ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಶೀಘ್ರದಲ್ಲೇ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಈ ಹಿಂದೆ ಶ್ರೀಲಂಕಾ ಪ್ರವಾಸದಲ್ಲಿದ್ದ ಸೂರ್ಯಕುಮಾರ್ ಯಾದವ್ ಹಾಗೂ ಪೃಥ್ವಿ ಶಾ ಇಂಗ್ಲೆಂಡ್ ಟೆಸ್ಟ್ ಸರಣಿಗಾಗಿ ಆಯ್ಕೆಯಾಗಿದ್ದರು. ಆದರೆ ಲಂಕಾ ವಿರುದ್ದದ 2ನೇ ಟಿ20 ಪಂದ್ಯದ ವೇಳೆ ಟೀಮ್ ಇಂಡಿಯಾ ಆಲ್ರೌಂಡರ್ ಕೃನಾಲ್ ಪಾಂಡ್ಯ ಕೊರೋನಾ ಪಾಸಿಟಿವ್ ಆಗಿದ್ದರು. ಇದೇ ವೇಳೆ ಕೃನಾಲ್ ಜೊತೆ ನೇರ ಸಂಪರ್ಕ ಹೊಂದಿದ್ದ ಆಟಗಾರರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಈ ಪಟ್ಟಿಯಲ್ಲಿ ಸೂರ್ಯ ಹಾಗೂ ಪೃಥ್ವಿ ಶಾ ಒಳಗೊಂಡಿದ್ದರು. ಹೀಗಾಗಿ ಇಂಗ್ಲೆಂಡ್ ವಿರುದ್ದ ಸರಣಿಗಾಗಿ ಈ ಇಬ್ಬರು ಆಟಗಾರರು ಅಲಭ್ಯರಾಗುವ ಸಾಧ್ಯತೆಯಿತ್ತು.
ಆದರೀಗ ಕೋವಿಡ್-19 ಟೆಸ್ಟ್ನಲ್ಲಿ ಈ ಇಬ್ಬರು ಆಟಗಾರರ ರಿಸಲ್ಟ್ ನೆಗೆಟಿವ್ ಬಂದಿದೆ. ಅಲ್ಲದೆ ಮುಂದಿನ 24 ಗಂಟೆಯೊಳಗೆ ಸೂರ್ಯಕುಮಾರ್ ಯಾದವ್ ಹಾಗೂ ಪೃಥ್ವಿ ಶಾ ಶ್ರೀಲಂಕಾದಿಂದಲೇ ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಬಹುದು. ಈಗಾಗಲೇ ವೀಸಾ ಕುರಿತಂತೆ ಶ್ರೀಲಂಕಾದ ಇಂಗ್ಲೆಂಡ್ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿದ್ದು, ಅದರಂತೆ ಸೋಮವಾರ ಅಥವಾ ಮಂಗಳವಾರ ಈ ಇಬ್ಬರು ಕ್ರಿಕೆಟಿಗರು ಇಂಗ್ಲೆಂಡ್ಗೆ ಪ್ರಯಾಣಿಸಲಿದ್ದಾರೆ.
ಇದಾಗ್ಯೂ ಭಾರತ ಮತ್ತು ಶ್ರೀಲಂಕಾದಿಂದ ಬರುವ ಪ್ರವಾಸಿಗರಿಗೆ ಬ್ರಿಟಿಷ್ ಸರ್ಕಾರ ರೆಡ್ ಅಲರ್ಟ್ ವಿಧಿಸಿದ್ದರಿಂದ ಮೊದಲ ಟೆಸ್ಟ್ ವೇಳೆ ಶಾ ಮತ್ತು ಯಾದವ್ ತಂಡವನ್ನು ಕೂಡಿಕೊಳ್ಳೋದು ಕಷ್ಟ. ಹೀಗಾಗಿ ಇಂಗ್ಲೆಂಡ್ನಲ್ಲಿ ಒಂದು ವಾರಗಳ ಕ್ವಾರಂಟೈನ್ ಬಳಿಕ 2ನೇ ಟೆಸ್ಟ್ ವೇಳೆ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.
ಭಾರತ-ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ಆಗಸ್ಟ್ 4 ರಿಂದ ಪ್ರಾರಂಭವಾಗಲಿದೆ. 2ನೇ ಟೆಸ್ಟ್ ಪಂದ್ಯವು ಆಗಸ್ಟ್ 12 ರಿಂದ 16ರವರೆಗೆ ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯವು 25 ರಿಂದ ಪ್ರಾರಂಭವಾಗಲಿದ್ದು, 4ನೇ ಟೆಸ್ಟ್ ಸೆಪ್ಟೆಂಬರ್ 2 ಕ್ಕೆ ಶುರುವಾಗಿ ಸೆ.6 ರವರೆಗೆ ನಡೆಯಲಿದೆ. ಇನ್ನು ಅಂತಿಮ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 10 ರಿಂದ ಸೆ.14ರವರೆಗೆ ಜರುಗಲಿದೆ.
ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್. ರಾಹುಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್
ಹೆಚ್ಚುವರಿ ಆಟಗಾರರು: ಪ್ರಸಿದ್ಧ್ ಕೃಷ್ಣ, ಅರ್ಝಾನ್ ನಾಗ್ವಾಸ್ವಾಲಾ
ಇದನ್ನೂ ಓದಿ: Virat Kohli: ಇಂಗ್ಲೆಂಡ್ ವಿರುದ್ದ ಸಿಡಿಸಿದ್ರೆ ಈ 5 ದಾಖಲೆಗಳು ಕೊಹ್ಲಿ ಪಾಲಾಗುವುದು ಪಕ್ಕಾ
ಇದನ್ನೂ ಓದಿ: IPL 2021: RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಸ್ಟಾರ್ ಆಟಗಾರರು ಕಣಕ್ಕಿಳಿಯುವುದು ಖಚಿತ
ಇದನ್ನೂ ಓದಿ: PV Sindhu: ಒಲಿಂಪಿಕ್ಸ್ನಲ್ಲಿ ಈ ಸಾಧನೆ ಮಾಡಿದ್ದು ಇವರಿಬ್ಬರೇ..!