನು ರಯಾನ್ ರಿಕೆಲ್ಟನ್ 42 ಎಸೆತಗಳಲ್ಲಿ 94 ರನ್​ ಚಚ್ಚಿದರು. ಹಾಗೆಯೇ ಹ್ಯಾರಿ ಬ್ರೂಕ್ 18 ಎಸೆತಗಳಲ್ಲಿ 55 ರನ್ ಸಿಡಿಸಿದರು.

ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಸನ್​ರೈಸರ್ಸ್ ಲೀಡ್ಸ್ ತಂಡವು 100 ಎಸೆತಗಳಲ್ಲಿ 2 ವಿಕೆಟ್ ಕಳೆದುಕೊಂಡು ಬರೋಬ್ಬರಿ 241 ರನ್​ ಕಲೆಹಾಕಿತು.

ದಾಖಲೆಗಳು ಧೂಳೀಪಟ:

  • ಸಾರ್ವಕಾಲಿಕ ಗರಿಷ್ಠ ಮೊತ್ತ: ಸನ್‌ರೈಸರ್ಸ್ ಲೀಡ್ಸ್ ಗಳಿಸಿದ 241 ರನ್ ದಿ ಹಂಡ್ರೆಡ್ ಲೀಗ್​ನಲ್ಲಿ ಮೂಡಿಬಂದ ಗರಿಷ್ಠ ಸ್ಕೋರ್. ಈ ಮೂಲಕ ಓವಲ್ ಇನ್ವಿಸಿಬಲ್ಸ್ ತಂಡದ (226 ರನ್) ಹೆಸರಿನಲ್ಲಿದ್ದ ಹಳೆಯ ದಾಖಲೆಯನ್ನು ಅಳಿಸಿ ಹಾಕಿದೆ.
  • ದಾಖಲೆಯ ಆರಂಭಿಕ ಜೊತೆಯಾಟ: ಮಿಚೆಲ್ ಮಾರ್ಷ್ ಮತ್ತು ರಯಾನ್ ರಿಕಲ್ಟನ್ ಜೋಡಿ ಮೊದಲ ವಿಕೆಟ್‌ಗೆ ಕೇವಲ 65 ಎಸೆತಗಳಲ್ಲಿ 148 ರನ್‌ ಚಚ್ಚುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
  • ಒಂದೇ ಇನ್ನಿಂಗ್ಸ್‌ನಲ್ಲಿ ಗರಿಷ್ಠ ಸಿಕ್ಸರ್: ಸನ್​ರೈಸರ್ಸ್​ ಲೀಡ್ಸ್ ಬ್ಯಾಟರ್‌ಗಳು ಒಟ್ಟು 21 ಸಿಕ್ಸರ್‌ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ.

ಲಂಡನ್ ಸ್ಪಿರಿಟ್ ಫೈಟ್:

242 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಲಂಡನ್ ಸ್ಪಿರಿಟ್ ಪರ ಲಿಯಾಮ್ ಲಿವಿಂಗ್​ಸ್ಟೋನ್ ಕೇವಲ 13 ಎಸೆತಗಳಲ್ಲಿ 34 ರನ್ ಚಚ್ಚಿದರು. ಡೆವಾಲ್ಡ್ ಬ್ರೆವಿಸ್ 21 ಎಸೆತಗಳಲ್ಲಿ 38 ರನ್​ಗಳ ಕೊಡುಗೆ ನೀಡಿದರು.

ಇನ್ನು 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡೇವಿಡ್ ವಿಲ್ಲಿ ಅಕ್ಷರಶಃ ಅಬ್ಬರಿಸಿದರು. ಸನ್​ರೈಸರ್ಸ್ ಲೀಡ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ವಿಲ್ಲಿ ಕೇವಲ 46 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಅಜೇಯ 83 ರನ್ ಬಾರಿಸಿದರು. ಇದಾಗ್ಯೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 100 ಎಸೆತಗಳಲ್ಲಿ 6 ವಿಕೆಟ್ ಕಳೆದುಕೊಂಡು 204 ರನ್​ಗಳಿಸುವ ಮೂಲಕ ಲಂಡನ್ ಸ್ಪಿರಿಟ್ ತಂಡವು 37 ರನ್​ಗಳಿಂದ ಸೋಲೊಪ್ಪಿಕೊಂಡಿತು.

  • ಈ ಪಂದ್ಯದಲ್ಲಿ ಸನ್​ರೈಸರ್ಸ್ ಲೀಡ್ಸ್ 11 ಸಿಕ್ಸ್ ಸಿಡಿಸಿದರೆ, ಲಂಡನ್ ಸ್ಪಿರಿಟ್ ತಂಡ 10 ಸಿಕ್ಸರ್​ಗಳನ್ನು ಬಾರಿಸಿದ್ದರು.
  • ಇದು ದಿ ಹಂಡ್ರೆಡ್ ಲೀಗ್ ಪಂದ್ಯವೊಂದರಲ್ಲಿ ಮೂಡಿಬಂದ ಗರಿಷ್ಠ ಸಿಕ್ಸರ್​ಗಳು ಎಂಬುದು ವಿಶೇಷ.
  • ಈ ಪಂದ್ಯದಲ್ಲಿ ಮೂಡಿಬಂದ ಒಟ್ಟು ಸ್ಕೋರ್ 445 ರನ್​ಗಳು. ಇದು ಕೂಡ ದಿ ಹಂಡ್ರೆಡ್ ಲೀಗ್​ನಲ್ಲಿ ಮೂಡಿಬಂದ ಗರಿಷ್ಠ ಒಟ್ಟು ಸ್ಕೋರ್​.

ಸನ್​ರೈಸರ್ಸ್ ಲೀಡ್ಸ್ ಪ್ಲೇಯಿಂಗ್ 11:  ಮಿಚೆಲ್ ಮಾರ್ಷ್ , ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ಝಾಕ್ ಕ್ರಾಲಿ (ನಾಯಕ) , ಹ್ಯಾರಿ ಬ್ರೂಕ್ , ಡಾನ್ ಲಾರೆನ್ಸ್ , ಮ್ಯಾಥ್ಯೂ ರೆವಿಸ್ , ಬ್ರೈಡನ್ ಕಾರ್ಸ್ , ಮ್ಯಾಥ್ಯೂ ಪಾಟ್ಸ್ , ನಾಥನ್ ಎಲ್ಲಿಸ್ , ರೀಸ್ ಟೋಪ್ಲಿ , ಅಬ್ರಾರ್ ಅಹ್ಮದ್.

ಇದನ್ನೂ ಓದಿ: ಭಾರತದ ವಿರುದ್ಧದ ಟೆಸ್ಟ್​ ಸರಣಿಗೆ ಆಸ್ಟ್ರೇಲಿಯಾದ ಮಾಸ್ಟರ್ ಪ್ಲ್ಯಾನ್ ರೆಡಿ!

ಲಂಡನ್ ಸ್ಪಿರಿಟ್ ಪ್ಲೇಯಿಂಗ್ 11: ಲುವಾನ್-ಡ್ರೆ ಪ್ರಿಟೋರಿಯಸ್ , ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್) ಜೇಮ್ಸ್ ರೆವ್ , ಲಿಯಾಮ್ ಲಿವಿಂಗ್‌ಸ್ಟೋನ್ (ನಾಯಕ) , ಡೆವಾಲ್ಡ್ ಬ್ರೆವಿಸ್ , ಜೇಮ್ಸ್ ಕೋಲ್ಸ್ , ಜೇಮೀ ಓವರ್ಟನ್ , ಡೇವಿಡ್ ವಿಲ್ಲಿ , ಆಂಡ್ರ್ಯೂ ಟೈ , ಆ್ಯಡಂ ಮಿಲ್ನ್, ಆ್ಯಡಂ ಝಂಪಾ.

Follow Us
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!