Suryakumar Yadav: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ನಿರ್ಮಿಸಿದ ಸೂರ್ಯ..!

Updated By: ಝಾಹಿರ್ ಯೂಸುಫ್

Updated on: Oct 05, 2022 | 1:25 PM

Suryakumar Yadav: ಈ ಮೂಲಕ ಟೀಮ್ ಇಂಡಿಯಾ ಪರ ಯಾರೂ ಮಾಡದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ 2006 ರಿಂದ ಟಿ20 ಕ್ರಿಕೆಟ್ ಆಡುತ್ತಿದೆ.

1 / 7
ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಸಿಡಿಲಮರಿಯಾಗಿ ಗುರುತಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಯಾರೂ ಮಾಡದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

2 / 7
ಟೀಮ್ ಇಂಡಿಯಾ 2006 ರಿಂದ ಟಿ20 ಕ್ರಿಕೆಟ್ ಆಡುತ್ತಿದೆ. ಆದರೆ ಇದುವರೆಗೆ ಯಾವುದೇ ಬ್ಯಾಟ್ಸ್​ಮನ್​ ಒಂದು ವರ್ಷದ ಅವಧಿಯಲ್ಲಿ 800 ರನ್ ಕಲೆಹಾಕಿರಲಿಲ್ಲ. ಇದೀಗ 2022 ರಲ್ಲಿ ಬರೋಬ್ಬರಿ 801 ರನ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3 / 7
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ 800+ ರನ್​ ಬಾರಿಸಿದ ವಿಶ್ವದ ಮೂರನೇ ಹಾಗೂ ಭಾರತದ ಮೊದಲ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಒಂದೇ ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ಸೂರ್ಯನ ಪಾಲಾಗಿದೆ.

4 / 7
ಸೂರ್ಯಕುಮಾರ್ ಯಾದವ್ ಈ ವರ್ಷ ಟಿ20 ಕ್ರಿಕೆಟ್​ನಲ್ಲಿ ಬರೋಬ್ಬರಿ 51 ಸಿಕ್ಸ್​ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದು ವರ್ಷದಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

5 / 7
ಇದರ ಜೊತೆಗೆ 801 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 7
ಸದ್ಯ ಈ ಪಟ್ಟಿಯಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನದಲ್ಲಿದ್ದಾರೆ. ರಿಜ್ವಾನ್ 2021 ರಲ್ಲಿ ಒಟ್ಟು 1326 ರನ್ ಕಲೆಹಾಕಿದ್ದರು. ಹಾಗೆಯೇ 2021 ರಲ್ಲಿ 939 ರನ್​ ಬಾರಿಸಿದ ಪಾಕ್ ತಂಡದ ನಾಯಕ ಬಾಬರ್ ಆಜಂ 2ನೇ ಸ್ಥಾನದಲ್ಲಿದ್ದಾರೆ.

7 / 7
ಇದೀಗ 2022 ರಲ್ಲಿ 801 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್​ ಮೂಲಕ ಬಾಬರ್ ಆಜಂ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.