
ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡು ಮುಂಬರುವ ಟಿ20 ವಿಶ್ವಕಪ್ನಲ್ಲಿ (T20 World Cup) ಟೀಂ ಇಂಡಿಯಾವನ್ನು ಮುನ್ನಡೆಸಲಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಬಗ್ಗೆ ನಟಿ ಮತ್ತು ರೂಪದರ್ಶಿ ಖುಷಿ ಮುಖರ್ಜಿ (Khushi Mukherjee) ಶಾಕಿಂಗ್ ಹೇಳಿಕೆಯನ್ನು ನೀಡಿ ಸಂಚಲನ ಸೃಷ್ಟಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಖುಷಿ ಮುಖರ್ಜಿ, ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕ ಕ್ರಿಕೆಟಿಗರು ನನಗೆ ಆಗಾಗ್ಗೆ ಸಂದೇಶಗಳನ್ನು ಕಳುಹಿಸುತ್ತಿದ್ದರು. ಹಾಗೆಯೇ ಈಗಲೂ ಅನೇಕ ಕ್ರಿಕೆಟಿಗರು ತನ್ನನ್ನು ಫಾಲೋ ಮಾಡುತ್ತಿದ್ದಾರೆ. ಆದರೆ ನಾನು ಯಾವುದೇ ಕ್ರಿಕೆಟಿಗನೊಂದಿಗೆ ಡೇಟಿಂಗ್ ಮಾಡಲು ಬಯಸುವುದಿಲ್ಲ ಎಂದಿದ್ದಾರೆ.
ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಖುಷಿ ಮುಖರ್ಜಿ, ‘ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವಾರು ಕ್ರಿಕೆಟಿಗರು ತಮ್ಮನ್ನು ಫಾಲೋ ಮಾಡುತ್ತಿದ್ದಾರೆ. ಟಿ20 ತಂಡದ ನಾಯಕ ಸೂರ್ಯಕುಮಾರ್ ನನಗೆ ಬಹಳಷ್ಟು ಮೆಸೇಜ್ಗಳನ್ನು ಕಳುಹಿಸುತ್ತಿದ್ದರು. ಆದರೆ ಈಗ ಅವರು ಹೆಚ್ಚು ಸಂವಹನ ನಡೆಸುತ್ತಿಲ್ಲ. ಹಾಗೆಯೇ ನಾನು ಯಾರೊಂದಿಗೂ ರಿಲೇಷನ್ಶಿಪ್ನಲ್ಲಿ ಇರಲು ಬಯಸುವುದಿಲ್ಲ ಮತ್ತು ಯಾವುದೇ ಲಿಂಕ್-ಅಪ್ ವದಂತಿಗಳನ್ನು ಇಷ್ಟಪಡುವುದಿಲ್ಲ ಎಂದಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ, ನಟಿ ಖುಷಿ ಮುಖರ್ಜಿ ಸೂರ್ಯಕುಮಾರ್ ಯಾದವ್ ಬಗ್ಗೆ ಹೀಗೆ ಹೇಳಿದ್ದಾರೆ, ‘ಅನೇಕ ಕ್ರಿಕೆಟಿಗರು ನನ್ನ ಫಾಲೋ ಮಾಡುತ್ತಿದ್ದಾರೆ. ಸೂರ್ಯಕುಮಾರ್ ನನಗೆ ತುಂಬಾ ಸಂದೇಶ ಕಳುಹಿಸುತ್ತಿದ್ದರು. ಈಗ ನಾವು ಹೆಚ್ಚು ಮಾತನಾಡುವುದಿಲ್ಲ. ನಾನು ಯಾರೊಂದಿಗೂ ರಿಲೇಷನ್ಶಿಪ್ನಲ್ಲಿ ಇರಲು ಬಯಸುವುದಿಲ್ಲ ಎಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಸುದ್ದಿಯಲ್ಲಿರುವ ಖುಷಿ ಮುಖರ್ಜಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 1.5 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ. ಆದರೆ ಅವರು ಮಾತ್ರ ಯಾರನ್ನೂ ಫಾಲೋ ಮಾಡುತ್ತಿಲ್ಲ.
ಖುಷಿ ಮುಖರ್ಜಿ ಅವರ ಈ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆಯಾದರೂ ಈ ಬಗ್ಗೆ ಸೂರ್ಯಕುಮಾರ್ ಯಾದವ್ ಯಾವುದೇ ಸ್ಪಷ್ಟನೇ ನೀಡಿಲ್ಲ. ಪ್ರಸ್ತುತ ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಸೂರ್ಯಕುಮಾರ್ ಯಾದವ್, ತಮ್ಮ ಹಳೆಯ ಲಯವನ್ನು ಕಂಡುಕೊಳ್ಳುವುದರ ಜೊತೆಗೆ ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟದತ್ತ ಕೊಂಡೊಯ್ಯಬೇಕಿದೆ. ಹೀಗಾಗಿ ಹೊಸ ವರ್ಷದ ಆರಂಭದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಟಿ20 ವಿಶ್ವಕಪ್‌ಗೆ ಮುನ್ನ ತಯಾರಿ ನಡೆಸಲು ಇದು ಟೀಂ ಇಂಡಿಯಾಕ್ಕೆ ಕೊನೆಯ ಅವಕಾಶವಾಗಿದೆ. ಇದರ ನಂತರ, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಫೆಬ್ರವರಿಯಲ್ಲಿ ಟಿ20 ವಿಶ್ವಕಪ್ ಆಡಲಿದೆ. ಐಸಿಸಿ ಟೂರ್ನಮೆಂಟ್‌ನಲ್ಲಿ ಸೂರ್ಯ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವುದು ಇದೇ ಮೊದಲು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:38 pm, Tue, 30 December 25