AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SuryaKumar Yadav: ಇಂಗ್ಲೆಂಡ್ ವಿರುದ್ಧ ಗೆದ್ದ ಖುಷಿಯ ನಡುವೆ ಟೀಮ್ ಇಂಡಿಯಾಕ್ಕೆ ಆಘಾತ: ಸ್ಟಾರ್ ಬ್ಯಾಟರ್ ಅನುಮಾನ?

Warm-up Match India vs England: ಐಪಿಎಲ್​ನಿಂದಲೂ ಸೂರ್ಯಕುಮಾರ್ ಬ್ಯಾಡ್ ಫಾರ್ಮ್​ನಿಂದ ಟೀಕೆಗಳಿಗೆ ಗುರಿಯಾಗಿದ್ದರು. ಇದನ್ನು ಟಿ20 ವಿಶ್ವಕಪ್​ನ ಅಭ್ಯಾಸ ಪಂದ್ಯದಲ್ಲೂ ಮುಂದುವರೆಸಿದ್ದಾರೆ. ಭಾರತ vs ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 9 ಎಸೆತಗಳಲ್ಲಿ 8 ರನ್​ಗೆ ಔಟ್ ಆದರು.

SuryaKumar Yadav: ಇಂಗ್ಲೆಂಡ್ ವಿರುದ್ಧ ಗೆದ್ದ ಖುಷಿಯ ನಡುವೆ ಟೀಮ್ ಇಂಡಿಯಾಕ್ಕೆ ಆಘಾತ: ಸ್ಟಾರ್ ಬ್ಯಾಟರ್ ಅನುಮಾನ?
IND vs ENG T20 World Cup
TV9 Web
| Updated By: Vinay Bhat|

Updated on: Oct 19, 2021 | 9:29 AM

Share

ಟಿ20 ವಿಶ್ವಕಪ್ 2021 (ICC T20 World Cup) ಅನ್ನು ಭಾರತ ಕ್ರಿಕೆಟ್ ತಂಡ (Inddian Cricket Team) ಅಭ್ಯಾಸ ಪಂದ್ಯವನ್ನಾಡುವ ಮೂಲಕ ಶುರುಮಾಡಿದೆ. ಇಂಗ್ಲೆಂಡ್ (India vs England) ವಿರುದ್ಧ 7 ವಿಕೆಟ್​ಗಳ ಭರ್ಜರಿ ಗೆಲುವು ಕಂಡಿದ್ದು, ಅಧಿಕೃತ ಆಟಕ್ಕೂ ಮುನ್ನ ಎದುರಾಳಿಗೆ ದೊಡ್ಡ ಸಂದೇಶ ರವಾನಿಸಿದೆ. ಇಶಾನ್ ಕಿಶನ್ (Ishan Kishan) ಹಾಗೂ ಕೆ. ಎಲ್ ರಾಹುಲ್ (KL Rahul)ಸ್ಫೋಟಕ ಬ್ಯಾಟಿಂಗ್​ಗೆ ಕಂಗಾಲಾದ ಆಂಗ್ಲರು ಸೋಲೊಪ್ಪಿಗೊಂಡರು. ಟೀಮ್ ಇಂಡಿಯಾಕ್ಕೆ (Team India) ಇಂಗ್ಲೆಂಡ್ ವಿರುದ್ಧ ಗೆದ್ದ ಖುಷಿ ಒಂದುಕಡೆಯಾದರೆ, ಮತ್ತೊಂದೆಡೆ ಆತಂಕ ಮನೆಮಾಡಿದೆ. ತಂಡದ ಪ್ರಮುಖ ಬ್ಯಾಟರ್ ಮುಂದಿನ ಪಂದ್ಯಗಳಲ್ಲಿ ಪ್ಲೇಯಿಂಗ್​ನಲ್ಲಿ (India Playing XI) ಕಾಣಿಸಿಕೊಳ್ಳುವುದು ಅನುಮಾನ. ಹೌದು, ಕಳಪೆ ಫಾರ್ಮ್​ನಿಂದ ಕಂಗೆಟ್ಟಿರುವ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಬಳಿಕ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸುತ್ತಿಲ್ಲ. ಇದು ವಿರಾಟ್ ಕೊಹ್ಲಿ (Virat Kohli) ಮತ್ತು ಮ್ಯಾನೇಜ್ಮೆಂಟ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಎರಡನೇ ಚರಣದ ಐಪಿಎಲ್​ನಿಂದಲೂ ಸೂರ್ಯಕುಮಾರ್ ಬ್ಯಾಡ್ ಫಾರ್ಮ್​ನಿಂದ ಟೀಕೆಗಳಿಗೆ ಗುರಿಯಾಗಿದ್ದರು. ಇದನ್ನು ಟಿ20 ವಿಶ್ವಕಪ್​ನ ಅಭ್ಯಾಸ ಪಂದ್ಯದಲ್ಲೂ ಮುಂದುವರೆಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯಾದವ್ 9 ಎಸೆತಗಳಲ್ಲಿ 1 ಬೌಂಡರಿ ಬಾರಿಸಿ 8 ರನ್​ಗೆ ಔಟ್ ಆದರು. ಅನುಭವಿ ಶ್ರೇಯಸ್ ಅಯ್ಯರ್​ರನ್ನು ರಿಸರ್ವ್ ಪ್ಲೇಯರ್ ಆಗಿ ಕೂರಿಸಿ ಸೂರ್ಯಕುಮಾರ್​ಗೆ ಅವಕಾಶ ನೀಡಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಈಗ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ.

ಸೋಮವಾರ ನಡೆದ ಅಭ್ಯಾಸ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಜಾನಿ ಬೈರ್​ಸ್ಟೋ ಅವರ 49 ರನ್, ಮೊಯೀನ್ ಅಲಿ ಅಜೇಯ 43 ರನ್ ಮತ್ತು ಲ್ಯಾಮ್ ಲಿವಿಂಗ್​ಸ್ಟೋನ್ ಅವರ 30 ರನ್​ಗಳ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಕಲೆಹಾಕಿತು. ಭಾರತ ಪರ ಮೊಹಮ್ಮದ್ ಶಮಿ 4 ಓವರ್​ಗೆ 40 ರನ್ ನೀಡಿದ 3 ವಿಕೆಟ್ ಪಡೆದರು. ಜಸ್​ಪ್ರೀತ್ ಬುಮ್ರಾ ಮತ್ತು ರಾಹುಲ್ ಚಹಾರ್ ತಲಾ 1 ವಿಕೆಟ್ ಕಿತ್ತರು.

189 ರನ್​ಗಳ ದೊಡ್ಡ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಭಾರತ ಸ್ಫೋಟಕ ಆರಂಭ ಪಡೆದುಕೊಂಡಿತು. ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿ ಕೆ. ಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಿದರು. ಐಸಿಸಿ ಅಕಾಡೆಮಿ ಗ್ರೌಂಡ್​ನ ಮೂಲೆಮೂಲೆಗೆ ಚೆಂಡನ್ನು ಅಟ್ಟಿದರು. ಮೊದಲ ವಿಕೆಟ್​ಗೆ ಈ ಜೋಡಿ 8.2 ಓವರ್​ನಲ್ಲಿ 82 ರನ್ ಚಚ್ಚಿತು.

ಕೆ. ಎಲ್ ರಾಹುಲ್ ಕೇವಲ 24 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್ ಸಿಡಿಸಿ 51 ರನ್​ ಬಾರಿಸಿದರೆ, ಕಿಶನ್ 46 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್​ನೊಂದಿಗೆ 70 ರನ್ ಗಳಿಸಿದ್ದಾಗ ನಿವೃತ್ತಿ ಪಡೆದುಕೊಂಡರು. ವಿರಾಟ್ ಕೊಹ್ಲಿ 13 ಎಸೆತಗಳಲ್ಲಿ 11 ರನ್​ಗೆ ಔಟ್ ಆದರೆ, ಸೂರ್ಯಕುಮಾರ್ ಯಾದವ್ 9 ಎಸೆತಗಳಲ್ಲಿ 8 ರನ್​ಗೆ ಸುಸ್ತಾದರು.

ನಂತರ ರಿಷಭ್ ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ಜೊತೆಗೂಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಂತ್ ಕೇವಲ 14 ಎಸೆತಗಳಲ್ಲಿ 3 ಸಿಕ್ಸರ್, 1 ಬೌಂಡರಿಯೊಂದಿಗತೆ ಅಜೇಯ 29 ಮತ್ತು ಪಾಂಡ್ಯ 12 ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತ 19 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಬಾರಿಸಿ ಭರ್ಜರಿ ಗೆಲುವು ಕಂಡಿತು.

ಟೀಮ್ ಇಂಡಿಯಾ ತನ್ನ ಮುಂದಿನ ಅಭ್ಯಾಸ ಪಂದ್ಯವನ್ನು ಇದೇ ಮೈದಾನದಲ್ಲಿ ಅಕ್ಟೋಬರ್ 20 ರಂದು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

Sri Lanka vs Namibia: ಶ್ರೀಲಂಕಾ ಬೌಲರ್​ಗಳ ದಾಳಿಗೆ ನಲುಗಿದ ನಮೀಬಿಯಾ: ಸಿಂಹಳೀಯರಿಂದ ಭರ್ಜರಿ ಆರಂಭ

Curtis Campher: 4 ಬಾಲ್-4 ವಿಕೆಟ್: ಟಿ20 ವಿಶ್ವಕಪ್​ನ ಎರಡನೇ ದಿನವೇ ಸೃಷ್ಟಿಯಾಯಿತು ಐತಿಹಾಸಿಕ ದಾಖಲೆ

(Suryakumar Yadav poor performance continued difficult to get a chance in Team India Playing 11)

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!