ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಸೇರ್ಪಡೆ

Olympics 2028:  1900 ರಲ್ಲಿ ನಡೆದ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಒಮ್ಮೆ ಕ್ರಿಕೆಟ್ ಆಡಲಾಗಿತ್ತು. 128 ವರ್ಷಗಳ ಹಿಂದೆ ನಡೆದ ಈ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಮತ್ತು ಫ್ರಾನ್ಸ್ ನಡುವೆ ಏಕೈಕ ಪಂದ್ಯವನ್ನು ಆಡಲಾಗಿತ್ತು. ಈ ಪಂದ್ಯದಲ್ಲಿ ಫ್ರಾನ್ಸ್ ತಂಡವನ್ನು 185 ರನ್‌ಗಳಿಂದ ಸೋಲಿಸಿದ ಗ್ರೇಟ್ ಬ್ರಿಟನ್ ಚಿನ್ನದ ಪದಕ ಗೆದ್ದುಕೊಂಡಿತ್ತು.

ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಸೇರ್ಪಡೆ
Cricket-Olympics
Follow us
| Updated By: ಝಾಹಿರ್ ಯೂಸುಫ್

Updated on: Oct 16, 2023 | 4:33 PM

2028ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕ್ರಿಕೆಟ್​ ಅನ್ನು ಸೇರ್ಪಡೆಗೊಳಿಸಲಾಗಿದೆ. ಸೋಮವಾರ ನಡೆದ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ ಸಭೆಯಲ್ಲಿ ಈ ಮಹ್ವದ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಅದರಂತೆ ಲಾಸ್ ಏಂಜಲೀಸ್​ನಲ್ಲಿ ನಡೆಯಲಿರುವ 2028 ರ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಪಂದ್ಯಾಟಗಳು ಇರಲಿದೆ.

ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) ಕಾರ್ಯನಿರ್ವಾಹಕ ಮಂಡಳಿಯು ಕಳೆದ ವಾರ ಲಾಸ್ ಏಂಜಲೀಸ್ ಕ್ರೀಡಾಕೂಟದ ಸಂಘಟಕರ ಪ್ರಸ್ತಾವನೆಗೆ ಕ್ರಿಕೆಟ್ ಅನ್ನು ಸೇರಿಸಲು ಅನುಮೋದನೆ ನೀಡಿತ್ತು. ಇದೀಗ ಅಧಿಕೃತವಾಗಿ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರ್ಪಡೆಯಾಗಿದೆ.

ಟಿ20 ಮಾದರಿಯಲ್ಲಿ ಪಂದ್ಯಾಟ:

2028 ರಲ್ಲಿ ಲಾಸ್ ಏಂಜಲೀಸ್​ನಲ್ಲಿ ನಡೆಯಲಿರುವ ಒಲಿಂಪಿಕ್ಸ್​ನಲ್ಲಿ ಟಿ20 ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ. ಹೀಗಾಗಿ ಬಹು ದೇಶಗಳ ನಡುವಣ ರಣರೋಚಕ ಕಾದಾಟವನ್ನು ನಿರೀಕ್ಷಿಸಬಹುದು.

ಹಲವು ಕ್ರೀಡೆಗಳಿಗೆ ಅವಕಾಶ:

2028ರ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಜೊತೆಗೆ ಬೇಸ್‌ಬಾಲ್-ಸಾಫ್ಟ್‌ಬಾಲ್, ಫ್ಲ್ಯಾಗ್ ಫುಟ್‌ಬಾಲ್, ಲ್ಯಾಕ್ರೋಸ್ (ಸಿಕ್ಸಸ್) ಮತ್ತು ಸ್ಕ್ವಾಷ್ ಕ್ರೀಡೆಗಳಿಗೂ ಅನುಮೋದನೆ ನೀಡಲಾಗಿದೆ.

ಅದರಂತೆ 1900 ರಿಂದ ಮೊದಲ ಬಾರಿಗೆ ಕ್ರಿಕೆಟ್, ಬೇಸ್‌ಬಾಲ್-ಸಾಫ್ಟ್‌ಬಾಲ್, ಲ್ಯಾಕ್ರೋಸ್ (ಸಿಕ್ಸಸ್), ಸ್ಕ್ವಾಷ್ ಮತ್ತು ಫ್ಲ್ಯಾಗ್ ಫುಟ್‌ಬಾಲ್ ಒಲಿಂಪಿಕ್ಸ್‌ನ ಭಾಗವಾಗಲಿದೆ.

ಮುಂಬರುವ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಇಲ್ಲ:

2024 ರಲ್ಲಿ ಪ್ಯಾರಿಸ್​ನಲ್ಲಿ ಮುಂಬರುವ ಒಲಿಂಪಿಕ್ಸ್​ ನಡೆಯಲಿದ್ದು, ಈ ಕ್ರೀಡಾಕೂಟದಲ್ಲಿ ಕ್ರಿಕೆಟ್​ ಪಂದ್ಯಾಟಗಳಿರುವುದಿಲ್ಲ. ಏಕೆಂದರೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) ಕಾರ್ಯನಿರ್ವಾಹಕ ಮಂಡಳಿಯು 2028 ರ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ಗೆ ಅವಕಾಶ ನೀಡಲಾಗಿದೆ. ಹೀಗಾಗಿ ಈ ಪಂದ್ಯಾವಳಿಯನ್ನು ವೀಕ್ಷಿಸಲು ಇನ್ನು ಐದು ವರ್ಷಗಳ ಕಾಲ ಕಾಯಬೇಕಿದೆ.

1900 ರಲ್ಲಿತ್ತು ಕ್ರಿಕೆಟ್:

1900 ರಲ್ಲಿ ನಡೆದ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಒಮ್ಮೆ ಕ್ರಿಕೆಟ್ ಆಡಲಾಗಿತ್ತು. 128 ವರ್ಷಗಳ ಹಿಂದೆ ನಡೆದ ಈ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಮತ್ತು ಫ್ರಾನ್ಸ್ ನಡುವೆ ಏಕೈಕ ಪಂದ್ಯವನ್ನು ಆಡಲಾಗಿತ್ತು. ಈ ಪಂದ್ಯದಲ್ಲಿ ಫ್ರಾನ್ಸ್ ತಂಡವನ್ನು 185 ರನ್‌ಗಳಿಂದ ಸೋಲಿಸಿದ ಗ್ರೇಟ್ ಬ್ರಿಟನ್ ಚಿನ್ನದ ಪದಕ ಗೆದ್ದುಕೊಂಡಿತ್ತು. ಇದೀಗ 128 ವರ್ಷಗಳ ಬಳಿಕ ಮತ್ತೊಮ್ಮೆ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಕಾದಾಟಕ್ಕೆ ಅವಕಾಶ ದೊರೆಯುತ್ತಿದೆ.

ಕಾಮನ್​ವೆಲ್ತ್​ ಕ್ರೀಡಾಕೂಟದಲ್ಲಿ ಕ್ರಿಕೆಟ್ ಕಾದಾಟ:

ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 22ನೇ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್​ನ್ನು ಸೇರಿಸಲಾಗಿತ್ತು. ಈ  ಗೇಮ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಚಿನ್ನದ ಪದಕ ಗೆದ್ದರೆ, ಭಾರತ ತಂಡ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು.

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು