AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಪಂದ್ಯಗಳಿಗೆ ಸುಸ್ತಾದ ಬಿಸಿಸಿಐ; 9 ಫೋರ್, 7 ಸಿಕ್ಸರ್​ ಸಹಿತ ಶತಕ ಸಿಡಿಸಿ ಉತ್ತರ ಕೊಟ್ಟ ಕೆಕೆಆರ್ ಬ್ಯಾಟರ್..!

Nitish Rana: ಕಳೆದ ವರ್ಷ 1 ಏಕದಿನ ಮತ್ತು 2 ಟಿ20 ಸೇರಿದಂತೆ ಟೀಂ ಇಂಡಿಯಾ ಪರ 3 ಪಂದ್ಯಗಳನ್ನಾಡಿದ್ದ ನಿತೀಶ್, ಆಯ್ಕೆ ಮಂಡಳಿಯ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು. ಆ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

3 ಪಂದ್ಯಗಳಿಗೆ ಸುಸ್ತಾದ ಬಿಸಿಸಿಐ; 9 ಫೋರ್, 7 ಸಿಕ್ಸರ್​ ಸಹಿತ ಶತಕ ಸಿಡಿಸಿ ಉತ್ತರ ಕೊಟ್ಟ ಕೆಕೆಆರ್ ಬ್ಯಾಟರ್..!
Nitish Rana
TV9 Web
| Edited By: |

Updated on: Oct 13, 2022 | 12:30 PM

Share

ಟೀಂ ಇಂಡಿಯಾಗೆ ಮರಳಲು ಹಲವು ದಿನಗಳಿಂದ ಕಾಯುತ್ತಿರುವ ಸ್ಫೋಟಕ ಬ್ಯಾಟ್ಸ್‌ಮನ್ ನಿತೀಶ್ ರಾಣಾ (Nitish Rana) ದೇಶೀ ಟೂರ್ನಿಯಲ್ಲಿ ಅಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ (Syed Mushtaq Ali Trophy) ನಿತೀಶ್ ಕೇವಲ 55 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸಿದ್ದಾರೆ. ದೆಹಲಿ ಪರ ಆಡುತ್ತಿರುವ ನಿತೀಶ್ ಎಲೈಟ್ ಗ್ರೂಪ್ ಬಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಕೇವಲ 61 ಎಸೆತಗಳಲ್ಲಿ 9 ಬೌಂಡರಿ ಮತ್ತು 7 ಸಿಕ್ಸರ್ ಒಳಗೊಂಡಂತೆ 107 ರನ್ ಸಿಡಿಸಿದರು. ಈ ಮೂಲಕ ಬಿಸಿಸಿಐ ಆಯ್ಕೆ ಮಂಡಳಿಗೆ ತಾನು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲು ಸಿದ್ದ ಎಂಬ ಸಿಗ್ನಲ್ ನೀಡಿದ್ದಾರೆ.

ಕಳೆದ ವರ್ಷ 1 ಏಕದಿನ ಮತ್ತು 2 ಟಿ20 ಸೇರಿದಂತೆ ಟೀಂ ಇಂಡಿಯಾ ಪರ 3 ಪಂದ್ಯಗಳನ್ನಾಡಿದ್ದ ನಿತೀಶ್, ಆಯ್ಕೆ ಮಂಡಳಿಯ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು. ಆ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

ಇನ್ನೂ ಈ ಪಂದ್ಯದ ಕುರಿತು ಮಾತನಾಡುವುದಾದರೆ, ಈ ಪಂದ್ಯದಲ್ಲಿ ಡೆಲ್ಲಿ ಮತ್ತು ಪಂಜಾಬ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕೇವಲ 10 ರನ್‌ಗಳಿಸುವಷ್ಟರಲ್ಲಿ ತನ್ನ ತಂಡದ ಪ್ರಮುಖ 2 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕಿಡಾಗಿತ್ತು.

ರಾಣಾ ಬ್ಯಾಟಿಂಗ್ ಪರಾಕ್ರಮ

ಆರಂಭದಲ್ಲೇ 2 ವಿಕೆಟ್‌ಗಳು ಪತನಗೊಂಡ ಬಳಿಕ ದೃತಿಗೆಡದ ನಾಯಕ ನಿತೀಶ್ ರಾಣಾ ತಮ್ಮ ಎಂದಿನ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ ತಂಡದ ಸ್ಕೋರ್ ಅನ್ನು 183 ರನ್‌ಗಳಿಗೆ ಕೊಂಡೊಯ್ದರು. ನಾಯಕ ರಾಣಾ ಅವರನ್ನು ಬಲಿಪಶು ಮಾಡುವ ಮೂಲಕ ಸಿದ್ಧಾರ್ಥ್ ಕೌಲ್ ಡೆಲ್ಲಿಗೆ ಮೂರನೇ ಹೊಡೆತ ನೀಡಿದರು. ಇವರ ಬಳಿಕ ತಂಡದ ಇನ್ನಿಂಗ್ಸ್ ನಿಭಾಯಿಸಿದ ಯಶ್ ಧುಲ್ 45 ಎಸೆತಗಳಲ್ಲಿ ಅಜೇಯ 66 ರನ್ ಗಳಿಸಿ ತಂಡದ ಮೊತ್ತವನ್ನು 191 ರನ್‌ಗಳಿಗೆ ಕೊಂಡೊಯ್ದರು.

3 ವಿಕೆಟ್ ಪಡೆದ ಅಮಿತ್ ಮಿಶ್ರಾ

ಇದೇ ವೇಳೆ ಟೂರ್ನಿಯ ಇನ್ನೊಂದು ಪಂದ್ಯದಲ್ಲಿ ಬೌಲಿಂಗ್​ನಲ್ಲಿ ಮಿಂಚಿದ ಅಮಿತ್ ಮಿಶ್ರಾ ತಂಡಕ್ಕೆ 83 ರನ್​ಗಳ ಗೆಲುವು ನೀಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ಮಿಶ್ರಾ 10 ರನ್ ನೀಡಿ ಪ್ರಮುಖ ಮೂರು ವಿಕೆಟ್ ಪಡೆದರು. ಮೊದಲು ಬ್ಯಾಟ್ ಮಾಡಿದ ಹರಿಯಾಣ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ತಂಡದ ಪರ ರಾಹುಲ್ ತೆವಾಟಿಯಾ 19 ಎಸೆತಗಳಲ್ಲಿ ಗರಿಷ್ಠ 35 ರನ್ ಗಳಿಸಿದರೆ, ಮೇಘಾಲಯದ ರಾಜೇಶ್ ಬಿಷ್ಣೋಯ್ 12 ರನ್ ನೀಡಿ 4 ವಿಕೆಟ್ ಪಡೆದರು.

ಐಪಿಎಲ್‌ನಲ್ಲಿ ಹರಾಜಾಗಲಿಲ್ಲ

ಗುರಿ ಬೆನ್ನತ್ತಿದ ಮೇಘಾಲಯ ತಂಡ ಮಿಶ್ರಾ ದಾಳಿಗೆ ನಿಲ್ಲಲಾಗದೆ 53 ರನ್‌ಗಳಿಗೆ ಆಲೌಟ್ ಆಯಿತು. ಅದರಲ್ಲೂ ಮೇಘಾಲಯದ ಐವರು ಬ್ಯಾಟ್ಸ್‌ಮನ್‌ಗಳಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಐಪಿಎಲ್​ನಲ್ಲಿ ಬಹಳ ವರ್ಷಗಳಿಂದ ದೆಹಲಿ ಪರ ಆಡಿದ್ದ ಅಮಿತ್ ಮಿಶ್ರಾ ಅವರನ್ನು ಕಳೆದ ಬಾರಿಯ ಐಪಿಎಲ್ 2022 ಹರಾಜಿನಲ್ಲಿ ಯಾವುದೇ ಫ್ರಾಂಚೈಸಿಗಳು ಖರೀದಿಸಲು ಆಸಕ್ತಿಯನ್ನು ತೋರಿಸಲಿಲ್ಲ. ಹೀಗಾಗಿ ಮಿಶ್ರಾ ಐಪಿಎಲ್​ನಿಂದ ಹೊರಬರಬೇಕಾಯಿತು.

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!