
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಬಾಂಗ್ಲಾದೇಶ್ ವಿರುದ್ಧ ಟಿ20 ಸರಣಿ ಆಡಲಿದೆ. ಬಾಂಗ್ಲಾದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಇತ್ತೀಚೆಗಷ್ಟೇ ಸೂರ್ಯಕುಮಾರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಅವರು ಮುಂದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ಸೂರ್ಯಕುಮಾರ್ ಯಾದವ್ ಕಳೆದ ಕೆಲ ತಿಂಗಳಿಂದ ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಇತ್ತೀಚೆಗೆ ಜರ್ಮನಿಯ ಮ್ಯೂನಿಚ್‌ನಲ್ಲಿ ಹೊಟ್ಟೆಯ ಕೆಳಭಾಗದಲ್ಲಿ ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಇದೀಗ ಸರ್ಜರಿಗೆ ಒಳಗಾಗಿರುವ ಕಾರಣ ಅವರಿಗೆ ವೈದ್ಯರು ಎರಡು ತಿಂಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಆಗಸ್ಟ್ನಲ್ಲಿ ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ ಸರಣಿಗೆ ಸೂರ್ಯಕುಮಾರ್ ಯಾದವ್ ಅಲಭ್ಯರಾಗುವ ಸಾಧ್ಯತೆಯಿದೆ.
ಸೂರ್ಯಕುಮಾರ್ ಯಾದವ್ ಟಿ20 ಸರಣಿಯಿಂದ ಹೊರಗುಳಿದರೆ, ಭಾರತ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಮೂಡುವುದು ಸಹಜ. ಇಲ್ಲಿ ಉಪನಾಯಕನಾಗಿ ಶುಭ್ಮನ್ ಗಿಲ್ ಇದ್ದಾರೆ. ಆದರೆ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಟಿ20 ಸರಣಿ ಆಡಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ದೀರ್ಘಾವಧಿಯ ಸರಣಿಯ ಬಳಿಕ ಭಾರತ ಟೆಸ್ಟ್ ತಂಡದ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.
ಹೀಗಾಗಿ ಶುಭ್ಮನ್ ಗಿಲ್ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚು. ಗಿಲ್ ಹೊರಗುಳಿದರೆ ಭಾರತ ತಂಡವನ್ನು ಅಕ್ಷರ್ ಪಟೇಲ್ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ. ಅದರಂತೆ ಬಾಂಗ್ಲಾದೇಶ್ ವಿರುದ್ಧದ ಸರಣಿಗೆ ಸೂರ್ಯಕುಮಾರ್ ಯಾದವ್ ಹಾಗೂ ಶುಭ್ಮನ್ ಗಿಲ್ ಅಲಭ್ಯರಾದರೆ, ಅಕ್ಷರ್ ಪಟೇಲ್ ಕ್ಯಾಪ್ಟನ್ ಪಟ್ಟ ಅಲಂಕರಿಸುವುದನ್ನು ಎದುರು ನೋಡಬಹುದು.
ಭಾರತ ಮತ್ತು ಬಾಂಗ್ಲಾದೇಶ್ ನಡುವೆ 6 ಪಂದ್ಯಗಳ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಮೊದಲು ಏಕದಿನ ಪಂದ್ಯಗಳನ್ನಾಡಿದರೆ, ಆ ಬಳಿಕ ಮೂರು ಮ್ಯಾಚ್ಗಳ ಟಿ20 ಸರಣಿ ನಡೆಯಲಿದೆ. ಈ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…
IND vs BAN ಏಕದಿನ ಸರಣಿ ವೇಳಾಪಟ್ಟಿ:
ಇದನ್ನೂ ಓದಿ: 6,6,6,6,6,6,6,6: ಪೂರನ್ ಪವರ್ಫುಲ್ ಶತಕ
IND vs BAN ಟಿ20 ಸರಣಿ ವೇಳಾಪಟ್ಟಿ: