ಟಾಸ್ ಗೆದ್ದ ಭಾರತ; ಟಿ20ಗೆ ನಮನ್ ಧೀರ್ ಪಾದಾರ್ಪಣೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ T20 ಪಂದ್ಯದಲ್ಲಿ ನಮನ್ ಧೀರ್ ಅಂತರರಾಷ್ಟ್ರೀಯ T20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಟೀಂ ಇಂಡಿಯಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ನಮನ್ ಧೀರ್ ಈ ಹಿಂದೆ 64 ಎಸೆತಗಳಲ್ಲಿ 173 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಅವರ ನಿರ್ಭೀತ ಬ್ಯಾಟಿಂಗ್ ಮತ್ತು IPL ಸಾಧನೆಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಆಡುವ ಹನ್ನೊಂದರ ಬಳಗದ ವಿವರಗಳೂ ಇವೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಟಿ20 ಪಂದ್ಯ ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂಧರ ಬಳಗವೂ ಹೊರಬಿದ್ದಿದೆ. ಅದರಂತೆ ಸರಣಿಯ ಮೊದಲ ಪಂದ್ಯದಲ್ಲಿಯೇ ಯುವ ಆಟಗಾರ ನಮನ್ ಧೀರ್ಗೆ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ. ನಮನ್ ಧೀರ್ ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯೊಂದಿಗೆ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.
64 ಎಸೆತಗಳಲ್ಲಿ 173 ರನ್
ನಮನ್ ಧೀರ್ ಈಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ತಮ್ಮ ನಿರ್ಭೀತ ಬ್ಯಾಟಿಂಗ್, ಲಾಂಗ್ ಹಿಟ್ಟಿಂಗ್ ಮತ್ತು ಚುರುಕಾದ ಫೀಲ್ಡಿಂಗ್ ಮೂಲಕ ಸುದ್ದಿಯಾಗಿದ್ದರು. ಆದಾಗ್ಯೂ, ದೇಶೀಯ ಟಿ20 ಲೀಗ್ ಆದ ಶೇರ್-ಎ-ಪಂಜಾಬ್ ಲೀಗ್ 2026 ರಲ್ಲಿ ಅಮೃತಸರ ಸುರ್ಮಾ ಪರ ಆಡಿದ್ದ ನಮನ್ ಧೀರ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ನಮನ್ ಧೀರ್ ಕೇವಲ 10 ಪಂದ್ಯಗಳಲ್ಲಿ 217.6 ಸ್ಟ್ರೈಕ್ ರೇಟ್‌ನಲ್ಲಿ 655 ರನ್ ಗಳಿಸಿದ್ದರು. ಆ ಪಂದ್ಯಾವಳಿಯಲ್ಲಿ 49 ಬೌಂಡರಿಗಳು ಮತ್ತು 49 ಸಿಕ್ಸರ್‌ಗಳನ್ನು ಹೊಡೆದಿದ್ದರು. ಆ ಪಂದ್ಯಾವಳಿಯಲ್ಲಿ ಮೊಹಾಲಿ ಕಿಂಗ್ಸ್ ವಿರುದ್ಧ ಆಡಿದ ಅವರು ಕೇವಲ 64 ಎಸೆತಗಳಲ್ಲಿ 173 ರನ್ ಬಾರಿಸುವ ಮೂಲಕ ಐತಿಹಾಸಿಕ ಮತ್ತು ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಹಾಗೆಯೇ ಪಂದ್ಯಾವಳಿಯಾದ್ಯಂತ ಎರಡು ಶತಕಗಳು ಮತ್ತು ಮೂರು ಅರ್ಧಶತಕಗಳನ್ನು ಸಿಡಿಸಿದ್ದರು. ಉಳಿದಂತೆ ಎರಡು ತಂಡಗಳ ಆಡುವ ಹನ್ನೊಂದರ ಬಳಗ ಈ ಕೆಳಗಿನಂತಿದೆ.
🚨 Toss and Team News 🚨
#TeamIndia have won the toss and elected to bowl in the 1️⃣st #INDvWI T20I.
Here’s a look at the Playing XI 🙌
Updates ▶️ https://t.co/2czVyKWreK
@mflone_ https://t.co/mgtnslR6GZ
— BCCI (@BCCI) October 6, 2026
ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅರ್ಶ್ದೀಪ್ ಸಿಂಗ್, ಮಯಾಂಕ್ ಯಾದವ್, ನಮನ್ ಧೀರ್.
ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ನಾಯಕ), ಕಾಮಿಲ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್, ಶೆರ್ಫೇನ್ ರುದರ್‌ಫೋರ್ಡ್, ರೊಮಾರಿಯೊ ಶೆಫರ್ಡ್, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಅಕೇಲ್ ಹೊಸೈನ್, ಶಮರ್ ಸ್ಪ್ರಿಂಗರ್ ಮತ್ತು ಶಮರ್ ಜೋಸೆಫ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:02 pm, Tue, 6 October 26




