AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಸಿಕ್ಸ್, ಕೇವಲ 1 ಫೋರ್: ಸ್ಫೋಟಕ ಸೆಂಚುರಿ ಸಿಡಿಸಿದ RCB ಆಟಗಾರ

Swastik Chikara: ಸ್ವಸ್ತಿಕ ಚಿಕಾರ ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಯುವ ಆಟಗಾರನಿಗೆ ಚೊಚ್ಚಲ ಪಂದ್ಯವಾಡುವ ಅವಕಾಶ ಸಿಕ್ಕಿರಲಿಲ್ಲ. ಇದೀಗ ದೇಶೀಯ ಅಂಗಳದಲ್ಲಿ ಕಣಕ್ಕಿಳಿದಿರುವ ಸ್ವಸ್ತಿಕ್ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

11 ಸಿಕ್ಸ್, ಕೇವಲ 1 ಫೋರ್: ಸ್ಫೋಟಕ ಸೆಂಚುರಿ ಸಿಡಿಸಿದ RCB ಆಟಗಾರ
Swastik Chikara
ಝಾಹಿರ್ ಯೂಸುಫ್
|

Updated on: Aug 06, 2025 | 11:54 AM

Share

54ನೇ ಅಖಿಲ ಭಾರತ ಎಫ್‌ಸಿಐ ಅಂತರ ವಲಯ ಕ್ರಿಕೆಟ್ ಟೂರ್ನಮೆಂಟ್​ನ ಫೈನಲ್ ಪಂದ್ಯದಲ್ಲಿ ಉತ್ತರ ವಲಯ ತಂಡ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ರೂವಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ಸ್ವಸ್ತಿಕ್ ಚಿಕಾರ. ತಮಿಳುನಾಡಿನ ಸೇಲಂನಲ್ಲಿನ ಜಿವಿಎಸ್​ ಕ್ಲಬ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಉತ್ತರ ವಲಯ ಹಾಗೂ ಪಶ್ಚಿಮ ವಲಯ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಶ್ಚಿಮ ವಲಯ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಉತ್ತರ ವಲಯ ಪರ ಸ್ವಸ್ತಿಕ್ ಚಿಕಾರ ಹಾಗೂ ನಿತಿನ್ ಸೈನಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಈ ಜೋಡಿಯು ಮೊದಲ ವಿಕೆಟ್​ಗೆ 145 ರನ್​ಗಳ ಜೊತೆಯಾಟವಾಡಿದರು.

ಈ ಹಂತದಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾಗಿ ನಿತಿನ್ ಸೈನಿ (55) ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಸ್ವಸ್ತಿಕ್ ಚಿಕಾರ ಪಶ್ಚಿಮ ವಲಯ ಬೌಲರ್​ಗಳ ಬೆಂಡೆತ್ತಿದರು. ಈ ಮೂಲಕ ಕೇವಲ 62 ಎಸೆತಗಳಲ್ಲಿ ಶತಕ ಪೂರೈಸಿದರು.

ಶತಕದ ಬಳಿಕ 6 ಎಸೆತಗಳನ್ನು ಎದುರಿಸಿದ ಸ್ವಸ್ತಿಕ್ ಚಿಕಾರ ಮತ್ತೆರಡು ಸಿಕ್ಸ್​ ಸಿಡಿಸಿದರು. ಈ ಮೂಲಕ ಕೇವಲ 68 ಎಸೆತಗಳಲ್ಲಿ 11 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 114 ರನ್ ಚಚ್ಚಿದರು. ಸ್ವಸ್ತಿಕ್ ಚಿಕಾರ ಅವರ ಈ ಸ್ಫೋಟಕ ಸೆಂಚುರಿ ನೆರವಿನೊಂದಿಗೆ ಉತ್ತರ ವಲಯ ತಂಡ 20 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 197 ರನ್ ಕಲೆಹಾಕಿತು.

198 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಶ್ಚಿಮ ವಲಯ ತಂಡಕ್ಕೆ ಸಾಹಿಲ್ ಪರಕ್ (46) ಹಾಗೂ  ಓಂಕಾರ್ ಗೌರವ್ (23) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ದಶರತ್ ಚಾವನ್ 29 ಎಸೆತಗಳಲ್ಲಿ 47 ರನ್ ಬಾರಿಸಿದರು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಪಶ್ಚಿಮ ವಲಯ ತಂಡವು 18.3 ಓವರ್​ಗಳಲ್ಲಿ 160 ರನ್​ಗಳಿಸಿ ಆಲೌಟ್ ಆಯಿತು.

ಇದನ್ನೂ ಓದಿ: ಮೊಹಮ್ಮದ್ ಸಿರಾಜ್​ಗೆ ಬರೋಬ್ಬರಿ 80 ಲಕ್ಷ ರೂ..!

ಈ ಮೂಲಕ ಉತ್ತರ ವಲಯ ತಂಡವು 37 ರನ್​ಗಳ ಭರ್ಜರಿ ಜಯ ಸಾಧಿಸಿ ಅಖಿಲ ಭಾರತ ಎಫ್‌ಸಿಐ ಅಂತರ ವಲಯ ಕ್ರಿಕೆಟ್ ಟೂರ್ನಮೆಂಟ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಈ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ ಸ್ವಸ್ತಿಕ್ ಚಿಕಾರ ಆವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?