AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ 23 ವರ್ಷದ ಯುವ ಆಲ್​ರೌಂಡರ್ ಎಂಟ್ರಿ..!

India T20 Squad: ಭಾರತ ಮತ್ತು ಐರ್ಲೆಂಡ್ ನಡುವಣ ಟಿ20 ಸರಣಿಯ ಜೂನ್ 26 ರಿಂದ ಶುರುವಾಗಲಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 5 ಮ್ಯಾಚ್​ಗಳ ಟಿ20 ಸರಣಿ ಆಡಲಿದೆ. ಆ ನಂತರ ಭಾರತ ಮತ್ತು ಇಂಗ್ಲೆಂಡ್ ನಡುವಣ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಟೀಮ್ ಇಂಡಿಯಾಗೆ 23 ವರ್ಷದ ಯುವ ಆಲ್​ರೌಂಡರ್ ಎಂಟ್ರಿ..!
Suryansh ShedgeImage Credit source: PBKS
ಝಾಹಿರ್ ಯೂಸುಫ್
|

Updated on:Jun 24, 2026 | 7:17 AM

Share

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಬದಲಾವಣೆಯೊಂದಿಗೆ 23 ವರ್ಷದ ಯುವ ಆಲ್​ರೌಂಡರ್ ಸೂರ್ಯಂಶ್ ಶೆಡ್ಗೆ ಭಾರತ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಟೀಮ್ ಇಂಡಿಯಾ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯಗೊಂಡಿದ್ದು, ಹೀಗಾಗಿ ಅವರು ಮುಂಬರುವ ಸರಣಿಗಳಿಂದ ಹೊರಗುಳಿದಿದ್ದಾರೆ.

  • ನಿತೀಶ್ ಕುಮಾರ್ ರೆಡ್ಡಿ ಅವರ ಬದಲಿಗೆ ಇದೀಗ ಸೂರ್ಯಂಶ್ ಶೆಡ್ಗೆ ಅವರನ್ನು ಭಾರತ ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿದೆ.
  • ಸೂರ್ಯಂಶ್ ಶೆಡ್ಗೆ ಮುಂಬೈ ಮೂಲದ ಯುವ ಆಲ್​ರೌಂಡರ್​.
  • ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು.

ನಿತೀಶ್ ಕುಮಾರ್ ರೆಡ್ಡಿಗೆ ಏನಾಗಿದೆ?

ಅಫ್ಘಾನಿಸ್ತಾನ್ ವಿರುದ್ಧದ ಕೊನೆಯ ಏಕದಿನ ಪಂದ್ಯದ ವೇಳೆ ನಿತೀಶ್ ಕುಮಾರ್ ರೆಡ್ಡಿ ಎಡಗಾಲಿನ ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಅವರ ಸ್ಕ್ಯಾನಿಂಗ್‌ ರಿಪೋರ್ಟ್​ನಲ್ಲಿ ಎಡಗಾಲಿನ ಸ್ನಾಯುವಿನಲ್ಲಿ ತೀವ್ರವಾದ ಊತ ಮತ್ತು  ಹಾನಿಯಾಗಿರುವುದು ದೃಢಪಟ್ಟಿದೆ. ಹೀಗಾಗಿ ವೈದ್ಯರು ಕನಿಷ್ಠ ಒಂದು ತಿಂಗಳುಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಿಂದ ನಿತೀಶ್ ಕುಮಾರ್ ರೆಡ್ಡಿ  ಹೊರಗುಳಿದಿದ್ದಾರೆ.

ಸೂರ್ಯಂಶ್ ಶೆಡ್ಗೆ ಆಯ್ಕೆ ಯಾಕೆ?

ಸೂರ್ಯಂಶ್ ಶೆಡ್ಗೆ ವೇಗದ ಬೌಲಿಂಗ್ ಹಾಗೂ ಬ್ಯಾಟಿಂಗ್ ಮಾಡಬಲ್ಲ ಆಟಗಾರ. 23 ವರ್ಷದ ಮುಂಬೈ ಆಲ್‌ರೌಂಡರ್ ಇತ್ತೀಚಿನ ದೇಶಿ ಹಾಗೂ ಐಪಿಎಲ್ ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ.

  • ಐಪಿಎಲ್ 2026 ರಲ್ಲಿ ಪಂಜಾಬ್ ಕಿಂಗ್ಸ್ ಪರ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಸೂರ್ಯಂಶ್ 7 ಇನ್ನಿಂಗ್ಸ್‌ಗಳಲ್ಲಿ 175.55 ರ ಸ್ಟ್ರೈಕ್ ರೇಟ್‌ನಲ್ಲಿ 158 ರನ್ ಚಚ್ಚಿದ್ದರು.
  • ಶ್ರೀಲಂಕಾದಲ್ಲಿ ನಡೆದ ಭಾರತ ಎ ತಂಡದ ಸರಣಿಯಲ್ಲಿ ಒಂದು ಅರ್ಧಶತಕ (72 ರನ್) ಸೇರಿದಂತೆ ಒಟ್ಟು 147 ರನ್ ಗಳಿಸಿ, 23 ಓವರ್‌ಗಳ ಬೌಲಿಂಗ್ ಜವಾಬ್ದಾರಿಯನ್ನೂ ನಿಭಾಯಿಸಿದ್ದರು. * ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಲ್​ರೌಂಡರ್ ಆಟದೊಂದಿಗೆ ಮುಂಬೈ ತಂಡ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಈ ಎಲ್ಲಾ ಕಾರಣಗಳಿಂದಾಗಿ ನಿತೀಶ್ ಕುಮಾರ್ ರೆಡ್ಡಿ ಅವರ ಸ್ಥಾನಕ್ಕೆ ಸೂರ್ಯಂಶ್ ಶೆಡ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೇ ಮೊದಲ ಬಾರಿಗೆ ಸೂರ್ಯಂಶ್ ಭಾರತ ತಂಡದಲ್ಲಿ ಕಾಣಿಸಿಳ್ಳಲಿದ್ದಾರೆ.

ಇದನ್ನೂ ಓದಿ: ಸಚಿನ್​ರ ವಿಶ್ವ ದಾಖಲೆ ಮುರಿಯಲು ರೂಟ್ ಇನ್ನೆಷ್ಟು ರನ್ ಕಲೆಹಾಕಬೇಕು?

ಭಾರತ ಟಿ20 ತಂಡ:  ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

Published On - 7:16 am, Wed, 24 June 26

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ