Suryakumar Yadav: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

India vs England Test: ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್)

Suryakumar Yadav: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ
Suryakumar Yadav
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 28, 2021 | 2:49 PM

ಭಾರತ-ಶ್ರೀಲಂಕಾ ನಡುವಿನ ಟಿ20 ಸರಣಿಯ 2ನೇ ಪಂದ್ಯ ಕೊರೋನಾಂತಕದಿಂದ ಬುಧವಾರಕ್ಕೆ ಮುಂದೂಲ್ಪಟ್ಟಿದೆ. ಟೀಮ್ ಇಂಡಿಯಾದ ಆಲ್ ರೌಂಡರ್ ಕೃನಾಲ್ ಪಾಂಡ್ಯ (Krunal Pandya) ಕೋವಿಡ್ ಪಾಸಿಟಿವ್ ಆಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ನಡೆಯಬೇಕಿದ್ದ 2ನೇ ಟಿ20 ಪಂದ್ಯವನ್ನು ಬುಧವಾರ ನಡೆಸಲಾಗುತ್ತದೆ. ಇತ್ತ ಟೀಮ್ ಇಂಡಿಯಾ 9 ಆಟಗಾರರು ಕೃನಾಲ್ ಪಾಂಡ್ಯ ಅವರೊಂದಿಗೆ ನೇರ ಸಂಪರ್ಕ ಹೊಂದಿದ್ದರು ಎಂಬುದು ಇದೀಗ ಬಹಿರಂಗವಾಗಿದೆ. ಈ ಪಟ್ಟಿಯಲ್ಲಿ ಪೃಥ್ವಿ ಶಾ, ಸೂರ್ಯಕುಮಾರ್ (Suryakumar Yadav), ಹಾರ್ದಿಕ್ ಪಾಂಡ್ಯ (Hardik Pandya), ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ (Ishan Kishan), ದೇವದತ್ ಪಡಿಕ್ಕಲ್ (Devdutt Padikkal) ಮತ್ತು ಕೃಷ್ಣಪ್ಪ ಗೌತಮ್ ಹೆಸರುಗಳು ಮುಂಚೂಣಿಯಲ್ಲಿದೆ. ಹೀಗಾಗಿ ಈ ಆಟಗಾರರು 2ನೇ ಮತ್ತು 3ನೇ ಟಿ20 ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ.

ಅತ್ತ ಶ್ರೀಲಂಕಾ ವಿರುದ್ದದ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಇಂಗ್ಲೆಂಡ್​ನತ್ತ ಪ್ರಯಾಣ ಬೆಳೆಸಬೇಕಿದ್ದ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ಪೃಥ್ವಿ ಶಾಗೆ ಸಂಕಷ್ಟ ಎದುರಾಗಿದೆ. ಶ್ರೀಲಂಕಾದಲ್ಲಿ ಐಸೋಲೇಷನ್​ನಲ್ಲಿರುವ ಈ ಆಟಗಾರರು ಇಂಗ್ಲೆಂಡ್​ನತ್ತ ಪ್ರಯಾಣ ಬೆಳೆಸುವುದು ವಿಳಂಬವಾಗಲಿದೆ. ಈಗಾಗಲೇ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದ ಮೂವರು ಆಟಗಾರರು ಗಾಯದ ಹಿನ್ನೆಲೆ ತಂಡದಿಂದ ಹೊರಬಿದ್ದಿದ್ದಾರೆ. ಅವರ ಬದಲಿಯಾಗಿ ಆಯ್ಕೆಯಾಗಿದ್ದ ಸೂರ್ಯಕುಮಾರ್ ಯಾದವ್-ಪೃಥ್ವಿ ಶಾ ಕೂಡ ಕೊರೋನಾಂತಕವನ್ನು ಎದುರಿಸುತ್ತಿದ್ದಾರೆ.

ಒಂದು ವೇಳೆ ಈ ಆಟಗಾರರು ಕೂಡ ಕೋವಿಡ್ ಪಾಸಿಟಿವ್ ಆದರೆ ಈ ಇಬ್ಬರನ್ನು ಕೂಡ ಇಂಗ್ಲೆಂಡ್ ಸರಣಿಯಿಂದ ಕೈ ಬಿಡಲಾಗುತ್ತದೆ. ಏಕೆಂದರೆ ಕೊರೋನಾ ಗುಣಮುಖರಾಗಿ ಇಂಗ್ಲೆಂಡ್​ಗೆ ತೆರಳಿದರೂ ಅಲ್ಲೂ ಕೂಡ ಒಂದು ವಾರಗಳ ಕಾಲ ಕ್ವಾರಂಟೈನ್​ಗೆ ಒಳಗಾಗಬೇಕಾಗುತ್ತದೆ. ಅಷ್ಟರಲ್ಲಿ ಮೊದಲೆರಡು ಪಂದ್ಯಗಳು ಮುಗಿದಿರಲಿದೆ. ಹೀಗಾಗಿ ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬರದಿರಲಿ ಎಂಬ ಪ್ರಾರ್ಥನೆಯಲ್ಲಿದ್ದಾರೆ ಸೂರ್ಯಕುಮಾರ್ ಯಾದವ್. ಭಾರತದ ಪರ ಏಕದಿನ-ಟಿ20 ಪಂದ್ಯಗಳಲ್ಲಿ ಪದಾರ್ಪಣೆ ಮಾಡಿರುವ ಸೂರ್ಯಕುಮಾರ್​ಗೆ ಇದೇ ಮೊದಲ ಬಾರಿಗೆ ಟೆಸ್ಟ್ ತಂಡಕ್ಕೆ ಬುಲಾವ್ ಬಂದಿದ್ದು, ಈ ಅವಕಾಶ ಕೊರೋನಾದಿಂದ ಕೈತಪ್ಪುವ ಆತಂಕ ಎದುರಾಗಿದೆ.

ಭಾರತ-ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ಆಗಸ್ಟ್ 4 ರಿಂದ ಪ್ರಾರಂಭವಾಗಲಿದೆ. 2ನೇ ಟೆಸ್ಟ್ ಪಂದ್ಯವು ಆಗಸ್ಟ್ 12 ರಿಂದ 16ರವರೆಗೆ ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯವು 25 ರಿಂದ ಪ್ರಾರಂಭವಾಗಲಿದ್ದು, 4ನೇ ಟೆಸ್ಟ್​ ಸೆಪ್ಟೆಂಬರ್ 2 ಕ್ಕೆ ಶುರುವಾಗಿ ಸೆ.6 ರವರೆಗೆ ನಡೆಯಲಿದೆ. ಇನ್ನು ಅಂತಿಮ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 10 ರಿಂದ ಸೆ.14ರವರೆಗೆ ಜರುಗಲಿದೆ. ಈ ಐದು ಪಂದ್ಯಗಳ ಸರಣಿಯ ಮೂಲಕ ಉತ್ತಮ ಫಾರ್ಮ್​ನಲ್ಲಿರುವ ಸೂರ್ಯಕುಮಾರ್ ಯಾದವ್ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ವಿಶ್ವಾಸದಲ್ಲಿದ್ದರು. ಇದೀಗ ಕೊರೋನಾಂತಕದಿಂದ ಟೆಸ್ಟ್ ತಂಡದ ಅವಕಾಶ ಕೈ ತಪ್ಪಲಿದೆಯಾ ಎಂಬ ಪ್ರಶ್ನೆಯೊಂದು ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಸೂರ್ಯನ ಮುಂದಿದೆ.

ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್. ರಾಹುಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್

ಮೀಸಲು ಆಟಗಾರರು: ಪ್ರಸಿದ್ಧ್ ಕೃಷ್ಣ, ಅರ್ಝಾನ್ ನಾಗ್ವಾಸ್ವಾಲಾ

ಇದನ್ನೂ ಓದಿ: Dhananjay: ಡೇಂಜರಸ್ ಡಾಲಿ ಇಸ್ ಬ್ಯಾಕ್: ಹೊಸ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ಇದನ್ನೂ ಓದಿ: Rahul Dravid: ಶ್ರೀಲಂಕಾ ನಾಯಕನ ಜೊತೆ ರಾಹುಲ್ ದ್ರಾವಿಡ್ ಮಾತನಾಡಿದ್ದೇನು? ಇಲ್ಲಿದೆ ಉತ್ತರ

(Suryakumar Yadav’s England Departure May Face Delay)

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ