AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಏಕೆ ಪಾಕಿಸ್ತಾನಕ್ಕೆ ಬರ್ತಿಲ್ಲ ಎಂಬ ಪ್ರಶ್ನೆಗೆ ಸೂರ್ಯಕುಮಾರ್ ಉತ್ತರ ಹೀಗಿತ್ತು

Champions trophy 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಕೈಯಲ್ಲಿದೆ. ಆದರೆ ಪಾಕ್​ನಲ್ಲಿ ಟೂರ್ನಿ ನಡೆದರೆ ಭಾರತ ತಂಡ ತೆರಳುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯುವ ಸಾಧ್ಯತೆಯಿದೆ.

ಟೀಮ್ ಇಂಡಿಯಾ ಏಕೆ ಪಾಕಿಸ್ತಾನಕ್ಕೆ ಬರ್ತಿಲ್ಲ ಎಂಬ ಪ್ರಶ್ನೆಗೆ ಸೂರ್ಯಕುಮಾರ್ ಉತ್ತರ ಹೀಗಿತ್ತು
Suryakumar Yadav
ಝಾಹಿರ್ ಯೂಸುಫ್
|

Updated on:Nov 13, 2024 | 12:58 PM

Share

ಕ್ರಿಕೆಟ್ ಅಂಗಳದಲ್ಲಿ ಚಾಂಪಿಯನ್ಸ್​ ಟ್ರೋಫಿ ಚರ್ಚೆ ಜೋರಾಗಿದೆ. ಪಾಕ್​ನಲ್ಲಿ ನಡೆಯಲಿರುವ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಅಲ್ಲದೆ ಟೀಮ್ ಇಂಡಿಯಾ ಟೂರ್ನಿಯಲ್ಲಿ ಭಾಗವಹಿಸಬೇಕಿದ್ದರೆ ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವಂತೆ ಬೇಡಿಕೆಯಿಡಲಾಗಿದೆ. ಅದರಂತೆ ಭಾರತ ತಂಡದ ಪಂದ್ಯಗಳನ್ನು ಯುಎಇ ಅಥವಾ ಶ್ರೀಲಂಕಾದಲ್ಲಿ ಆಯೋಜಿಸಿದರೆ ಮಾತ್ರ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಬಹುದು.

ಅತ್ತ ಭಾರತ ತಂಡವು ಪಾಕ್​ಗೆ ತೆರಳಲು ನಿರಾಕರಿಸಿರುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಚರ್ಚೆಯು ಸೌತ್ ಆಫ್ರಿಕಾದಲ್ಲೂ ಮುಂದುವರೆದಿದೆ. ಅಂದರೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಸೌತ್ ಆಫ್ರಿಕಾದಲ್ಲಿ ಪಾಕ್ ಅಭಿಮಾನಿಗಳು ಭೇಟಿಯಾಗಿದ್ದಾರೆ.

ಈ ವೇಳೆ ಪಾಕಿಸ್ತಾನದ ಕ್ರಿಕೆಟ್ ಪ್ರೇಮಿಗಳು ಸೂರ್ಯಕುಮಾರ್ ಯಾದವ್ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದರ ನಡುವೆ ಭಾರತ ತಂಡವೇಕೆ ಪಾಕಿಸ್ತಾನಕ್ಕೆ ಬರುತ್ತಿಲ್ಲ ಎಂದು ಅಭಿಮಾನಿಯೊಬ್ಬರು ಟೀಮ್ ಇಂಡಿಯಾ ನಾಯಕನನ್ನು ಪ್ರಶ್ನಿಸಿದ್ದಾರೆ.

ಈ ಪ್ರಶ್ನೆಗೆ ಉತ್ತರಿಸಿದ ಸೂರ್ಯಕುಮಾರ್ ಯಾದವ್, ಇದ್ಯಾವುದೂ ನಮ್ಮ ಕೈಯಲ್ಲಿಲ್ಲ ಎಂದಿದ್ದಾರೆ. ಅಂದರೆ ಪಾಕಿಸ್ತಾನದಲ್ಲಿ ಆಡಬೇಕಾ ಅಥವಾ ಬೇಡವಾ ಎಂಬುದು ನಿರ್ಧರಿಸುವುದು ಟೀಮ್ ಇಂಡಿಯಾವಲ್ಲ. ಬದಲಾಗಿ ಬಿಸಿಸಿಐ ಹಾಗೂ ಕೇಂದ್ರ ಸರ್ಕಾರ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ. ಇದೀಗ ಸೂರ್ಯಕುಮಾರ್ ಯಾದವ್ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಸದ್ಯ ಭಾರತ ಟಿ20 ತಂಡವು ಸೌತ್ ಆಫ್ರಿಕಾದಲ್ಲಿದ್ದು, ನಾಲ್ಕು ಪಂದ್ಯಗಳ ಟಿ20 ಸರಣಿ ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಗೆಲುವು ದಾಖಲಿಸಿದೆ. ಇದೀಗ ಮೂರನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿದೆ. ಒಂದು ವೇಳೆ ಸೆಂಚುರಿಯನ್​ನ ಸೂಪರ್​ ಸ್ಪೋರ್ಟ್ಸ್ ಪಾರ್ಕ್​ ಮೈದಾನದಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಭಾರತ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಏಕೆಂದರೆ ನಾಲ್ಕು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಗೆದ್ದಿರುವ ಟೀಮ್ ಇಂಡಿಯಾ 3ನೇ ಪಂದ್ಯದಲ್ಲೂ ಜಯ ಸಾಧಿಸಿದರೆ, ಸರಣಿಯನ್ನು ಗೆಲ್ಲಲು ಅಥವಾ ಡ್ರಾ ಮಾಡಿಕೊಳ್ಳಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

Published On - 12:55 pm, Wed, 13 November 24