AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂರ್ಯನಿಗೆ ಅನ್ಯಾಯವಾಗಿದೆ’; ಬಿಸಿಸಿಐ ವಿರುದ್ಧ ಗರಂ ಆದ ಗವಾಸ್ಕರ್

Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ತಂಡದಿಂದ ಕೈಬಿಟ್ಟಿರುವುದು ಅನ್ಯಾಯ ಎಂದು ಸುನಿಲ್ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳಪೆ ಫಾರ್ಮ್ ಕಾರಣ ಹೇಳಲಾಗಿದ್ದರೂ, ಇಂಗ್ಲೆಂಡ್ ಸರಣಿವರೆಗೆ ಅವಕಾಶ ನೀಡಬೇಕಿತ್ತು ಎಂದಿದ್ದಾರೆ. ಧೋನಿಯಂತೆ ಶಾಂತ ಸ್ವಭಾವದ ಸೂರ್ಯನ ನಾಯಕತ್ವವನ್ನು ಶ್ಲಾಘಿಸಿರುವ ಗವಾಸ್ಕರ್, 2028ರ ಟಿ20 ವಿಶ್ವಕಪ್‌ಗೆ ಯುವ ನಾಯಕತ್ವದ ದೃಷ್ಟಿ ಇರಬಹುದು ಎಂದು ಊಹಿಸಿದ್ದಾರೆ.

‘ಸೂರ್ಯನಿಗೆ ಅನ್ಯಾಯವಾಗಿದೆ’; ಬಿಸಿಸಿಐ ವಿರುದ್ಧ ಗರಂ ಆದ ಗವಾಸ್ಕರ್
Suryakumar Yadav
ಪೃಥ್ವಿಶಂಕರ
|

Updated on: Jun 07, 2026 | 6:26 PM

Share

ಭಾರತಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಮಾತ್ರವಲ್ಲದೆ ಅವರನ್ನು ತಂಡದಿಂದಲೂ ಹೊರಹಾಕಲಾಗಿದೆ. ಸೂರ್ಯಕುಮಾರ್ ಯಾದವ್ ಕಳೆದ ಮೂರು ವರ್ಷಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ತಂಡದಿಂ ಕೈಬಿಟ್ಟಿರುವುದು ಸರಿಯಾದ ನಿರ್ಧಾರವಾಗಿದೆ ಎಂಬುದು ಕೆಲವರ ಅಭಿಪ್ರಾಯವಾದರೆ ಇನ್ನು ಕೆಲವರು ಸೂರ್ಯನಿಗೆ ಕೊನೆಯ ಅವಕಾಶವನ್ನು ನೀಡಬೇಕು ಎಂಬ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅಂತಹವರಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೂಡ ಒಬ್ಬರು.

ಅನ್ಯಾಯವಾಗಿ ನಡೆಸಿಕೊಳ್ಳಲಾಗಿದೆ

ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಗವಾಸ್ಕರ್, ‘ಸೂರ್ಯಕುಮಾರ್ ಯಾದವ್ ಅವರನ್ನು ಅನ್ಯಾಯವಾಗಿ ನಡೆಸಿಕೊಳ್ಳಲಾಗಿದೆ. 2028 ರಲ್ಲಿ ಟಿ20 ವಿಶ್ವಕಪ್ ಮತ್ತು ಒಲಿಂಪಿಕ್ಸ್ ಇದೆ. ಹೀಗಾಗಿ ಕನಿಷ್ಠ ಮುಂಬರುವ ಇಂಗ್ಲೆಂಡ್ ಸರಣಿಯವರೆಗೆ ಅವರಿಗೆ ಅವಕಾಶ ನೀಡಬೇಕಿತ್ತು. ಆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅವರ ಪ್ರದರ್ಶನವನ್ನು ನೋಡಿದ ನಂತರವೇ ಆಯ್ಕೆದಾರರು ನಿರ್ಧಾರಕ್ಕೆ ಬಂದಿದ್ದರೆ ಉತ್ತಮವಾಗಿರುತ್ತಿತ್ತು. ಆದರೆ 2026 ರ ಐಪಿಎಲ್​ನಲ್ಲಿ ಸೂರ್ಯಕುಮಾರ್ ಯಾದವ್ ಅವರ ಕಳಪೆ ಪ್ರದರ್ಶನ ಆಯ್ಕೆದಾರರ ಈ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದಿದ್ದಾರೆ.

ಯುವ ನಾಯಕನ ಅಗತ್ಯವಿದೆ

ಆದರೆ, ಆಯ್ಕೆದಾರರ ಚಿಂತನೆ ಬೇರೆಯದೇ ಆಗಿರಬಹುದು ಎಂದಿರುವ ಗವಾಸ್ಕರ್, ‘ಬದಲಾವಣೆ ಈಗಲೇ ಆರಂಭವಾಗಬೇಕು ಎಂದು ಆಯ್ಕೆದಾರರು ಭಾವಿಸಿರಬಹುದು. ಸೂರ್ಯಗೆ ಈಗ 35 ಅಥವಾ 36 ವರ್ಷ. 2028 ರ ಹೊತ್ತಿಗೆ ಅವರಿಗೆ 38 ವರ್ಷ ವಯಸ್ಸಾಗಿರುತ್ತದೆ. ಆ ಸಮಯದಲ್ಲಿ, ನಾವು ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲಲು ಅಥವಾ ವಿಶ್ವಕಪ್ ಉಳಿಸಿಕೊಳ್ಳಲು ಬಯಸಿದರೆ, ನಮಗೆ ಯುವ ನಾಯಕನ ಅಗತ್ಯವಿದೆ. ಅದಕ್ಕಾಗಿಯೇ ಶ್ರೇಯಸ್ ಅಯ್ಯರ್ ಅವರಂತಹ ಅನುಭವ ಹೊಂದಿರುವ ಯುವ ಆಟಗಾರನನ್ನು ಆಯ್ಕೆ ಮಾಡಿರಬಹುದು ಎಂದಿದ್ದಾರೆ.

ನಾಯಕತ್ವದ ಜೊತೆಗೆ ಟಿ20 ತಂಡದಿಂದಲೂ ಸೂರ್ಯಕುಮಾರ್​ಗೆ ಗೇಟ್​ಪಾಸ್

ಪರಂಪರೆಯಾಗಿ ಬಿಟ್ಟು ಹೋಗಿದ್ದಾರೆ

ನಾಯಕತ್ವದಿಂದ ತೆಗೆದುಹಾಕಲ್ಪಟ್ಟಿದ್ದರೂ ಸಹ, ಗವಾಸ್ಕರ್ ಸೂರ್ಯನ ವ್ಯಕ್ತಿತ್ವವನ್ನು ಶ್ಲಾಘಿಸಿದರು. ಮಹೇಂದ್ರ ಸಿಂಗ್ ಧೋನಿಯಂತೆ ಸೂರ್ಯ ಮೈದಾನದಲ್ಲಿ ತುಂಬಾ ಶಾಂತವಾಗಿದ್ದರು. ಸೂರ್ಯ ತಂಡಕ್ಕೆ ತನ್ನ ಶಾಂತ ಸ್ವಭಾವವನ್ನು ಪರಂಪರೆಯಾಗಿ ಬಿಟ್ಟು ಹೋಗಿದ್ದಾರೆ. ಕಠಿಣ ಸಂದರ್ಭಗಳಲ್ಲಿಯೂ ಒತ್ತಡಕ್ಕೆ ಒಳಗಾಗದೆ ತಂಡವನ್ನು ಮುನ್ನಡೆಸುವಲ್ಲಿ ಅವರು ಧೋನಿಯಂತೆಯೇ ಇದ್ದರು ಎಂದು ಗವಾಸ್ಕರ್ ಇಂಡಿಯಾ ಟುಡೇ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More