AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs HK: ಒಂದೇ ಓವರ್​ನಲ್ಲಿ 6, 6, 6, 0, 6: ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್​ಗೆ ದಾಖಲೆ ಪುಡಿಪುಡಿ

Suryakumar Yadav: ಏಷ್ಯಾಕಪ್​ನ ಹಾಂಗ್ ಕಾಂಗ್ ವಿರುದ್ಧ ಸೂರ್ಯಕುಮಾರ್ ಯಾದವ್ ಕೇವಲ 26 ಎಸೆತಗಳಲ್ಲಿ ಅಜೇಯ 68 ರನ್ ಚಚ್ಚಿದರು. ಈ ಮೂಲಕ ನೂತನ ದಾಖಲೆ ನಿರ್ಮಾಣ ಮಾಡಿದ್ದಾರೆ. ಜೊತೆಗೆ ನಾಯಕ ರೋಹಿತ್ ಶರ್ಮಾ ದಾಖಲೆಯನ್ನು ಸರಿಗಟ್ಟಿದ್ದಾರೆ.

IND vs HK: ಒಂದೇ ಓವರ್​ನಲ್ಲಿ 6, 6, 6, 0, 6: ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್​ಗೆ ದಾಖಲೆ ಪುಡಿಪುಡಿ
Suryakumar Yadav
TV9 Web
| Edited By: |

Updated on:Sep 01, 2022 | 7:59 AM

Share

ಏಷ್ಯಾಕಪ್ 2022 ರಲ್ಲಿ (Asia Cup 2022) ಭಾರತ ತಂಡ ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟಿದೆ. ಬುಧವಾರ ಹಾಂಗ್ ಕಾಂಗ್ ವಿರುದ್ಧ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ (India vs Hong Kong) 40 ರನ್​ಗಳ ಅಮೋಘ ಗೆಲುವು ಕಂಡಿತು. ಬೌಲರ್​ಗಳ ಸಂಘಟಿತ ಪ್ರದರ್ಶನ ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav), ವಿರಾಟ್ ಕೊಹ್ಲಿ ಅವರ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಗೆದ್ದು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ. ಸೂರ್ಯ ಕೇವಲ 26 ಎಸೆತಗಳಲ್ಲಿ 6 ಫೋರ್, 6 ಸಿಕ್ಸರ್ ಸಿಡಿಸಿ ಅಜೇಯ 68 ರನ್ ಚಚ್ಚಿದರು. ಈ ಮೂಲಕ ನೂತನ ದಾಖಲೆ ಕೂಡ ನಿರ್ಮಾಣ ಮಾಡಿದ್ದಾರೆ. ಜೊತೆಗೆ ಭಾರತದ ನಾಯಕ ರೋಹಿತ್ ಶರ್ಮಾ ದಾಖಲೆಯನ್ನು ಸರಿಗಟ್ಟಿದ್ದಾರೆ.

ಕೆಎಲ್ ರಾಹುಲ್ ನಿರ್ಗಮನದ ಬಳಿಕ ಕ್ರೀಸ್​ಗೆ ಬಂದ ಸೂರ್ಯಕುಮಾರ್ ಯಾದವ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ನಡೆಸಿದರು. ಇದರ ಫಲವಾಗಿ ಕೇವಲ 22 ಎಸೆತಗಳಲ್ಲೇ ಅರ್ಧಶತಕದ ಗಡಿ ಮುಟ್ಟಿದರು. ಡೀಪ್ ಎಕ್ಸ್​ಟ್ರಾ ಕವರ್​ನಲ್ಲಿ ಸಿಕ್ಸ್ ಸಿಡಿಸುವ ಮೂಲಕ ಸೂರ್ಯ ಅರ್ಧಶತಕ ಪೂರೈಸಿದರು. ಈ ಮೂಲಕ ನೂತನ ದಾಖಲೆ ಕೂಡ ಮಾಡಿದ್ದಾರೆ. ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ವೇಗವಾಗಿ ಅರ್ಧಶತಕ ಗಳಿಸಿದ ಭಾರತ ಒಂಬತ್ತನೆ ಬ್ಯಾಟರ್ ಇವರಾಗಿದ್ದಾರೆ. ಅಲ್ಲದೆ 22 ಎಸೆತಗಳಲ್ಲೇ ಅರ್ಧಶತಕ ಬಾರಿಸಿರುವ ರೋಹಿತ್ ಶರ್ಮಾ ದಾಖಲೆಯನ್ನೂ ಸರಿಗಟ್ಟಿದ್ದಾರೆ.

ಇದನ್ನೂ ಓದಿ
Image
Asia Cup 2022: 6 ತಿಂಗಳು, 11 ಇನ್ನಿಂಗ್ಸ್​ ಬಳಿಕ ಅರ್ಧಶತಕ ಸಿಡಿಸಿ ಮಿಂಚಿದ ಕಿಂಗ್ ಕೊಹ್ಲಿ..!
Image
Asia Cup 2022: 2 ಬೌಂಡರಿ, 1 ಸಿಕ್ಸರ್‌ ಸಿಡಿಸಿ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್..!
Image
PCB: ಖರೀದಿಸುವವರೇ ಇಲ್ಲ; ಪಾಕ್ ಕ್ರಿಕೆಟ್ ಮಂಡಳಿಗೆ ಇದೆಂಥಾ ಅವಮಾನ..!
Image
ಅನಿವಾಸಿ ಭಾರತೀಯನಂತಿರುವ ಡೇವಿಡ್ ವಾರ್ನರ್ ಇಂಡಿಯಾದಲ್ಲಿರುವ ಅಭಿಮಾನಿಗಳಿಗೆ ಗಣೇಶ ಚತುರ್ಥಿಯ ಶುಭಾಷಯ ಕೋರಿದ್ದಾರೆ

ಪಂದ್ಯದ 20ನೇ ಓವರ್​ನ​ ಸಂಪೂರ್ಣ 6 ಎಸೆತವನ್ನೂ ಎದುರಿಸಿದ ಸೂರ್ಯಕುಮಾರ್ ಬರೋಬ್ಬರಿ 26 ರನ್ ಕಲೆಹಾಕಿದರು. ಈ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಸಿಡಿಸಿ ಪರಾಕ್ರಮ ಮೆರೆದರು. ಮೊದಲ ಎಸೆತದಲ್ಲಿ ಫುಲ್​ಟಾಸ್ ಬಾಲ್​ಗೆ ಕವರ್​ನಲ್ಲಿ ಸ್ವೀಪ್ ಶಾಟ್ ಹೊಡೆದರು. 2ನೇ ಎಸೆತದಲ್ಲಿ ಡೀಪ್ ಎಕ್ಸ್​ಟ್ರಾ ಕವರ್ ಸಿಕ್ಸ್, ಮೂರನೇ ಎಸೆತದಲ್ಲಿ ನೇರವಾಗಿ ಚೆಂಡನ್ನು ಸಿಕ್ಸರ್​ಗೆ ಅಟ್ಟಿದರು. 4ನೇ ಎಸೆತ ಡಾಟ್ ಆದರೆ, 5ನೇ ಎಸೆತದಲ್ಲಿ ಫೈನ್​ಲೆಗ್ ಮೂಲಕ ಮತ್ತೊಂದು ಸಿಕ್ಸ್ ಮೂಡಿಬಂತು. ಕೊನೆಯ ಎಸೆತದಲ್ಲಿ 2 ರನ್ ಕಲೆಹಾಕಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ ವಿಕೆಟ್ ಕೂಡ ಕಳೆದುಕೊಂಡಿತು. ರೋಹಿತ್‌ ಶರ್ಮಾ 13 ಎಸೆತಗಳಲ್ಲಿ 21 ರನ್ ಬಾರಿಸಿ ನಿರ್ಗಮಿಸಿದರು. ಆದರೆ ಕೆಎಲ್ ರಾಹುಲ್ ಆಮೆಗತಿಯ ಬ್ಯಾಟಿಂಗ್‌ನಿಂದ ಭಾರತ ಮಧ್ಯಮ ಓವರ್​ನಲ್ಲಿ ರನ್‌ ಗಳಿಸಲು ಪರದಾಡಿತು. ರಾಹುಲ್ 39 ಎಸೆಗಳಲ್ಲಿ 2 ಸಿಕ್ಸರ್ ಸಿಡಿಸಿ 36 ರನ್ ಗಳಿಸಿ ಔಟಾದರು. ನಂತರ ಶುರುವಾಗಿದ್ದು ವಿರಾಟ್ಸೂರ್ಯ ಆಟ.

ಕೇವಲ 22 ಎಸೆತಗಳಲ್ಲಿ ಫಿಫ್ಟಿ ಬಾರಿಸಿದ ಸೂರ್ಯ, ಒಟ್ಟು 26 ಎಸೆತಗಳಲ್ಲಿ ತಲಾ 6 ಫೋರ್‌ ಮತ್ತು ಸಿಕ್ಸರ್‌ಗಳೊಂದಿಗೆ ಅಜೇಯ 68 ರನ್‌ಗಳ ಕೊಡುಗೆ ಕೊಟ್ಟರು. ಇತ್ತ ವಿರಾಟ್‌ ಕೊಹ್ಲಿ 44 ಎಸೆತಗಳಲ್ಲಿ 1 ಫೋರ್‌ ಮತ್ತು 3 ಸಿಕ್ಸರ್‌ಗಳೊಂದಿಗೆ ಅಜೇಯ 59 ರನ್‌ ಸಿಡಿಸಿದರು. ಪರಿಣಾಮ ಭಾರತ ತಂಡ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 192ರನ್ ಕಲೆಹಾಕಿತು.

ಟಾರ್ಗೆಟ್ ಬೆನ್ನತ್ತಿದ್ದ ಹಾಂಗ್ ಕಾಂಗ್ ತಂಡ ಕೂಡ ಸ್ಪೋಟಕ ಆರಂಭ ಪಡೆದುಕೊಳ್ಳುವ ಜೊತೆ ವಿಕೆಟ್ ಕಳೆದುಕೊಂಡಿತು. ನಾಯಕ ನಿಜಕತ್ ಖಾನ್ 10 ರನ್ ಗಳಿಸಿದ್ದಾಗ ಜಡೇಜಾ ಅವರ ರನೌಟ್​ಗೆ ಬಲಿಯಾದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಿದ ಬಾಬರ್‌ ಹಯಾತ್‌, 33 ಎಸೆತಗಳಲ್ಲಿ 3 ಫೋರ್‌ ಮತ್ತು 2 ಸಿಕ್ಸರ್‌ನೊಂದಿಗೆ 41 ರನ್‌ ಬಾರಿಸಿದರೂ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಹಾಂಗ್ ಕಾಂಗ್ 20 ಓವರ್‌ಗಳಲ್ಲಿ 152/5 ರನ್‌ ಗಳಿಸಿತಷ್ಟೆ. ಭುವನೇಶ್ವರ್‌ ಕುಮಾರ್‌, ರವೀಂದ್ರ ಜಡೇಜಾ, ಅರ್ಷದೀಪ್‌ ಸಿಂಗ್ ಮತ್ತು ಅವೇಶ್‌ ಖಾನ್‌ ತಲಾ 1 ವಿಕೆಟ್‌ ಪಡೆದರು.

Published On - 7:59 am, Thu, 1 September 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ