AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Syed Mushtaq Ali Trophy: ಕಾವೇರಪ್ಪನ ಮಾರಕ ದಾಳಿಗೆ ತತ್ತರಿಸಿದ ಜಮ್ಮು-ಕಾಶ್ಮೀರ: ಕರ್ನಾಟಕಕ್ಕೆ ಭರ್ಜರಿ ಜಯ

Syed Mushtaq Ali Trophy: 38 ಎಸೆತಗಳಲ್ಲಿ ಅಜೇಯ 48 ರನ್ ಬಾರಿಸುವ ಮೂಲಕ ಶ್ರೇಯಸ್ ಗೋಪಾಲ್ ನಿಗದಿತ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 7 ವಿಕೆಟ್ ನಷ್ಟಕ್ಕೆ 147 ಕ್ಕೆ ತಂದು ನಿಲ್ಲಿಸಿದರು.

Syed Mushtaq Ali Trophy: ಕಾವೇರಪ್ಪನ ಮಾರಕ ದಾಳಿಗೆ ತತ್ತರಿಸಿದ ಜಮ್ಮು-ಕಾಶ್ಮೀರ: ಕರ್ನಾಟಕಕ್ಕೆ ಭರ್ಜರಿ ಜಯ
vidwath kaverappa
TV9 Web
| Edited By: |

Updated on: Oct 16, 2022 | 9:54 PM

Share

Syed Mushtaq Ali Trophy: ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭಾನುವಾರ ನಡೆದ ಜಮ್ಮು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ (Karantaka) ತಂಡವು ಭರ್ಜರಿ ಜಯ ಸಾಧಿಸಿದೆ. ಚಂಡಿಗಢದ ಯದವೀಂದ್ರ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಕರ್ನಾಟಕ ತಂಡವು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ (5) ಹಾಗೂ ಮನೀಷ್ ಪಾಂಡೆ (0) ಅಬಿದ್ ಮುಷ್ತಾಕ್ ಎಸೆತಗಳಿಗೆ ಕ್ಲೀನ್​ ಬೌಲ್ಡ್ ಆಗಿ ಬೇಗನೆ ಪೆವಿಲಿಯನ್ ಸೇರಿಕೊಂಡರು. ಇದರ ಬೆನ್ನಲ್ಲೇ 22 ರನ್​ಗಳಿಸಿದ್ದ ದೇವದತ್ ಪಡಿಕ್ಕಲ್ ಪರ್ವೇಝ್ ರಸೂಲ್​ಗೆ ವಿಕೆಟ್ ಒಪ್ಪಿಸಿದರು. ಈ ಆಘಾತದಿಂದ ತಂಡ ಪಾರಾಗುಷ್ಟರಲ್ಲಿ ಅಭಿನವ್ ಮನೋಹರ್ (2) ಗೆ ಉಮ್ರಾನ್ ಮಲಿಕ್ ಪೆವಿಲಿಯನ್ ಹಾದಿ ತೋರಿಸಿದರು.

ಈ ವೇಳೆ ಜೊತೆಯಾದ ಶ್ರೇಯಸ್ ಗೋಪಾಲ್ ಹಾಗೂ ಮನೋಜ್ ಉತ್ತಮ ಜೊತೆಯಾಟವಾಡಿದರು. ಅಲ್ಲದೆ 61 ರನ್​ಗಳನ್ನು ಪೇರಿಸುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಹಂತದಲ್ಲಿ 23 ಎಸೆತಗಳಲ್ಲಿ 4 ಸಿಕ್ಸ್ ಹಾಗು 2 ಫೋರ್​ನೊಂದಿಗೆ 41 ರನ್ ಬಾರಿಸಿದ್ದ ಮನೋಜ್ ಮುಜ್ತಾಬ ಯೂಸುಫ್​ ಎಸೆತದಲ್ಲಿ ಔಟಾದರು.

ಆದರೆ ಮತ್ತೊಂದೆಡೆ 38 ಎಸೆತಗಳಲ್ಲಿ ಅಜೇಯ 48 ರನ್ ಬಾರಿಸುವ ಮೂಲಕ ಶ್ರೇಯಸ್ ಗೋಪಾಲ್ ನಿಗದಿತ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 7 ವಿಕೆಟ್ ನಷ್ಟಕ್ಕೆ 147 ಕ್ಕೆ ತಂದು ನಿಲ್ಲಿಸಿದರು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

148 ರನ್​ಗಳ ಸಾಧಾರಣ ಸವಾಲು ಪಡೆದ ಜಮ್ಮು ಕಾಶ್ಮೀರ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 5 ರನ್​ಗಳಿಸುಷ್ಟರಲ್ಲಿ ವಿದ್ವತ್ ಕಾವೇರಪ್ಪ ಹಾಗೂ ವಿ ಕೌಶಿಕ್ ನಾಲ್ಕು ವಿಕೆಟ್ ಉರುಳಿಸಿದ್ದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ವಿವ್ರಾಂತ್ ಶರ್ಮಾ 46 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 63 ರನ್ ಬಾರಿಸಿದರು. ಆದರೆ ಮತ್ತೊಮ್ಮೆ ದಾಳಿಗಿಳಿದಿ ಕೌಶಿಕ್ ವಿವ್ರಾಂತ್ ವಿಕೆಟ್ ಪಡೆಯುವ ಮೂಲಕ ಗೆಲುವನ್ನು ಖಚಿತಪಡಿಸಿದರು.

ಇತ್ತ ಮಿಂಚಿನ ದಾಳಿ ಸಂಘಟಿಸಿದ ವಿದ್ವತ್ ಕಾವೇರಪ್ಪ ಜಮ್ಮು-ಕಾಶ್ಮೀರದ ಪ್ರಮುಖ ಆಟಗಾರರಿಗೆ ಪೆವಿಲಿಯನ್ ಹಾದಿ ತೋರಿಸಿದರು. ಪರಿಣಾಮ 18.2 ಓವರ್​ಗಳಲ್ಲಿ ಜಮ್ಮು-ಕಾಶ್ಮೀರ ತಂಡವು 113 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಮಯಾಂಕ್ ಅಗರ್ವಾಲ್ ಪಡೆ 34 ರನ್​ಗಳ ಜಯ ಸಾಧಿಸಿತು. ಕರ್ನಾಟಕ ಪರ 3 ಓವರ್​ಗಳಲ್ಲಿ ಕೇವಲ 11 ರನ್ ನೀಡಿ ವಿದ್ವತ್ ಕಾವೇರಪ್ಪ 5 ವಿಕೆಟ್ ಉರುಳಿಸಿ ಮಿಂಚಿದರು. ಹಾಗೆಯೇ ವೈಶಾಖ್ ಹಾಗೂ ಕೌಶಿಕ್ ತಲಾ 2 ವಿಕೆಟ್ ಕಬಳಿಸಿದರು.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ