ICC T20 Rankings: ಸೂರ್ಯನಿಗೆ ಸರಿಸಾಟಿ ಯಾರಿಲ್ಲ..! ಭರ್ಜರಿ ಬಡ್ತಿ ಪಡೆದ ಹಾರ್ದಿಕ್ ಪಾಂಡ್ಯ

| Updated By: ಪೃಥ್ವಿಶಂಕರ

Updated on: Nov 16, 2022 | 5:26 PM

ICC T20 Rankings: ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ಒಟ್ಟು 239 ರನ್ ಗಳಿಸಿದರು. ಇದರೊಂದಿಗೆ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದರು.

ICC T20 Rankings: ಸೂರ್ಯನಿಗೆ ಸರಿಸಾಟಿ ಯಾರಿಲ್ಲ..! ಭರ್ಜರಿ ಬಡ್ತಿ ಪಡೆದ ಹಾರ್ದಿಕ್ ಪಾಂಡ್ಯ
Suryakumar Yadav
Follow us on

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ (T20 World Cup 2022) ಅದ್ಭುತ ಪ್ರದರ್ಶನ ನೀಡಿದ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್, ಐಸಿಸಿ T20I ಬ್ಯಾಟ್ಸ್‌ಮನ್‌ಗಳ ಇತ್ತೀಚಿನ ಶ್ರೇಯಾಂಕದಲ್ಲಿ (ICC T20 Rankings) ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ನಂಬರ್ ಒನ್ ರೇಸ್​ನಲ್ಲಿ ಇವರಿಗಿಂತ ಮುಂದೆ ಯಾರೂ ಇಲ್ಲ, ಸದ್ಯ ಅವರ ಹತ್ತಿರ ಯಾರೂ ಇಲ್ಲ. ಸೂರ್ಯಕುಮಾರ್ ಯಾದವ್ (Suryakumar Yadav) ಟಿ20 ವಿಶ್ವಕಪ್‌ನ ಸೂಪರ್ 12 ಹಂತದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಟಿ20 ಕ್ರಿಕೆಟ್​ನ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿದ್ದಾರೆ. ಇಡೀ ಟೂರ್ನಿಯಲ್ಲಿ ಆಡಿದ 5 ಇನ್ನಿಂಗ್ಸ್‌ಗಳಲ್ಲಿ ಸೂರ್ಯ ಭರ್ಜರಿ 3 ಅರ್ಧಶತಕಗಳನ್ನು ಬಾರಿಸಿದ್ದರು.

ಟಿ20 ವಿಶ್ವಕಪ್‌ನ ಸೂಪರ್ 12 ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯ, ಟಿ20 ಕ್ರಿಕೆಟ್​ನಲ್ಲಿ ತಮ್ಮ ವೃತ್ತಿಜೀವನದ ಅತ್ಯುತ್ತಮ 869 ರೇಟಿಂಗ್ ಅಂಕಗಳನ್ನು ಗಳಿಸಿದ್ದಾರೆ. ಆದರೆ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಕೇವಲ 14 ರನ್‌ಗಳಿಗೆ ಔಟಾದ ಕಾರಣ, 869 ಅಂಗಳಲ್ಲಿ 10 ಅಂಕ ಕಡಿತಗೊಂಡಿದೆ. ಆದಾಗ್ಯೂ, ಈ ಕುಸಿತದ ನಂತರವೂ ಸೂರ್ಯ ನಂಬರ್ ಸ್ಥಾನದಲ್ಲಿ ಮುಂದುವರೆದಿದ್ದಾರೆ.

ಟಿ20 ವಿಶ್ವಕಪ್‌ನಿಂದ ಸೂರ್ಯಕುಮಾರ್‌ಗೆ ಲಾಭ

ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ಒಟ್ಟು 239 ರನ್ ಗಳಿಸಿದರು. ಇದರೊಂದಿಗೆ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದರು. ಭಾರತ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಇಂಗ್ಲೆಂಡ್‌ನ ಅಲೆಕ್ಸ್ ಹೇಲ್ಸ್ ಕೂಡ ಟಿ20 ಶ್ರೇಯಾಂಕದಲ್ಲಿ 22 ಸ್ಥಾನ ಮೇಲೇರಿ 12 ನೇ ಸ್ಥಾನಕ್ಕೆ ತಲುಪಿದ್ದಾರೆ. ಅಗ್ರ 10ರಲ್ಲಿ ಪಾಕ್ ನಾಯಕ ಬಾಬರ್ ಅಜಮ್ ಒಂದು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

ಇದನ್ನೂ ಓದಿ: Ravindra Jadeja: ಪತ್ನಿ ಪರ ಪ್ರಚಾರಕ್ಕಿಳಿದ ರವೀಂದ್ರ ಜಡೇಜಾ; ರಾಜಕೀಯಕ್ಕೆ ಬರುವ ಮುನ್ಸೂಚನೆ ನೀಡಿದ ಕ್ರಿಕೆಟರ್

ದಕ್ಷಿಣ ಆಫ್ರಿಕಾದ ರಿಲೆ ರುಸ್ಸೋ ನಂ.7ಕ್ಕೆ ಏರಿದರೆ, ನ್ಯೂಜಿಲೆಂಡ್‌ನ ಗ್ಲೆನ್ ಫಿಲಿಪ್ಸ್ ಒಂದು ಸ್ಥಾನ ಕುಸಿದು ನಂ.8ಕ್ಕೆ ತಲುಪಿದ್ದಾರೆ. ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಎರಡನೇ ಸ್ಥಾನವನ್ನುಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ವೇಳೆ ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಎಂದಿನಂತೆ 5ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇದಲ್ಲದೇ ಡೆವೊನ್ ಕಾನ್ವೇ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

ಬೌಲರ್‌ಗಳಲ್ಲಿ ಹಸರಂಗಗೆ ಅಗ್ರಸ್ಥಾನ

ಬೌಲರ್‌ಗಳ ಪೈಕಿ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಇಂಗ್ಲೆಂಡ್‌ನ ಆದಿಲ್ ರಶೀದ್ ಐದು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಹಾಗೆಯೇ ಟೂರ್ನಿಯ ಆಟಗಾರ ಹಾಗೂ ಫೈನಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಸ್ಯಾಮ್ ಕರನ್ ಕೂಡ 2 ಸ್ಥಾನ ಮೇಲೇರಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ.

ಬೌಲರ್‌ಗಳ ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ಶ್ರೀಲಂಕಾದ ವನಿಂದು ಹಸರಂಗ ಅಗ್ರಸ್ಥಾನದಲ್ಲಿ ಮುಂದುವರಿದರೆ, ಅಫ್ಘಾನಿಸ್ತಾನದ ರಶೀದ್ ಖಾನ್ ಎರಡನೇ ಸ್ಥಾನದಲ್ಲಿದ್ದಾರೆ. ಆಲ್‌ರೌಂಡರ್‌ ವಿಭಾಗದಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಮೊದಲ ಸ್ಥಾನದಲ್ಲಿದ್ದಾರೆ. ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಎರಡನೇ ಸ್ಥಾನದಲ್ಲಿದ್ದರೆ, ಭಾರತದ ಹಾರ್ದಿಕ್ ಪಾಂಡ್ಯ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Wed, 16 November 22