AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Syed Mushtaq Ali Trophy 2021: ಕರ್ನಾಟಕಕ್ಕೆ ಸೋಲುಣಿಸಿದ ಬೆಂಗಾಲ್

Syed Mushtaq Ali Trophy 2021: 135 ರನ್​ಗಳ ಸಾಧಾರಣ ಸವಾಲು ಬೆನ್ನತ್ತಿದ ಬೆಂಗಾಲ್ ತಂಡಕ್ಕೆ ಅಭಿಮನ್ಯು ಈಶ್ವರನ್ ಉತ್ತಮ ಆರಂಭ ಒದಗಿಸಿದ್ದರು. ಎಚ್ಚರಿಕೆ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು (51) ಅಜೇಯ ಅರ್ಧಶತಕ ಬಾರಿಸಿ ಮಿಂಚಿದರು.

Syed Mushtaq Ali Trophy 2021: ಕರ್ನಾಟಕಕ್ಕೆ ಸೋಲುಣಿಸಿದ ಬೆಂಗಾಲ್
Syed Mushtaq Ali Trophy 2021
TV9 Web
| Updated By: ಝಾಹಿರ್ ಯೂಸುಫ್|

Updated on: Nov 09, 2021 | 4:30 PM

Share

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ (Syed Mushtaq Ali Trophy 2021) ಸತತ ನಾಲ್ಕು ಗೆಲುವು ದಾಖಲಿಸಿ ಅಬ್ಬರಿಸಿದ್ದ ಕರ್ನಾಟಕ ತಂಡಕ್ಕೆ ಸೋಲುಣಿಸುವಲ್ಲಿ ಕೊನೆಗೂ ಬೆಂಗಾಲ್ ತಂಡ ಯಶಸ್ವಿಯಾಗಿದೆ. ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ದ ಗೆದ್ದ ಕರ್ನಾಟಕ, ಆ ಬಳಿಕ ಛತ್ತೀಸ್​ಗಢ್, ಸರ್ವೀಸಸ್ ಹಾಗೂ ಬರೋಡಾ ವಿರುದ್ದ ಭರ್ಜರಿ ಜಯ ಸಾಧಿಸಿತ್ತು. ಆದರೆ ಐದನೇ ಪಂದ್ಯದಲ್ಲಿ ಬೆಂಗಾಲ್ ವಿರುದ್ದ 7 ವಿಕೆಟ್​ಗಳಿಂದ ಸೋಲನುಭವಿಸುವ ಮೂಲಕ ಕರ್ನಾಟಕ ಲೀಗ್ ಹಂತವನ್ನು ಮುಗಿಸಿದೆ. ಗೌವಾಟಿಯ ನೆಹರು ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮನೀಷ್ ಪಾಂಡೆ ಬ್ಯಾಟಿಂಗ್ ಆಯ್ದುಕೊಂಡರು.

ಆದರೆ ನಾಯಕನ ನಿರೀಕ್ಷೆಯನ್ನು ಹುಸಿಗೊಳಿಸಿದಂತೆ ಮಯಾಂಕ್ ಅಗರ್ವಾಲ್ (4) ಹಾಗೂ ದೇವದತ್ ಪಡಿಕ್ಕಲ್ ಆರಂಭದಲ್ಲೇ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಮನೀಷ್ ಪಾಂಡೆ ಹಾಗೂ ಕರುಣ್ ನಾಯರ್ 61 ರನ್​ಗಳ ಉತ್ತಮ ಜೊತೆಯಾಟವಾಡಿದರು. ಅದರಂತೆ ಪಾಂಡೆ 32 ರನ್​ಗಳಿಸಿದರೆ, ಕರುಣ್ ನಾಯರ್ 44 ರನ್​ ಕಲೆಹಾಕಿದರು. ಆದರೆ ಇವರಿಬ್ಬರು ವಿಕೆಟ್ ಒಪ್ಪಿಸುತ್ತಿದ್ದಂತೆ ಮತ್ತೆ ಕರ್ನಾಟಕ ಕುಸಿತಕ್ಕೆ ಒಳಗಾಯಿತು.

ಅನಿರುದ್ಧ್ ಜೋಶಿ (14), ಶರತ್ ಬಿಆರ್​ (10), ವೈಶಾಖ್ (3) ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಕರ್ನಾಟಕ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 134 ರನ್​ಗಳಿಸಲಷ್ಟೇ ಶಕ್ತರಾದರು. ಬೆಂಗಾಲ್ ಪರ ಮುಖೇಶ್ ಕುಮಾರ್ 3 ವಿಕೆಟ್ ಪಡೆದು ಮಿಂಚಿದರು.

135 ರನ್​ಗಳ ಸಾಧಾರಣ ಸವಾಲು ಬೆನ್ನತ್ತಿದ ಬೆಂಗಾಲ್ ತಂಡಕ್ಕೆ ಅಭಿಮನ್ಯು ಈಶ್ವರನ್ ಉತ್ತಮ ಆರಂಭ ಒದಗಿಸಿದ್ದರು. ಎಚ್ಚರಿಕೆ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಮನ್ಯು (51) ಅಜೇಯ ಅರ್ಧಶತಕ ಬಾರಿಸಿ ಮಿಂಚಿದರು. ಅಷ್ಟೇ ಅಲ್ಲದೆ 18 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ ತಂಡವನ್ನು 138 ರನ್​ಗೆ ತಲುಪಿಸಿ ಗುರಿ ಮುಟ್ಟಿಸಿದರು. ಈ ಸೋಲಿನ ಹೊರತಾಗಿಯೂ ಕರ್ನಾಟಕ ತಂಡವು ಗ್ರೂಪ್-ಬಿ ಪಾಯಿಂಟ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿದ್ದು, ಹೀಗಾಗಿ ಪ್ರೀ ಕ್ವಾರ್ಟರ್ ಫೈನಲ್​ಗೆ ಪ್ರವೇಶಿಸಲಿದೆ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Virat Kohli: ಟೀಮ್ ಇಂಡಿಯಾ ಮುಂದಿನ ನಾಯಕ ಯಾರು? ಸುಳಿವು ನೀಡಿದ ವಿರಾಟ್ ಕೊಹ್ಲಿ

(Syed Mushtaq Ali Trophy 2021: Bengal beat Karnataka)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ