AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಶಕದ ಬಳಿಕ ಸಿಡಿಸಿದ ಸಿಕ್ಸ್​ ಮೌಲ್ಯ ’99 ಲಕ್ಷ ರೂ.’

IPL 2026 RCB vs MI: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2026) 54ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 168 ರನ್ ಬಾರಿಸಿ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ದಶಕದ ಬಳಿಕ ಸಿಡಿಸಿದ ಸಿಕ್ಸ್​ ಮೌಲ್ಯ '99 ಲಕ್ಷ ರೂ.'
Bhuvneshwar Kumar
ಝಾಹಿರ್ ಯೂಸುಫ್
|

Updated on: May 11, 2026 | 2:15 PM

Share

2016 ರಿಂದ 2026… ಅಕ್ಷರಶಃ ಹತ್ತು ವರ್ಷಗಳ ಅಂತರ! ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ತಮ್ಮ ನಾಲ್ಕನೇ ಸಿಕ್ಸರ್ ಸಿಡಿಸಲು ತೆಗೆದುಕೊಂಡ ಸಮಯವಿದು. ಮುಂಬೈ ಇಂಡಿಯನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಅನಿರೀಕ್ಷಿತ ಗೆಲುವು ತಂದುಕೊಟ್ಟ ಆ ಸಿಕ್ಸರ್ ಮೌಲ್ಯ ಬರೋಬ್ಬರಿ 99 ಲಕ್ಷ ರೂ..!

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿಗೆ ಗೆಲ್ಲಲು ಕೊನೆಯ ಓವರ್‌ನಲ್ಲಿ ಕಠಿಣ ಸವಾಲಿತ್ತು. ಅದರಲ್ಲೂ ಅಂತಿಮ 3 ಎಸೆತಗಳಲ್ಲಿ 9 ರನ್ ಬೇಕಿದ್ದಾಗ, ಒತ್ತಡದ ಪರಿಸ್ಥಿತಿಯಲ್ಲೂ ಭುವನೇಶ್ವರ್ ಕುಮಾರ್ ಮೈದಾನದ ಆಚೆಗೆ ಚೆಂಡನ್ನು ಅಟ್ಟಿದರು. ಈ ಒಂದು ಸಿಕ್ಸರ್‌ನಿಂದ ಆರ್‌ಸಿಬಿಯ ಗೆಲುವಿನ ಸಾಧ್ಯತೆಯನ್ನು 51% ರಿಂದ ನೇರವಾಗಿ 99% ಕ್ಕೆ ಏರಿಸಿತು. ಅಲ್ಲದೆ ಈ ಸಿಕ್ಸರ್‌ನ ಮೌಲ್ಯ ವಿಶ್ಲೇಷಣಾತ್ಮಕವಾಗಿ ಸುಮಾರು ₹99 ಲಕ್ಷ ಎಂದು ಅಂದಾಜಿಸಲಾಗಿದೆ! ಅಂದರೆ ದಶಕದ ಬಳಿಕ ಭುವಿ ಬ್ಯಾಟ್​ನಿಂದ ಸಿಡಿದ ಸಿಕ್ಸ್ ಇದೀಗ 99 ಲಕ್ಷ ರೂ. ಮೌಲ್ಯದ್ದು ಎಂಬುದು ವಿಶೇಷ.

4 ಸಿಕ್ಸರ್​ಗಳು:

ಕ್ರಿಕೆಟ್ ಲೋಕದಲ್ಲಿ ಭುವನೇಶ್ವರ್ ಕುಮಾರ್ ಒಬ್ಬ ಪರಿಣಿತ ಬೌಲರ್ ಎಂಬುದು ಎಲ್ಲರಿಗೂ ಗೊತ್ತು. ಆದರೆ ಐಪಿಎಲ್ ಇತಿಹಾಸದಲ್ಲಿ ಅವರು ಸಿಕ್ಸರ್ ಸಿಡಿಸುವುದು ಒಂದು ಅಪರೂಪದ ವಿದ್ಯಮಾನ. 2016ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡುವಾಗ ಕೊನೆಯ ಬಾರಿಗೆ ಸಿಕ್ಸರ್ ಬಾರಿಸಿದ್ದ ಭುವಿ, ಆ ಬಳಿಕ ಬೌಂಡರಿಗಳನ್ನಷ್ಟೇ ನಂಬಿದ್ದರು. ಆದರೆ ಮೇ 10, 2026 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ಬರೊಬ್ಬರಿ 10 ವರ್ಷಗಳ ನಂತರ ಭುವಿ ಸಿಕ್ಸರ್ ಸಿಡಿಸಿ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಅಲ್ಲದೆ ಈವರೆಗೆ ಅವರು ಐಪಿಎಲ್​ನಲ್ಲಿ ಬಾರಿಸಿರುವುದು ಕೇವಲ 4 ಸಿಕ್ಸರ್​ಗಳು ಮಾತ್ರ. ಆ ಸಿಕ್ಸರ್​ಗಳ ವಿವರ ಈ ಕೆಳಗಿನಂತಿದೆ…

    • 2013: ಪುಣೆ ವಾರಿಯರ್ಸ್ ಪರ (1 ಸಿಕ್ಸರ್)
    • 2015: ಸನ್‌ರೈಸರ್ಸ್ ಹೈದರಾಬಾದ್ ಪರ (1 ಸಿಕ್ಸರ್)
    • 2016: ಸನ್‌ರೈಸರ್ಸ್ ಹೈದರಾಬಾದ್ ಪರ (1 ಸಿಕ್ಸರ್)
    • 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ (1 ಸಿಕ್ಸರ್)

‘ಪರ್ಪಲ್’ ಮಿಂಚು:

ಬ್ಯಾಟಿಂಗ್‌ನಲ್ಲಿ ಮಿಂಚುವುದಕ್ಕೂ ಮುನ್ನ, ಭುವನೇಶ್ವರ್ ತಮ್ಮ ಪ್ರಧಾನ ಕೆಲಸವಾದ ಬೌಲಿಂಗ್‌ನಲ್ಲೂ ಕಿಚ್ಚು ಹಚ್ಚಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಭುವಿ ಕೇವಲ 23 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಈ ಮೂಲಕ ಒಟ್ಟು  21 ವಿಕೆಟ್‌ಗಳೊಂದಿಗೆ ಅವರು ಈ ಸೀಸನ್‌ನ ‘ಪರ್ಪಲ್ ಕ್ಯಾಪ್’ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ