T Natarajan: ಟೀಮ್ ಇಂಡಿಯಾದಲ್ಲಿಲ್ಲ ಅವಕಾಶ: ಹುಟ್ಟೂರಿನಲ್ಲೇ ಸ್ವಂತ ಕ್ರಿಕೆಟ್ ಮೈದಾನ ಕಟ್ಟಿದ ಸ್ಟಾರ್ ಆಟಗಾರ

Thangasaru Natarajan: ತಮಿಳುನಾಡಿನ ಸೇಲಂ ಬಳಿಯ ಚಿನ್ನಂಪಟ್ಟಿ ಗ್ರಾಮದಲ್ಲಿ ಟೀಮ್ ಇಂಡಿಯಾ ಸ್ಟಾರ್ ಬೌಲರ್ ಟಿ. ನಟರಾಜನ್ ಎಲ್ಲ ಸೌಲಭ್ಯವುಳ್ಳ ಒಂದು ಸುಸಜ್ಜಿತ ಕ್ರಿಕೆಟ್​ ಮೈದಾನ ನಿರ್ಮಿಸಿ ತಮ್ಮ ಕನಸು ನನಸು ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

T Natarajan: ಟೀಮ್ ಇಂಡಿಯಾದಲ್ಲಿಲ್ಲ ಅವಕಾಶ: ಹುಟ್ಟೂರಿನಲ್ಲೇ ಸ್ವಂತ ಕ್ರಿಕೆಟ್ ಮೈದಾನ ಕಟ್ಟಿದ ಸ್ಟಾರ್ ಆಟಗಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Vinay Bhat

Updated on: Dec 16, 2021 | 8:45 AM

ಕಳೆದ ವರ್ಷ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (Indian Premier League) ಸ್ಟಾರ್ ಬ್ಯಾಟರ್​ಗಳನ್ನು ತಮ್ಮ ಯಾರ್ಕರ್ ಮೂಲಕ ಪೆವಿಲಿಯನ್​ಗೆ ಅಟ್ಟಿ ಎಲ್ಲರ ಹುಬ್ಬೇರುವಂತೆ ಮಾಡಿದ ಆಟಗಾರ ಟಿ. ನಟರಾಜನ್ (T Natarajan). ಇಲ್ಲಿ ನೀಡಿದ ಅಮೋಘ ಪ್ರದರ್ಶನದಿಂದ ಇವರು ಅನಿರೀಕ್ಷಿತವಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ (India vs Australia) ತಂಡಕ್ಕ ಪದಾರ್ಪಣೆ ಕೂಡ ಮಾಡಿದರು. ನಂತರ ಇಂಜುರಿಗೆ ತುತ್ತಾಗಿ ತಂಡದಿಂದ ಹೊರಗುಳಿದ ನಟರಾಜನ್​ಗೆ (T Natarajan Injury) ಅವಕಾಶವೇ ಸಿಗಲಿಲ್ಲ. ಸದ್ಯ ತವರಿನಲ್ಲಿ ನೆಲೆಸಿರುವ ಯಾರ್ಕರ್ ಕಿಂಗ್ ತಮ್ಮ ಹಳ್ಳಿಯಲ್ಲಿ ಕ್ರಿಕೆಟ್ ಮೈದಾನವೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ತಮ್ಮ ಊರಿನ ಯುವ ಪ್ರತಿಭೆಗಳ ತರಬೇತಿಗೆ ಸೂಕ್ತ ವೇದಿಕೆ ಒದಗಿಸುವುದು ಅವರ ಉದ್ದೇಶವಾಗಿದೆ. ತಮ್ಮ ಹಳ್ಳಿಯಲ್ಲಿ ಎಲ್ಲ ಸೌಲಭ್ಯವುಳ್ಳ ಒಂದು ಸುಸಜ್ಜಿತ ಕ್ರಿಕೆಟ್​ ಮೈದಾನ (NATARAJAN CRICKET GROUND) ನಿರ್ಮಿಸಿ ತಮ್ಮ ಕನಸು ನನಸು ಮಾಡಿಕೊಂಡಿದ್ದಾರೆ.

ತಮಿಳುನಾಡಿನ ಸೇಲಂ ಬಳಿಯ ಚಿನ್ನಂಪಟ್ಟಿ ಗ್ರಾಮದಲ್ಲಿ ನಟರಾಜನ್​​ ಈ ಕ್ರಿಕೆಟ್​ ಮೈದಾನ ನಿರ್ಮಿಸಿದ್ದಾರೆ. 2020ರ ಐಪಿಎಲ್​ನಲ್ಲಿ ತಮ್ಮ ಕರಾರುವಕ್​​ ಯಾರ್ಕರ್​ ದಾಳಿಯಿಂದ ದೇಶದ ಮನೆ ಮಾತಾಗಿದ್ದ ನಟರಾಜನ್​ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅನಿರೀಕ್ಷಿತವಾಗಿ ಭಾರತ ತಂಡದಲ್ಲಿ ಅವಕಾಶ ಪಡೆದು ಮೂರೂ ಮಾದರಿಯಲ್ಲೂ ಅದ್ಭುತ ಪ್ರದರ್ಶನ ತೋರಿದ್ದರು. ಆದರೆ, ಗಾಯದ ಕಾರಣ ನಂತರ ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ದೂರ ಉಳಿಯಬೇಕಾಯಿತು. ನಂತರ ಇವರನ್ನು ಆಯ್ಕೆ ಸಮಿತಿ ತಂಡಕ್ಕೆ ಸೇರಿಸಿಕೊಳ್ಳಲಿಲ್ಲ.

“ನನ್ನ ಹಳ್ಳಿಯಲ್ಲಿ ಎಲ್ಲ ವ್ಯವಸ್ಥೆಗಳನ್ನು ಒಳಗೊಂಡ ಕ್ರಿಕೆಟ್ ಮೈದಾನವನ್ನು ನಿರ್ಮಿಸಿರುವುದನ್ನು ನಿಮ್ಮ ಜೊತೆ ಹಂಚಿಕೊಳ್ಳಲು ಖುಷಿಯಾಗುತ್ತಿದೆ. ನಟರಾಜನ್ ಕ್ರಿಕೆಟ್ ಗ್ರೌಂಡ್ (ಎನ್‌ಸಿಜಿ) ಎಂಬುದಾಗಿ ಇದು ಕರೆಯಲ್ಪಡಲಿದೆ. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಭಾರತ ತಂಡದ ಪರ ಪದಾರ್ಪಣೆ ಮಾಡುವ ಮೂಲಕ ನನ್ನ ಕನಸು ನನಸಾಗಿತ್ತು. ಈ ವರ್ಷದ ಡಿಸೆಂಬರ್‌ನಲ್ಲಿ ನಾನು ಕ್ರಿಕೆಟ್ ಮೈದನವೊಂದನ್ನು ನಿರ್ಮಿಸಿರುವೆ. ದೇವರಿಗೆ ಧನ್ಯವಾದಗಳು” ಎಂದು 30 ವರ್ಷದ ನಟರಾಜನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ಐಪಿಎಲ್‌ನಿಂದ ನಟರಾಜನ್‌ರ ವೈಯಕ್ತಿಕ ಜೀವನವೂ ಬದಲಾಗಿದೆ. ದಿನಗೂಲಿ ನೌಕರರಾಗಿದ್ದ ಹೆತ್ತವರಿಗೆ ನಟರಾಜನ್ ಸ್ವಂತ ಮನೆಕಟ್ಟಿಕೊಟ್ಟಿದ್ದರು. ಸಹೋದರಿಯರಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ಇದೀಗ ಸ್ವಂತ ಕ್ರಿಕೆಟ್ ಅಕಾಡೆಮಿ ತೆರೆದು ತಮ್ಮ ಹಳ್ಳಿಯ ಇತರ ಪ್ರತಿಭಾನ್ವಿತ ಆಟಗಾರರಿಗೂ ಕ್ರಿಕೆಟ್ ಕಲಿಯಲು ಉತ್ತಮ ವೇದಿಕೆ ಒದಗಿಸಿಕೊಟ್ಟಿದ್ದಾರೆ.

ನಟರಾಜನ್​ 2020ರ ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಪರ 16 ವಿಕೆಟ್​ ಪಡೆದ ನಂತರ ಭಾರತದಾದ್ಯಂತ ಹೆಸರಾಗಿದ್ದರು. ಐಪಿಎಲ್‌ 2022 ಟೂರ್ನಿ ಸಲುವಾಗಿ ಮೆಗಾ ಆಕ್ಷನ್‌ ನಡೆಯುವುದು ಬಾಕಿಯಿದ್ದು, ಸನ್‌ರೈಸರ್ಸ್‌ ಹೈದರಾಬಾದ್‌ ತಂಡದಿಂದ ಬಿಡುಗಡೆ ಆಗಿರುವ ನಟರಾಜ್‌ನ್‌ಗೆ ಐಪಿಎಲ್‌ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಈ ಬಾರಿ ಭಾರಿ ಬೆಲೆ ಸಿಗುವ ಸಾಧ್ಯತೆ ಇದೆ. ಯಾರ್ಕರ್‌ ಸ್ಪೆಷಲಿಸ್ಟ್‌ ಆಗಿರುವ ನಟರಾಜನ್‌, ಡೆತ್‌ ಓವರ್‌ಗಳಲ್ಲಿ ಬ್ಯಾಟ್ಸ್‌ಮನ್‌ಗಳಿಗೆ ಕಬ್ಬಿಣದ ಕಡಲೆ ಆಗಿದ್ದಾರೆ. ಇದೇ ಕಾರಣಕ್ಕೆ ಫ್ರಾಂಚೈಸಿಗಳು ನಟರಾಜನ್‌ ಈ ಬಾರಿ ದೊಡ್ಡ ಮೊತ್ತಕ್ಕೆ ಸೇಲ್ ಆಗಬಹುದು.

India vs South Africa: ದಕ್ಷಿಣ ಆಫ್ರಿಕಾ ಫ್ಲೈಟ್ ಏರಿದ ಟೀಮ್ ಇಂಡಿಯಾ ಆಟಗಾರರು: ಜೊಹಾನ್ಸ್​ಬರ್ಗ್​​ಗೆ ಪ್ರಯಾಣ

(T Natarajan Team India Bowler is going to set up a cricket ground in his village Chinnappampatt)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ