AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ ಗೆದ್ದರೂ ಸೂರ್ಯಕುಮಾರ್ ಯಾದವ್ ‘ಸ್ಥಾನ’ಕ್ಕೆ ಕುತ್ತು!

ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಏಕದಿನ ತಂಡದ ನಾಯಕನ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿತ್ತು. ಇದೀಗ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾದ ಕ್ಯಾಪ್ಟನ್ ಕೂಡ ಬದಲಾಗುವ ಸುಳಿವು ಸಿಕ್ಕಿದೆ. ಅದರಂತೆ ಮುಂದಿನ ಸರಣಿಯಲ್ಲಿ ಭಾರತ ತಂಡವನ್ನು ಹೊಸ ನಾಯಕ ಮುನ್ನಡೆಸುವ ಸಾಧ್ಯತೆ ಹೆಚ್ಚಿದೆ.

ಟಿ20 ವಿಶ್ವಕಪ್​ ಗೆದ್ದರೂ ಸೂರ್ಯಕುಮಾರ್ ಯಾದವ್ 'ಸ್ಥಾನ'ಕ್ಕೆ ಕುತ್ತು!
Suryakumar Yadav
ಝಾಹಿರ್ ಯೂಸುಫ್
|

Updated on: Mar 09, 2026 | 2:09 PM

Share

T20 World Cup 2026: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ಯಶಸ್ಸಿನೊಂದಿಗೆ ಟೀಮ್ ಇಂಡಿಯಾ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ನಾಯಕನಾಗಿ ಮುಂದುವರೆಯುವುದು ಅನುಮಾನ.

ಏಕೆಂದರೆ ಬಿಸಿಸಿಐ 2026ರ ಟಿ20 ವಿಶ್ವಕಪ್​ಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಇದೀಗ ಅವರು ವಯಸ್ಸು 35 ವರ್ಷ. ಮುಂಬರುವ ಟಿ20 ವಿಶ್ವಕಪ್​ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದೇ ಹೇಳಬಹುದು.

ಇದಕ್ಕೂ ಮುನ್ನ 2024ರ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ ಅವರನ್ನು ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿಸುವ ಸೂಚನೆ ನೀಡಲಾಗಿತ್ತು. ಹೀಗಾಗಿ ಹಿಟ್​ಮ್ಯಾನ್ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

ಇತ್ತ ಸೂರ್ಯಕುಮಾರ್ ಯಾದವ್​ಗೂ ಇದೇ ರೀತಿಯ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಇದಾಗ್ಯೂ ಅವರು ಭಾರತ ಟಿ20 ತಂಡದಲ್ಲಿ ಮುಂದುವರೆಯಲು ಇಚ್ಛಿಸಿದ್ದಾರೆ. ಹೀಗಾಗಿ ಮುಂದಿನ ಸರಣಿಯಲ್ಲೂ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಅವರು ನಾಯಕನಾಗಿ ಕಣಕ್ಕಿಳಿಯುವುದು ಡೌಟ್ ಎನ್ನಲಾಗುತ್ತಿದೆ.

ಸೂರ್ಯಕುಮಾರ್ ಯಾದವ್ ಬದಲಿಗೆ ಹೊಸ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ಚಿಂತಿಸಿದೆ. ಅದರಲ್ಲೂ ಮೂರು ಸ್ವರೂಪಗಳ ತಂಡಕ್ಕೆ ಏಕೈಕ ನಾಯಕ ಇರಬೇಕೆಂಬ ಆಶಯವನ್ನು ಬಿಸಿಸಿಐ ಹೊಂದಿದೆ.

ಹೀಗಾಗಿ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕನಾಗಿರುವ ಶುಭ್​​ಮನ್ ಗಿಲ್​ಗೆ ಕ್ಯಾಪ್ಟನ್ ಪಟ್ಟ ನೀಡಬಹುದು. ಆದರೆ ಅದಕ್ಕೂ ಮುನ್ನ ಗಿಲ್ ಭಾರತ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಬೇಕಿದೆ.

ಹೀಗೆ ಕಂಬ್ಯಾಕ್ ಮಾಡಲು ಶುಭ್​ಮನ್ ಗಿಲ್ ಮುಂದಿರುವ ದಾರಿ ಈ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಭಾರತ ಟಿ20 ತಂಡಕ್ಕೆ ಕಂಬ್ಯಾಕ್ ಮಾಡುವುದು ಖಚಿತ.

ಅದರಲ್ಲೂ ಸ್ಥಿರ ಪ್ರದರ್ಶನದೊಂದಿಗೆ ಗುಜರಾತ್ ಟೈಟಾನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದರೆ ಭಾರತ ಟಿ20 ತಂಡದ ನಾಯಕನಾಗಿ ಶುಭ್​ಮನ್ ಗಿಲ್ ಆಯ್ಕೆಯಾಗಲಿದ್ದಾರೆ. ಇಲ್ಲದಿದ್ದರೆ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ನೀಡಬಹುದು.

ಅಂದರೆ ಮುಂಬರುವ ಟಿ20 ಸರಣಿಗೂ ಮುನ್ನ ವಿಶ್ವ ಚಾಂಪಿಯನ್ ಟೀಮ್ ಇಂಡಿಯಾದ ನಾಯಕ ಬದಲಾಗುವ ಸಾಧ್ಯತೆ ಹೆಚ್ಚಿದೆ. ಈ ಮೂಲಕ 2028 ರ ಟಿ20 ವಿಶ್ವಕಪ್​ಗೆ ಈಗಲೇ ನಾಯಕನನ್ನು ರೂಪಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ.

ಇದನ್ನೂ ಓದಿ: ತಲೆಕೆಳಗಾದ ಲೆಕ್ಕಾಚಾರ… ನನ್ನ ಮನೆಗೇನು ತರಲ್ಲ ಎಂದು ಕಿಡಿಕಾರಿದ ಅಮೀರ್

ಅದರಂತೆ ಸೂರ್ಯಕುಮಾರ್ ಯಾದವ್ ಅವರ ಉತ್ತರಾಧಿಕಾರಿಯಾಗಿ ಟೀಮ್ ಇಂಡಿಯಾವನ್ನು ಮುನ್ನಡೆಸುವವರು ಯಾರೆಂಬುದು ಖಚಿತವಾಗಲು ಐಪಿಎಲ್ ಮುಗಿಯುವವರೆಗೆ ಕಾಯಲೇಬೇಕು.

Follow Us
ಇರಾನ್ ಯುದ್ಧದಿಂದ ಜಗತ್ತಿಗೇ ಮಾರಕ ಕಾಯಿಲೆ ಭೀತಿ, ಭಾರತಕ್ಕೂ ಇದೆ ಆತಂಕ!
ಇರಾನ್ ಯುದ್ಧದಿಂದ ಜಗತ್ತಿಗೇ ಮಾರಕ ಕಾಯಿಲೆ ಭೀತಿ, ಭಾರತಕ್ಕೂ ಇದೆ ಆತಂಕ!
RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಸತೀಶ್​​ ಜಾರಕಿಹೊಳಿ ಅಚ್ಚರಿಯ ಹೇಳಿಕೆ
RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಸತೀಶ್​​ ಜಾರಕಿಹೊಳಿ ಅಚ್ಚರಿಯ ಹೇಳಿಕೆ
ಸೊಂಡಿಲ ಬಳಸಿ ಮರದಿಂದ ಹಲಸಿನ ಕಾಯಿ ಕಿತ್ತ ಆನೆ
ಸೊಂಡಿಲ ಬಳಸಿ ಮರದಿಂದ ಹಲಸಿನ ಕಾಯಿ ಕಿತ್ತ ಆನೆ
ಸಾಕು ನಾಯಿಗೆ ಅದ್ದೂರಿಯಾಗಿ ಸೀಮಂತ: ಉಡಿ ತುಂಬಿದ ಮಹಿಳೆಯರು
ಸಾಕು ನಾಯಿಗೆ ಅದ್ದೂರಿಯಾಗಿ ಸೀಮಂತ: ಉಡಿ ತುಂಬಿದ ಮಹಿಳೆಯರು
‘ಬರ್ತ್​​​ಡೇ ದಿನ ಮನೆಯಲ್ಲಿ ಇರಲ್ಲ’; ಪುನೀತ್ ಹಳೆಯ ವಿಡಿಯೋ ವೈರಲ್
‘ಬರ್ತ್​​​ಡೇ ದಿನ ಮನೆಯಲ್ಲಿ ಇರಲ್ಲ’; ಪುನೀತ್ ಹಳೆಯ ವಿಡಿಯೋ ವೈರಲ್
ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಮಹತ್ವದ ಘೋಷಣೆ
ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಮಹತ್ವದ ಘೋಷಣೆ
ಗಂಡ-ಹೆಂಡತಿ ಜಗಳ ಸಾವಿನಲ್ಲಿ ಅಂತ್ಯ; ಅಳಿಯನೇ ಮಗಳನ್ನು ಸಾಯಿಸಿದ ಆರೋಪ!
ಗಂಡ-ಹೆಂಡತಿ ಜಗಳ ಸಾವಿನಲ್ಲಿ ಅಂತ್ಯ; ಅಳಿಯನೇ ಮಗಳನ್ನು ಸಾಯಿಸಿದ ಆರೋಪ!
‘ನೀರಿಗೆ ಬಾರೆ ಚನ್ನಿ’ ಹಾಡಿಗೆ ರಚಿತಾ-ದುನಿಯಾ ವಿಜಯ್ ಡ್ಯಾನ್ಸ್
‘ನೀರಿಗೆ ಬಾರೆ ಚನ್ನಿ’ ಹಾಡಿಗೆ ರಚಿತಾ-ದುನಿಯಾ ವಿಜಯ್ ಡ್ಯಾನ್ಸ್
Video: ರೋಗಿಗಳ ರಕ್ಷಣೆಗೆ ಇರುವ ಆ್ಯಂಬುಲೆನ್ಸಲ್ಲಿ ಬಸ್ಸಿನಂತೆ ಜನರ ಸಾಗಾಟ!
Video: ರೋಗಿಗಳ ರಕ್ಷಣೆಗೆ ಇರುವ ಆ್ಯಂಬುಲೆನ್ಸಲ್ಲಿ ಬಸ್ಸಿನಂತೆ ಜನರ ಸಾಗಾಟ!
ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿದ ಮಹಿಳೆ
ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿದ ಮಹಿಳೆ