Suryakumar Yadav: ಹೊಸ ಸಿಕ್ಸರ್ ಕಿಂಗ್…ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Suryakumar Yadav: ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್ನಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಅತಿರಥ ಮಹಾರಥರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.
ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಸೂರ್ಯಕುಮಾರ್ ಯಾದವ್ (Suryakumar Yadav) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ತಿರುವನಂತಪುರಂನ ಗ್ರೀನ್ಫೀಲ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸೂರ್ಯ 33 ಎಸೆತಗಳಲ್ಲಿ 50 ರನ್ ಬಾರಿಸಿದ್ದರು. ಈ ವೇಳೆ ಬಲಗೈ ದಾಂಡಿಗ ಬ್ಯಾಟ್ನಿಂದ 5 ಫೋರ್ ಹಾಗು 3 ಭರ್ಜರಿ ಸಿಕ್ಸ್ಗಳು ಮೂಡಿಬಂದಿತ್ತು. ಈ ಮೂರು ಸಿಕ್ಸ್ಗಳೊಂದಿಗೆ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.
ಅಂದರೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಇದೀಗ ಸೂರ್ಯಕುಮಾರ್ ಪಾಲಾಗಿದೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಹೆಸರಿನಲ್ಲಿತ್ತು. ರಿಜ್ವಾನ್ 2021 ರಲ್ಲಿ ಬರೋಬ್ಬರಿ 42 ಸಿಕ್ಸ್ ಬಾರಿಸಿ ದಾಖಲೆ ಬರೆದಿದ್ದರು.
ಇದೀಗ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಒಂದೇ ವರ್ಷದಲ್ಲಿ 45 ಸಿಕ್ಸ್ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಪಾಕ್ ಆಟಗಾರ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಒಂದು ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾ ಪರ ಮತ್ತೊಂದು ದಾಖಲೆ:
ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್ನಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಅತಿರಥ ಮಹಾರಥರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಅಂದರೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಇದೀಗ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಶಿಖರ್ ಧವನ್ ಅವರ ಹೆಸರಿನಲ್ಲಿತ್ತು.
ಆದರೆ 2022 ರಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಸೂರ್ಯಕುಮಾರ್ ಯಾದವ್ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಅವರನ್ನು ಹಿಂದಿಕ್ಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಒಂದು ವರ್ಷದಲ್ಲಿ 700 ಕ್ಕೂ ಅಧಿಕ ರನ್ ಬಾರಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಹಾಗಿದ್ರೆ ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ಒಂದು ವರ್ಷದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟ್ಸ್ಮನ್ಗಳು ಯಾರೆಲ್ಲಾ ನೋಡೋಣ….
- ಸೂರ್ಯಕುಮಾರ್ ಯಾದವ್ – 732* ರನ್ (2022)
- ಶಿಖರ್ ಧವನ್ – 689 ರನ್ (2018)
- ವಿರಾಟ್ ಕೊಹ್ಲಿ- 641 ರನ್ (2016)
- ರೋಹಿತ್ ಶರ್ಮಾ – 590 ರನ್ (2018)