ICC T20 Ranking: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ; ರಿಜ್ವಾನ್ ಹಿಂದಿಕ್ಕಿ ನಂ.1 ಪಟ್ಟಕ್ಕೇರಿದ ಸೂರ್ಯಕುಮಾರ್..!

Suryakumar Yadav: ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಂ.1 ಸ್ಥಾನವನ್ನು ಅಲಂಕರಿಸಿದ್ದಾರೆ.

ICC T20 Ranking: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ; ರಿಜ್ವಾನ್ ಹಿಂದಿಕ್ಕಿ ನಂ.1 ಪಟ್ಟಕ್ಕೇರಿದ ಸೂರ್ಯಕುಮಾರ್..!
Suryakumar Yadav
Follow us
TV9 Web
| Updated By: ಪೃಥ್ವಿಶಂಕರ

Updated on:Nov 02, 2022 | 2:32 PM

ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕದಲ್ಲಿ (ICC T20 rankings) ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ (Suryakumar Yadav) ನಂ.1 ಸ್ಥಾನವನ್ನು ಅಲಂಕರಿಸಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಸತತ ಎರಡು ಅರ್ಧಶತಕಗಳನ್ನು ಸಿಡಿಸಿದ ಸೂರ್ಯ ಈ ಹಿಂದೆ ಮೊದಲ ಸ್ಥಾನದಲ್ಲಿದ್ದ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ (Mohammad Rizwan) ಅವರನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ. ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 68 ರನ್ ಗಳಿಸಿದ್ದ ಸೂರ್ಯ ತಂಡದ ಪರ ಅತ್ಯಧಿಕ ರನ್ ಗಳಿಸಿದ ಆಟಗಾರನೆನಿಸಿಕೊಂಡಿದ್ದರು. ಇದಕ್ಕೂ ಮೊದಲು ನೆದರ್ಲೆಂಡ್ಸ್ ವಿರುದ್ಧ ಭಾರತ ಆಡಿದ ಎರಡನೇ ಪಂದ್ಯದಲ್ಲೂ ಅವರು ಅರ್ಧಶತಕ ಸಿಡಿಸಿದ್ದರು.

ಸದ್ಯಕ್ಕೆ ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್ ಎಂದು ಹೇಳಬಹುದಾದ ಸೂರ್ಯಕುಮಾರ್ ಯಾದವ್ ಬುಧವಾರ ಬಿಡುಗಡೆಯಾದ ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲಿ ಅಬ್ಬರಿಸುತ್ತಿರುವ ಸೂರ್ಯ, ಪಂದ್ಯಾವಳಿಯಲ್ಲಿ ಇದುವರೆಗೆ ಆಡಿರುವ 3 ಪಂದ್ಯಗಳಲ್ಲಿ, 15, 51* ಮತ್ತು 68 ರನ್ ಕಲೆ ಹಾಕಿದ್ದಾರೆ.

ಎರಡನೇ ಬ್ಯಾಟ್ಸ್‌ಮನ್ ಸೂರ್ಯ

ಟಿ20 ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನಕ್ಕೇರಿರುವ ಭಾರತದ ಎರಡನೇ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20ಯಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ್ದರು. ವಿರಾಟ್ ಸಂಪೂರ್ಣ 1013 ದಿನಗಳಲ್ಲಿ ಟಿ20 ಶ್ರೇಯಾಂಕದಲ್ಲಿ ನಂಬರ್ 1 ಆಗಿದ್ದರು. ಸೂರ್ಯಕುಮಾರ್ ಯಾದವ್ 863 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನವನ್ನು ತಲುಪಿದ್ದು, ವಿರಾಟ್ ಕೊಹ್ಲಿ ನಂತರ ಅತಿ ಹೆಚ್ಚು ರೇಟಿಂಗ್ ಅಂಕಗಳನ್ನು ಪಡೆದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಸೂರ್ಯಕುಮಾರ್ ನಂಬರ್ 1

ಸೂರ್ಯಕುಮಾರ್ ಯಾದವ್ 863 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನಕ್ಕೆ ತಲುಪಿದ್ದಾರೆ. 2022 ರ ಟಿ20 ವಿಶ್ವಕಪ್‌ನಲ್ಲಿ ರಿಜ್ವಾನ್ ಉತ್ತಮ ಪ್ರದರ್ಶನ ನೀಡದ ಕಾರಣದಿಂದಾಗಿ 842 ರೇಟಿಂಗ್ ಪಾಯಿಂಟ್‌ಗಳೊಂದಿಗೆ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಹಾಗೆಯೇ ನ್ಯೂಜಿಲೆಂಡ್​ನ ಡೆವೊನ್ ಕಾನ್ವೇ 792 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಟಿ20 ಶ್ರೇಯಾಂಕದಲ್ಲಿ 10ನೇ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಡ್ನಿಯಲ್ಲಿ ನೆದರ್‌ಲ್ಯಾಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 25 ಎಸೆತಗಳಲ್ಲಿ ಔಟಾಗದೆ 51 ರನ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಪರ್ತ್‌ನಲ್ಲಿ ನಡೆದ ಪಂದ್ಯದಲ್ಲಿ 40 ಎಸೆತಗಳಲ್ಲಿ 68 ರನ್ ಗಳಿಸಿದ ಯಾದವ್ ಅವರು ನ್ಯೂಜಿಲೆಂಡ್‌ನ ಡೆವೊನ್ ಕಾನ್ವೇ ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅವರನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂಜಿಲೆಂಡ್ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಕೂಡ ಶ್ರೇಯಾಂಕದಲ್ಲಿ ಮೇಲಕ್ಕೇರಿದ್ದು, ಶ್ರೀಲಂಕಾ ವಿರುದ್ಧ 104 ಮತ್ತು ಇಂಗ್ಲೆಂಡ್ ವಿರುದ್ಧ 62 ರನ್ ಗಳಿಸಿದರ ಫಲವಾಗಿ ತಮ್ಮ ವೃತ್ತಿಜೀವನದ ಅತ್ಯುತ್ತಮ ಏಳನೇ ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ. ಹಾಗೆಯೇ ಬಾಂಗ್ಲಾದೇಶ ವಿರುದ್ಧದ 109 ರನ್‌ ಚಚ್ಚಿದ ದಕ್ಷಿಣ ಆಫ್ರಿಕಾ ಬ್ಯಾಟರ್ ರಿಲೇ ರೊಸ್ಸೊ ಕೂಡ ಅಗ್ರ 10 ರೊಳಗೆ ಎಂಟ್ರಿಕೊಟ್ಟಿದ್ದಾರೆ. ವೃತ್ತಿಜೀವನದ ಅತ್ಯುತ್ತಮ ಎಂಟನೇ ಸ್ಥಾನಕ್ಕೇರಿರುವ ರೊಸ್ಸೊ 17 ಸ್ಥಾನ ಮೇಲಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ 73 ರನ್​ಗಳ ಇನ್ನಿಂಗ್ಸ್ ಆಡಿದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಕೂಡ ನೂತನ ಶ್ರೇಯಾಂಕದಲ್ಲಿ ಮೂರು ಸ್ಥಾನಗಳ ಏರಿಕೆ ಕಂಡು 14 ನೇ ಸ್ಥಾನಕ್ಕೆ ಬಂದು ತಲುಪಿದ್ದಾರೆ.

Published On - 1:54 pm, Wed, 2 November 22

ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?