AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಪ್ಲ್ಯಾನೇ ಬೇರೆಯಿತ್ತು, ಆದರೆ ಇಶಾನ್ ಕಿಶನ್ ಮಾತ್ರ ಅದನ್ನ ಪಾಲಿಸಿಲ್ಲ..!

India vs Pakistan: ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ ಗಳಿಸಿದ್ದು ಕೇವಲ 114 ರನ್​​ ಮಾತ್ರ. ಈ ಮೂಲಕ ಟೀಮ್ ಇಂಡಿಯಾ 61 ರನ್​​ಗಳ ಅಮೋಘ ಗೆಲುವು ದಾಖಲಿಸಿದೆ.

ನಮ್ಮ ಪ್ಲ್ಯಾನೇ ಬೇರೆಯಿತ್ತು, ಆದರೆ ಇಶಾನ್ ಕಿಶನ್ ಮಾತ್ರ ಅದನ್ನ ಪಾಲಿಸಿಲ್ಲ..!
Suryakumar Yadav
ಝಾಹಿರ್ ಯೂಸುಫ್
|

Updated on:Feb 16, 2026 | 8:35 AM

Share

ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಓವರ್​ನಲ್ಲೇ ಅಭಿಷೇಕ್ ಶರ್ಮಾ (0) ವಿಕೆಟ್ ಕಳೆದುಕೊಂಡಿತು.

ಈ ಆರಂಭಿಕ ಆಘಾತದ ಹೊರತಾಗಿಯೂ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. 40 ಎಸೆತಗಳನ್ನು ಎದುರಿಸಿದ ಇಶಾನ್ 10 ಫೋರ್ ಹಾಗೂ 3 ಭರ್ಜರಿ ಸಿಕ್ಸ್​ ಚಚ್ಚುವ ಮೂಲಕ 77 ರನ್ ಕಲೆಹಾಕಿದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 18 ಓವರ್​ಗಳಲ್ಲಿ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 61 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಈ ಗೆಲುವಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಅವರ ಬ್ಯಾಟಿಂಗ್ ವೈಖರಿಯನ್ನು ಹಾಡಿ ಹೊಗಳಿದ್ದಾರೆ. ಈ ಪಿಚ್​ನಲ್ಲಿ ಮೊದಲು ಬ್ಯಾಟ್ ಮಾಡುವುದು ಉತ್ತಮ ಆಯ್ಕೆ ಎಂದು ಭಾವಿಸಿದ್ದೆ. ಇದಕ್ಕಾಗಿಯೇ ನಾವು ವಿಶೇಷ ಪ್ಲ್ಯಾನ್ ರೂಪಿಸಿದ್ದೆವು.

ಏಕೆಂದರೆ ಇದು ನಿಧಾನಗತಿಯ ಪಿಚ್ ಆಗಿರುವುದರಿಂದ ಆರಂಭದಲ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್​ ಮಾಡಲು ಪ್ಲ್ಯಾನ್ ರೂಪಿಸಲಾಗಿತ್ತು. ಆದರೆ ಇಶಾನ್ ಕಿಶನ್ ಮಾತ್ರ ಈ ಪ್ಲ್ಯಾನ್​​ ಅನ್ನು ಪಾಲಿಸಿಲ್ಲ. ಬದಲಾಗಿ ಔಟ್ ಆಫ್ ಬಾಕ್ಸ್​ನಂತೆ ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅದರಲ್ಲೂ ಶೂನ್ಯಕ್ಕೆ 1 ವಿಕೆಟ್ ಕಳೆದುಕೊಂಡಾಗ ಇಶಾನ್ ಬ್ಯಾಟಿಂಗ್ ಮಾಡಿದ್ದು ಅದ್ಭುತವಾಗಿತ್ತು.

ಇಶಾನ್ ಕಿಶನ್ ನಮಗೆ ಪವರ್​ಪ್ಲೇನಲ್ಲೇ ಉತ್ತಮ ಮುನ್ನಡೆ ತಂದು ಕೊಟ್ಟರು. ಇದಾದ ಬಳಿಕ ತಿಲಕ್ ವರ್ಮಾ, ಶಿವಂ ದುಬೆ ಮತ್ತು ರಿಂಕು ಸಿಂಗ್ ಬ್ಯಾಟಿಂಗ್ ಮಾಡಿದ ರೀತಿ ಕೂಡ ಶ್ಲಾಘನೀಯ. ನಮ್ಮ ಟಾರ್ಗೆಟ್ 155 ಕ್ಕಿಂತ ಹೆಚ್ಚಿನ ಮೊತ್ತವಾಗಿತ್ತು. ಆದರೆ ಯಾವಾಗ 175 ರನ್​ಗಳು ಮೂಡಿಬಂತೋ ಪಂದ್ಯವು ನಮ್ಮ ಕೈಯಲ್ಲಿದೆ ಎಂದು ಭಾವಿಸಿದ್ದೆ.

ಇದನ್ನೂ ಓದಿ: 42 ರನ್​ಗಳು… ಪಾಕ್ ವಿರುದ್ಧ ‘ಪವರ್’​ಫುಲ್ ದಾಖಲೆ ಬರೆದ ಇಶಾನ್ ಕಿಶನ್

ಏಕೆಂದರೆ 155 ರನ್​ ಈ ಪಿಚ್​ನಲ್ಲಿ ಸಮಾನ್ಯ ಸ್ಕೋರ್. ನಾವು 175 ತಲುಪಿದ ತಕ್ಷಣ, ಅದು ಸರಾಸರಿಗಿಂತ 15-20 ರನ್‌ಗಳು ಹೆಚ್ಚಿದೆ ಎಂದು ಭಾವಿಸಿದ್ದೆವು. ಅತ್ತ ಹಾರ್ದಿಕ್ ಪಾಂಡ್ಯ ಹೊಸ ಚೆಂಡಿನಲ್ಲಿ ಜವಾಬ್ದಾರಿಯನ್ನು ತೆಗೆದುಕೊಂಡರು. ಆ ನಂತರ ಬುಮ್ರಾ ತಾನೇಕೆ ವಿಶ್ವದ ಅತ್ಯುತ್ತಮ ಬೌಲರ್ ಎಂಬುದನ್ನು ತೋರಿಸಿದರು.  ನಿಜ ಹೇಳಬೇಕೆಂದರೆ, ನಾವೇನು ಅಂದುಕೊಂಡಿದ್ದೆವು ಅವೆಲ್ಲವೂ ಆಗಿದೆ. ಹೀಗಾಗಿ ಈ ಗೆಲುವು ಭಾರತಕ್ಕಾಗಿ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

Published On - 8:34 am, Mon, 16 February 26

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ