AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

Suryakumar Yadav Records: ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಪೂರೈಸುವ ಸೂರ್ಯಕುಮಾರ್ ಯಾದವ್ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನೂ ಕೂಡ ಸರಿಗಟ್ಟಿದ್ದಾರೆ. ಅಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​​ಗಳಲ್ಲಿ 2000 ರನ್ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು.

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
T20 Batters
TV9 Web
| Edited By: |

Updated on: Dec 13, 2023 | 2:53 PM

Share

ಗೆಬ್ಬಾಗದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 56 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ 2000 ರನ್ ಪೂರೈಸಿದ್ದರು.

  • ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳನ್ನು ಎದುರಿಸಿ 2 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆರೋನ್ ಫಿಂಚ್ ಹೆಸರಿನಲ್ಲಿತ್ತು.
  • ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಆರೋನ್ ಫಿಂಚ್ ಟಿ20 ಕ್ರಿಕೆಟ್​ನಲ್ಲಿ 1283 ಎಸೆತಗಳನ್ನು ಎದುರಿಸಿ 2000 ರನ್ ಪೂರೈಸಿದ್ದರು. ಇದು ಇದುವರೆಗಿನ ವಿಶ್ವ ದಾಖಲೆಯಾಗಿತ್ತು.
  • ಆದರೀಗ ಕೇವಲ 1164 ಎಸೆತಗಳಲ್ಲಿ 2000 ರನ್ ಪೂರೈಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಕೊಹ್ಲಿ ದಾಖಲೆ ಸರಿಗಟ್ಟಿದ ಸೂರ್ಯ:

ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಪೂರೈಸುವ ಸೂರ್ಯಕುಮಾರ್ ಯಾದವ್ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನೂ ಕೂಡ ಸರಿಗಟ್ಟಿದ್ದಾರೆ. ಅಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​​ಗಳಲ್ಲಿ 2000 ರನ್ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು.

ಕಿಂಗ್ ಕೊಹ್ಲಿ 56 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಕೂಡ 56 ಟಿ20 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇನ್ನು ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಸಾವಿರ ರನ್​ಗಳನ್ನು ಪೂರೈಸಿದ ವಿಶ್ವ ದಾಖಲೆ ಇರುವುದು ಪಾಕಿಸ್ತಾನದ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಹೆಸರಿನಲ್ಲಿ ಎಂಬುದು ವಿಶೇಷ. ಈ ಇಬ್ಬರು ಆಟಗಾರರು 52 ಟಿ20 ಇನಿಂಗ್ಸ್​ಗಳ ಮೂಲಕ 2000 ರನ್ ಪೂರೈಸಿ ವಿಶ್ವ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: RCB ತಂಡದ ಅತ್ಯಂತ ಕೆಟ್ಟ ಆಯ್ಕೆಗಳಾವುವು ಗೊತ್ತಾ?

ಟಿ20 ಕ್ರಿಕೆಟ್​ನಲ್ಲಿ ಕಡಿಮೆ ಎಸೆತಗಳಲ್ಲಿ 2 ಸಾವಿರ ರನ್ ಪೂರೈಸಿದ ಬ್ಯಾಟರ್​ಗಳ ಪಟ್ಟಿ:

  1. ಸೂರ್ಯಕುಮಾರ್ ಯಾದವ್ (ಭಾರತ)- 1164 ಎಸೆತಗಳು
  2. ಆರೋನ್ ಫಿಂಚ್ (ಆಸ್ಟ್ರೇಲಿಯಾ)- 1283 ಎಸೆತಗಳು
  3. ಗ್ಲೆನ್ ಮ್ಯಾಕ್ಸ್​​ವೆಲ್ (ಆಸ್ಟ್ರೇಲಿಯಾ)- 1304 ಎಸೆತಗಳು
  4. ಡೇವಿಡ್ ಮಿಲ್ಲರ್ (ಸೌತ್ ಆಫ್ರಿಕಾ)- 1398 ಎಸೆತಗಳು
  5. ಕೆಎಲ್ ರಾಹುಲ್ (ಭಾರತ)- 1415 ಎಸೆತಗಳು.
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ