AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯನಿಗೆ ಪ್ಲೇಯಿಂಗ್​ ಇಲೆವೆನ್‌ನಲ್ಲಿ ಅವಕಾಶ ಸಿಗುವುದಿಲ್ಲ ಎಂದ ಗವಾಸ್ಕರ್..!

ODI World Cup 2023: ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ಅತ್ಯುತ್ತಮ ಆಟಗಾರ. ಮೈದಾನದಲ್ಲಿ ಎಲ್ಲಿ ಬೇಕಾದರೂ ಚೆಂಡನ್ನು ಬೌಂಡರಿ ಹಾಗೂ ಸಿಕ್ಸರ್‌ಗಳಿಗಟ್ಟುವ ಸಾಮರ್ಥ್ಯ ಹೊಂದಿದ್ದಾರೆ. ಅದಕ್ಕಾಗಿಯೇ ಏಕದಿನ ಕ್ರಿಕೆಟ್‌ನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಆದರೆ ಇದುವರೆಗೆ ಆಡಿದ ಪಂದ್ಯಗಳಲ್ಲಿ ಸೂರ್ಯನಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ ಎಂದಿದ್ದಾರೆ.

ಸೂರ್ಯನಿಗೆ ಪ್ಲೇಯಿಂಗ್​ ಇಲೆವೆನ್‌ನಲ್ಲಿ ಅವಕಾಶ ಸಿಗುವುದಿಲ್ಲ ಎಂದ ಗವಾಸ್ಕರ್..!
ಸೂರ್ಯಕುಮಾರ್ ಯಾದವ್, ಸುನಿಲ್ ಗವಾಸ್ಕರ್
ಪೃಥ್ವಿಶಂಕರ
|

Updated on: Sep 29, 2023 | 9:03 PM

Share

2023ರ ಏಕದಿನ ವಿಶ್ವಕಪ್‌ಗೆ (ODI World Cup 2023) ಟೀಂ ಇಂಡಿಯಾ ಸಜ್ಜಾಗಿದೆ. ಆದರೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಯಾರು ಸ್ಥಾನ ಪಡೆಯುತ್ತಾರೆ ಮತ್ತು ಯಾರು ಹೊರಗುಳಿಯುತ್ತಾರೆ? ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡಲಾರಂಭಿಸಿದೆ. ವಾಸ್ತವವಾಗಿ ತಂಡದ ಪ್ಲೇಯಿಂಗ್ ಇಲೆವೆನ್ ಬಗ್ಗೆ ಈಗಾಗಲೇ ಎಲ್ಲರಿಗೂ ಖಚಿತತೆ ಸಿಕ್ಕಿದೆ. ಆದರೆ ಇಬ್ಬರು ಆಟಗಾರರ ಸ್ಥಾನದ ಬಗ್ಗೆ ಮಾತ್ರ ಗೊಂದಲ ಏರ್ಪಟ್ಟಿದೆ. ಆ ಇಬ್ಬರು ಆಟಗಾರರೆಂದರೆ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav). ಈ ಇಬ್ಬರಲ್ಲಿ ಆಯ್ಕೆ ಮಂಡಳಿ ಯಾರಿಗೆ ಅವಕಾಶ ನೀಡುತ್ತದೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲ್ಲಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ ಬಗ್ಗೆ ಮಾತನಾಡಿರುವ ತಂಡದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ (Sunil Gavaskar), ಸೂರ್ಯಕುಮಾರ್ ಯಾದವ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವುದಿಲ್ಲ ಎಂದಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಗವಾಸ್ಕರ್, ಇದರ ಹಿಂದಿನ ಕಾರಣವನ್ನೂ ಬಹಿರಂಗಪಡಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ಅತ್ಯುತ್ತಮ ಆಟಗಾರ. ಮೈದಾನದಲ್ಲಿ ಎಲ್ಲಿ ಬೇಕಾದರೂ ಚೆಂಡನ್ನು ಬೌಂಡರಿ ಹಾಗೂ ಸಿಕ್ಸರ್‌ಗಳಿಗಟ್ಟುವ ಸಾಮರ್ಥ್ಯ ಹೊಂದಿದ್ದಾರೆ. ಅದಕ್ಕಾಗಿಯೇ ಏಕದಿನ ಕ್ರಿಕೆಟ್‌ನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಆದರೆ ಇದುವರೆಗೆ ಆಡಿದ ಪಂದ್ಯಗಳಲ್ಲಿ ಸೂರ್ಯನಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ ಎಂದಿದ್ದಾರೆ.

ಏಕದಿನದಲ್ಲಿ ಸೂರ್ಯಕುಮಾರ್​ಗೆ ಪದೇಪದೇ ಅವಕಾಶ ನೀಡುತ್ತಿರುವುದ್ಯಾಕೆ? ರೋಹಿತ್ ನೀಡಿದ ಉತ್ತರವಿದು

ಸುನಿಲ್ ಗವಾಸ್ಕರ್ ಹೇಳಿದ್ದೇನು?

ಏಕದಿನ ವಿಶ್ವಕಪ್ ದೃಷ್ಟಿಯಿಂದ ಸೂರ್ಯಕುಮಾರ್ ಯಾದವ್‌ಗೆ ಪದೇ ಪದೇ ಅವಕಾಶಗಳನ್ನು ನೀಡಲಾಯಿತು. ಆದರೆ ಅದಕ್ಕೆ ತಕ್ಕಂತೆ ಆಡುವಲ್ಲಿ ಸೂರ್ಯ ವಿಫಲರಾಗಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ಅವರು ಸತತ ಎರಡು ಅರ್ಧಶತಕಗಳನ್ನು ಬಾರಿಸುವ ಮೂಲಕ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು. ಆದರೆ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುವುದು ಕಷ್ಟ ಎಂದು ಸುನೀಲ್ ಗವಾಸ್ಕರ್ ಹೇಳಿದ್ದಾರೆ. ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗವಾಸ್ಕರ್ ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸೂರ್ಯಕುಮಾರ್ ಯಾದವ್ ಏಕದಿನ ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ ಮಾಡಿಲ್ಲ. ಅವರು ಕೊನೆಯ 15-20 ಓವರ್‌ಗಳಲ್ಲಿ ಮಾತ್ರ ಬ್ಯಾಟ್ ಮಾಡುತ್ತಾರೆ. ಆದರೆ ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್ ಮತ್ತು ಕೆಎಲ್ ರಾಹುಲ್ ಕೂಡ ಇದೇ ರೀತಿ ಮಾಡುತ್ತಾರೆ. ಆದ್ದರಿಂದ ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸೂಕ್ತ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಅವಕಾಶ ಸಿಕ್ಕರೆ ಶತಕ ಸಿಡಿಸಬೇಕಾಗುತ್ತದೆ

ಸೂರ್ಯಕುಮಾರ್ ಯಾದವ್ ಸ್ವಲ್ಪ ಸಮಯ ಕಾಯಬೇಕು. ನಾಲ್ಕನೇ ಕ್ರಮಾಂಕದಲ್ಲಿ ಅವಕಾಶ ಸಿಕ್ಕರೆ ಶತಕ ಸಿಡಿಸಬೇಕಾಗುತ್ತದೆ. ಅವರು ಶತಕ ಬಾರಿಸಬಲ್ಲರು ಎಂಬುದನ್ನು ಆಯ್ಕೆ ಮಂಡಳಿಗೆ ತೋರಿಸಬೇಕು ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಉತ್ತಮ ಪ್ರದರ್ಶನ ನೀಡಿದ್ದರು. ಸತತ ಎರಡು ಅರ್ಧಶತಕ ಗಳಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 8 ರಂದು ನಿಗದಿಯಾಗಿದೆ. ಹೀಗಾಗಿ ಸೂರ್ಯಕುಮಾರ್ ಯಾದವ್​ಗೆ ಈ ತಂಡದಲ್ಲಿ ಅವಕಾಶ ಸಿಗುವುದು ಕಷ್ಟ ಎನಿಸುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?