IND vs WI: 7 ಸಿಕ್ಸರ್, 31 ಎಸೆತಗಳಲ್ಲಿ 65 ರನ್! ವಿಂಡೀಸ್ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್

Suryakumar Yadav: ಈ ಪಂದ್ಯದಲ್ಲಿ ಸೂರ್ಯಕುಮಾರ್ 31 ಎಸೆತಗಳಲ್ಲಿ 65 ರನ್ ಗಳಿಸಿದರು. ಇದು ಟಿ20ಯಲ್ಲಿ ಅವರ ಅತ್ಯುತ್ತಮ ಸ್ಕೋರ್ ಕೂಡ ಆಗಿದೆ. ಇದಕ್ಕೂ ಮುನ್ನ ಅವರ ಉತ್ತಮ ಸ್ಕೋರ್ 62 ರನ್ ಆಗಿತ್ತು.

IND vs WI: 7 ಸಿಕ್ಸರ್, 31 ಎಸೆತಗಳಲ್ಲಿ 65 ರನ್! ವಿಂಡೀಸ್ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್
ಸೂರ್ಯ ಕುಮಾರ್
Follow us
TV9 Web
| Updated By: ಪೃಥ್ವಿಶಂಕರ

Updated on: Feb 20, 2022 | 9:12 PM

ಭಾರತ ಕ್ರಿಕೆಟ್ ತಂಡ (Indian cricket team)ದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ (Suryakumar Yadav)ಮತ್ತೊಮ್ಮೆ ತಮ್ಮ ಪ್ರತಿಭೆಯನ್ನು ತೋರಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂ (Eden Gardens Stadium)ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಬಲಗೈ ಬ್ಯಾಟ್ಸ್‌ಮನ್ ಉತ್ತಮ ಅರ್ಧಶತಕ ಗಳಿಸಿದ್ದಾರೆ. ಸೂರ್ಯಕುಮಾರ್ 20ನೇ ಓವರ್​ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ 50 ರನ್ ಪೂರೈಸಿದರು. ಇದು ಅವರ ಟಿ20 ವೃತ್ತಿ ಬದುಕಿನ ನಾಲ್ಕನೇ ಅರ್ಧಶತಕವಾಗಿದೆ. ಈ ಪಂದ್ಯದಲ್ಲಿ ಸೂರ್ಯಕುಮಾರ್ 31 ಎಸೆತಗಳಲ್ಲಿ 65 ರನ್ ಗಳಿಸಿದರು. ಇದು ಟಿ20ಯಲ್ಲಿ ಅವರ ಅತ್ಯುತ್ತಮ ಸ್ಕೋರ್ ಕೂಡ ಆಗಿದೆ. ಇದಕ್ಕೂ ಮುನ್ನ ಅವರ ಉತ್ತಮ ಸ್ಕೋರ್ 62 ರನ್ ಆಗಿತ್ತು.

ಸೂರ್ಯಕುಮಾರ್ ಅವರ ಈ ಇನ್ನಿಂಗ್ಸ್‌ನಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಬಲಿಷ್ಠ ಸ್ಕೋರ್ ಮಾಡಿತು. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಭಾರತ ತಂಡ ಈಗಾಗಲೇ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು, ಈ ಪಂದ್ಯವನ್ನು ಗೆದ್ದು ವೆಸ್ಟ್ ಇಂಡೀಸ್ ಅನ್ನು ಕ್ಲೀನ್ ಸ್ವೀಪ್ ಮಾಡುವುದು ಅದರ ಪ್ರಯತ್ನವಾಗಿದೆ.

ಸಂಕಷ್ಟದಲ್ಲಿ ತಂಡಕ್ಕೆ ನೆರವು

ಭಾರತ ತಂಡ ಸಂಕಷ್ಟದಲ್ಲಿದ್ದಾಗ ಸೂರ್ಯಕುಮಾರ್ ಬ್ಯಾಟಿಂಗ್​ಗೆ ಇಳಿದಿದ್ದರು. ಇಶಾನ್ ಕಿಶನ್ ಔಟಾದಾಗ ಅವರು ಬ್ಯಾಟಿಂಗ್ ಮಾಡಲು ಬಂದಿದ್ದರು. ಇಶಾನ್ ನಿರ್ಗಮನದ ನಂತರ ರೋಹಿತ್ ಶರ್ಮಾ ಕೂಡ ಬೇಗನೆ ಪೆವಿಲಿಯನ್‌ಗೆ ಮರಳಿದರು. ಭಾರತದ ಸ್ಕೋರ್ 13.5 ಓವರ್​ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 93 ರನ್ ಆಗಿತ್ತು. ಇಲ್ಲಿಂದ ಸೂರ್ಯಕುಮಾರ್ ಎಕ್ಸಲೇಟರ್ ಒತ್ತಿ ವೇಗವಾಗಿ ರನ್ ಗಳಿಸಿದರು. ಅವರು ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ಔಟಾದರು. ರೊಮಾರಿಯಾ ಶೆಫರ್ಡ್ ಎಸೆತದಲ್ಲಿ ರೋವ್‌ಮನ್ ಪೊವೆಲ್ ಕ್ಯಾಚ್ ಹಿಡಿದರು. ಕೊನೆಯ ಓವರ್‌ನ ಮೊದಲ, ನಾಲ್ಕು ಮತ್ತು ಐದನೇ ಎಸೆತಗಳಲ್ಲಿ ಸೂರ್ಯಕುಮಾರ್ ಸಿಕ್ಸರ್ ಬಾರಿಸಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ ಏಳು ಸಿಕ್ಸರ್‌ಗಳು ಮತ್ತು ಒಂದು ಬೌಂಡರಿಗಳನ್ನು ಹೊಡೆದರು.

ವೆಂಕಟೇಶ್ ಅಯ್ಯರ್ ಸಾಥ್ ಮತ್ತೊಮ್ಮೆ ಈ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಉತ್ತಮ ಬ್ಯಾಟಿಂಗ್ ಮಾಡಿ ಸೂರ್ಯಕುಮಾರ್​ಗೆ ಬೆಂಬಲ ನೀಡಿದರು. ಇವರಿಬ್ಬರು 37 ಎಸೆತಗಳಲ್ಲಿ 91 ರನ್ ಗಳಿಸಿದರು. ಅಯ್ಯರ್ 19 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 35 ರನ್ ಗಳಿಸಿದರು. ಕೊನೆಯ ಐದು ಓವರ್‌ಗಳಲ್ಲಿ ಈ ಜೋಡಿ ಬಿರುಸಿನ ರೀತಿಯಲ್ಲಿ ರನ್ ಗಳಿಸಿ ಒಟ್ಟು 86 ರನ್ ಗಳಿಸಿತು.

ಇದನ್ನೂ ಓದಿ:AUS vs SL: ಆಸೀಸ್ ವಿರುದ್ಧ ಕೊನೆಗೂ ಗೆದ್ದ ಲಂಕಾ; 1 ವರ್ಷ ನಿಷೇಧಕ್ಕೊಳಗಾಗಿದ್ದವ ಪಂದ್ಯ ಗೆಲ್ಲಿಸಿದ

ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ