VIDEO: ಅತ್ಯಾದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸುರೇಶ್ ರೈನಾ..!

| Updated By: ಝಾಹಿರ್ ಯೂಸುಫ್

Updated on: Sep 29, 2022 | 12:24 PM

Suresh Raina Catch Video: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಲೆಜೆಂಡ್ಸ್ 17 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಕಲೆಹಾಕಿದೆ. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನುಸ್ಥಗಿತಗೊಳಿಸಲಾಗಿದೆ.

VIDEO: ಅತ್ಯಾದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸುರೇಶ್ ರೈನಾ..!
Suresh Raina Catch Video
Follow us on

ಟೀಮ್ ಇಂಡಿಯಾ (Team India) ಕಂಡಂತಹ ಅತ್ಯುತ್ತಮ ಫೀಲ್ಡರ್​ಗಳಲ್ಲಿ ಒಬ್ಬರಾಗಿರುವ ಸುರೇಶ್ ರೈನಾ (Suresh Raina) ತಮ್ಮ 35ನೇ ವಯಸ್ಸಿನಲ್ಲೂ ಪರಾಕ್ರಮ ತೋರಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಇಂಡಿಯಾ ಲೆಜೆಂಡ್ಸ್ ಮತ್ತು ಆಸ್ಟ್ರೇಲಿಯಾ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅದ್ಭುತ ಕ್ಯಾಚ್ ಹಿಡಿದು ಮಿಂಚಿದರು.

ಅಭಿಮನ್ಯು ಮಿಥುನ್ ಎಸೆದ 16ನೇ ಓವರ್​ನಲ್ಲಿ ಆಸ್ಟ್ರೇಲಿಯಾ ಲೆಜೆಂಡ್ಸ್‌ನ ಬೆನ್ ಡಂಕ್ ಬ್ಯಾಕ್‌ವರ್ಡ್ ಪಾಯಿಂಟ್ ಮೂಲಕ ಭರ್ಜರಿ ಶಾಟ್ ಬಾರಿಸಲು ಪ್ರಯತ್ನಿಸಿದರು. ಆದರೆ ಅಲ್ಲದೆ ಫೀಲ್ಡಿಂಗ್​ನಲ್ಲಿದ್ದ ರೈನಾ ಗಾಳಿಯಲ್ಲಿ ಹಾರಿ ಅದ್ಭುತವಾಗಿ ಚೆಂಡನ್ನು ಹಿಡಿದರು. ಇತ್ತ ಸುರೇಶ್ ರೈನಾ ಅವರ ಈ ಸೂಪರ್​ಮ್ಯಾನ್ ಕ್ಯಾಚ್ ನೋಡಿ ಸ್ಟೇಡಿಯಂನಲ್ಲಿದ್ದ ಪ್ರೇಕ್ಷಕರು ನಿಬ್ಬೆರಗಾದರು. ಇದೀಗ ಈ ಸೂಪರ್ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಸೂಪರ್​​ ಮ್ಯಾನ್ ರೈನಾ ಸಾಹಸಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಇದನ್ನೂ ಓದಿ
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಲೆಜೆಂಡ್ಸ್ 17 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಕಲೆಹಾಕಿದೆ. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನುಸ್ಥಗಿತಗೊಳಿಸಲಾಗಿದೆ. ಅಲ್ಲದೆ ಈ ಪಂದ್ಯವನ್ನು ಗುರುವಾರಕ್ಕೆ ಮುಂದೂಡಲಾಗಿದ್ದು, ಅದರಂತೆ ಉಳಿದ ಓವರ್​ಗಳನ್ನು ಸೆಪ್ಟೆಂಬರ್ 29 ರಂದು ಆಡಲಾಗುತ್ತದೆ.